ಮುಂಬೈ: ಹಾವಿನ ಜೊತೆ ಟಿಕ್‍ಟಾಕ್ ವಿಡಿಯೋ ಮಾಡಿದ್ದಕ್ಕೆ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ ಘಟನೆ ಮಹಾರಾಷ್ಟ್ರದ ಮುಂಬೈನಲ್ಲಿ ನಡೆದಿದೆ.
ಯುವಕರು ಕೈಯಲ್ಲಿ ಹಾವನ್ನು ಹಿಡಿದುಕೊಂಡು ಟಿಕ್‍ಟಾಕ್ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ವಿಡಿಯೋದಲ್ಲಿ ಯುವಕರು ಹಾವಿಗೆ ಮುತ್ತು ಕೊಟ್ಟಿದ್ದಾರೆ. ಅಲ್ಲದೆ ಕೈಯಲ್ಲಿ ಹಿಡಿದುಕೊಂಡು ಓಡಾಡಿದ್ದರು.
Advertisement
ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಸಾಕಷ್ಟು ಜನ ಅರಣ್ಯ ವಿಭಾಗಕ್ಕೆ ದೂರು ನೀಡಿದ್ದರು. ದೂರಿನ ಹಿನ್ನೆಲೆಯಲ್ಲಿ ಅರಣ್ಯ ವಿಭಾಗದ ಅಧಿಕಾರಿಗಳು ಇಬ್ಬರು ಯುವಕರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
Advertisement
Advertisement
ವಿಡಿಯೋದಲ್ಲಿದ್ದ ಹಾವು ತುಂಬಾ ವಿಷಪೂರಿತ ಹಾವಾಗಿದ್ದು, ಕಚ್ಚಿದರೆ ಸಾವನ್ನಪ್ಪುವ ಸಾಧ್ಯತೆ ಹೆಚ್ಚಿದೆ. ಟಿಕ್‍ಟಾಕ್‍ನಲ್ಲಿ ಇಂತಹ ವಿಡಿಯೋ ಮಾಡುವವರ ಹೆಸರನ್ನು ನನಗೆ ಹೇಳಿ ಎಂದು ಅರಣ್ಯ ವಿಭಾಗದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Advertisement
ಅಧಿಕಾರಿಗಳು ಇಬ್ಬರು ಯುವಕರನ್ನು ವಿಚಾರಣೆ ನಡೆಸುತ್ತಿದ್ದಾರೆ. ಅಲ್ಲದೆ ಈ ವಿಡಿಯೋ ಮಾಡುವುದಕ್ಕೆ ನಿಮಗೆ ಹಾವು ಸಿಕ್ಕಿದ್ದು ಎಲ್ಲಿ? ವಿಡಿಯೋ ಮಾಡಿದ ನಂತರ ಆ ಹಾವನ್ನು ಏನೂ ಮಾಡಿದ್ದೀರಿ ಪ್ರಶ್ನಿಸಿದ್ದಾರೆ.
ಅಧಿಕಾರಿಗಳ ಪ್ರಶ್ನೆಗೆ ಯುವಕರು, ಭರತ್ ಕೇಣೆ ನಮಗೆ ಹಾವನ್ನು ಹಿಡಿಯಲು ಹೇಳಿಕೊಟ್ಟಿದ್ದನು ಎಂದು ಉತ್ತರಿಸಿದ್ದಾರೆ. ಕೆಲ ದಿನಗಳ ಹಿಂದೆ ಹಾವು ಕಡಿದು ಭರತ್ ಕೇಣೆ ಮೃತಪಟ್ಟಿದ್ದಾನೆ.