ಮಂಡ್ಯ: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ (Bengaluru-Mysuru Expressway) ದಿನೇ ದಿನೇ ಅಪಘಾತಗಳ (Accident) ಸಂಖ್ಯೆ ಹೆಚ್ಚಾಗುತ್ತಿದ್ದು, ಇದೀಗ ಜನ ಎಕ್ಸ್‌ಪ್ರೆಸ್ ವೇ ಎನ್ನುವ ಬದಲು ಸಾವಿನ ಹೈವೇ ಎಂದು ಕರೆಯುತ್ತಿದ್ದಾರೆ. ಭಾನುವಾರ ಮುಂಜಾನೆ ಈ ಹೆದ್ದಾರಿಯಲ್ಲಿ ಮತ್ತೊಂದು ಭೀಕರ ಅಪಘಾತ ನಡೆದಿದ್ದು, ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಮಂಡ್ಯ (Mandya) ಜಿಲ್ಲೆಯ ಮದ್ದೂರು (Maddur) ಪಟ್ಟಣದ ಹೆದ್ದಾರಿಯ ಫ್ಲೈಓವರ್ (Flyover) ಮೇಲೆ ಅಪರಿಚಿತ ವಾಹನಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಬೈಕ್ ಸವಾರರು ಮೃತಪಟ್ಟಿದ್ದಾರೆ. ಮೃತ ಯುವಕರನ್ನು ಮಣಿ(25) ಹಾಗೂ ಜನಾರ್ದನ ಪೂಜಾರಿ(21) ಎಂದು ಗುರುತಿಸಲಾಗಿದ್ದು, ಮೃತ ಯುವಕರಿಬ್ಬರು ಕೋಲಾರ ಹಾಗೂ ಕೊಪ್ಪಳ ಜಿಲ್ಲೆಯವರೆಂದು ಗುರುತು ಪತ್ತೆಯಾಗಿದೆ. ಇದನ್ನೂ ಓದಿ: Breaking- ಡಾ.ರಾಜ್ ಕುಟುಂಬ ಕುಡಿ ನಟ ಧ್ರುವನ್ ಗಂಭೀರ ಅಪಘಾತ : ಐಸಿಯುನಲ್ಲಿ ಚಿಕಿತ್ಸೆ
ಇವರು ಬೆಂಗಳೂರಿನ (Bengaluru) ಖಾಸಗಿ ಕಂಪನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಬೆಂಗಳೂರಿನಿಂದ ಮೈಸೂರಿಗೆ ತೆರಳುವ ವೇಳೆ ಈ ಘಟನೆ ನಡೆದಿದೆ. ಅಪರಿಚಿತನ ವಾಹನಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಹೆಂಡತಿ ಮೊಬೈಲ್‌ನಲ್ಲಿ ಮಾತಾಡ್ತಾಳೆ ಅಂತ ಮಕ್ಕಳನ್ನು ಕೊಂದ ಪಾಪಿ ತಂದೆ
ಮೃತ ಜನಾರ್ದನ ಪೂಜಾರಿ ಕೊಪ್ಪಳ ಜಿಲ್ಲೆಯ ಲಿಂಗದಮಂಡಿ ಗ್ರಾಮದ ಯುವಕನಾಗಿದ್ದ. ಘಟನಾ ಸ್ಥಳಕ್ಕೆ ಮದ್ದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತ ಯುವಕರ ಶವವನ್ನು ಮದ್ದೂರು ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದೆ. ಈ ಕುರಿತು ಮದ್ದೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಇದನ್ನೂ ಓದಿ: ಪತ್ನಿಯ ಜೊತೆ ಅಕ್ರಮ ಸಂಬಂಧ – ಪ್ರಿಯಕರನ ಕತ್ತು ಸೀಳಿ ರಕ್ತ ಕುಡಿದ ಗಂಡ