ಪಂಕ್ಚರ್ ಆಗಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ – ಸ್ಥಳದಲ್ಲೇ ಇಬ್ಬರ ದುರ್ಮರಣ

Public TV
1 Min Read
HASSAN ACCIDENT

ಹಾಸನ: ರಸ್ತೆಯಲ್ಲಿ ಪಂಕ್ಚರ್ ಆಗಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರೊಂದು ಡಿಕ್ಕಿ (Accident) ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಆಲೂರಿನ ಕೂಡಿಗೆಯಲ್ಲಿ ನಡೆದಿದೆ.

ಅಪಘಾತದಲ್ಲಿ ಮೃತಪಟ್ಟವರನ್ನು ಪ್ರದೀಪ್ (30), ಗುರು (25) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಂಜಾನೆ ಹೋಟೆಲ್ ಒಂದರ ಪೂಜೆಗೆ ಹೊರಟಿದ್ದ ವೇಳೆ, ಕೂಡಿಗೆ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಈ ಅಪಘಾತ ನಡೆದಿದೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಖತರ್ನಾಕ್ ಕಳ್ಳನ ಬಂಧನ – 31 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ವಶಕ್ಕೆ

ಟೈರ್ ಪಂಕ್ಚರ್ ಆಗಿ ರಸ್ತೆ ಮಧ್ಯೆಯೇ ಟಿಂಬರ್ ತುಂಬಿದ್ದ ಲಾರಿ ನಿಂತಿತ್ತು. ಮುಂಜಾನೆ ಮಂಜು ಆವರಿಸಿದ್ದ ಕಾರಣ ಕಾರಿನ ಚಾಲಕನಿಗೆ ಲಾರಿ ನಿಂತಿರುವುದು ಗಮನಕ್ಕೆ ಬಂದಿಲ್ಲ. ಇದರಿಂದ ಈ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕಾರು ರಸ್ತೆಯಲ್ಲಿ ಉರುಳಿ ಬಿದ್ದಿದೆ.

ಆಲೂರು ಪೊಲೀಸ್ (Police) ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಆಳವಾದ ಕಂದಕಕ್ಕೆ ಉರುಳಿದ ಕ್ಯಾಬ್ – 7 ಮಂದಿ ದುರ್ಮರಣ

Share This Article