– ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ನನ್ನದ್ದಲ್ಲ ಎಂದ ಪರಮೇಶ್ವರ್
– ಆರೋಪಿಗಳ ಹೇಳಿಕೆಯನ್ನು ಹೇಳಿದ್ದೆ ಎಂದ ಸಚಿವ
ಮಂಗಳೂರು/ ಬೆಂಗಳೂರು: ಕುಡುಪು (Kudupu) ಕ್ರಿಕೆಟ್ ಮೈದಾನದಲ್ಲಿ ವ್ಯಕ್ತಿಯೊಬ್ಬನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 20 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಏ.27ರ ಭಾನುವಾರ ಸಂಜೆ 5:30ರ ಸುಮಾರಿಗೆ ಮಂಗಳೂರಿನ (Manglauru) ಹೊರವಲಯದ ಕುಡುಪು ಭಟ್ರಕಲ್ಲುರ್ಟಿ ದೈವಸ್ಥಾನದ ಸಮೀಪ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿತ್ತು. ತಕ್ಷಣ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಅನುಮಾನಾಸ್ಪದ ಅಸ್ವಾಭಾವಿಕ ಸಾವು ಪ್ರಕರಣ ದಾಖಲಿಸಿದ್ದರು. ಮೃತದೇಹದ ಮರಣೋತ್ತರ, ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಮೃತನ ಬೆನ್ನಿಗೆ ಬಲವಾದ ಹೊಡೆತ ಬಿದ್ದಿದೆ. ಗಂಭೀರ ಗಾಯಗೊಂಡ ಕಾರಣದಿಂದ ಉಂಟಾದ ರಕ್ತಸ್ರಾವ, ಶಾಕ್ ಮತ್ತು ಸೂಕ್ತ ಸಮಯದಲ್ಲಿ ಸರಿಯಾದ ಚಿಕಿತ್ಸೆ ಸಿಗದಿರುವುದರಿಂದ ಮರಣ ಸಂಭವಿಸಿರುವುದು ಕಂಡುಬಂದಿದೆ. ಇದನ್ನೂ ಓದಿ: ತಮಿಳು ನಟ ಅಜಿತ್ ಕುಮಾರ್ ಆಸ್ಪತ್ರೆಗೆ ದಾಖಲು
ಅಪರಿಚಿತ ಮೃತದೇಹ ಅನುಮಾನಾಸ್ಪದವಾಗಿ ಸಿಕ್ಕಿದ ಹಿನ್ನಲೆಯಲ್ಲಿ ಬಿಸಿ ಬಿಸಿ ಚರ್ಚೆಗಳು ಅದಾಗಲೇ ಆರಂಭವಾಗಿತ್ತು. ಹಿಂದೂ ಯುವಕರು ಮುಸ್ಲಿಂ ಯುವಕನನ್ನು ಗುಂಪು ಹತ್ಯೆ ನಡೆಸಿದ್ದಾರೆ. ಇದೊಂದು ವ್ಯವಸ್ಥಿತ ಕೊಲೆ ಅಂತಾ ಸಿಪಿಐಎಂ, ಎಸ್‌ಡಿಪಿಐ ಪಕ್ಷಗಳು ಆರೋಪ ಮಾಡಿತ್ತು. ಈ ಬಗ್ಗೆ ತನಿಖೆ ನಡೆಸಿದಾಗ ಪೊಲೀಸರಿಗೆ ನೈಜ ವಿಚಾರ ಗೊತ್ತಾಗಿದೆ. ಇದನ್ನೂ ಓದಿ: ಜನಗಣತಿಯ ಜೊತೆಗೆ ದೇಶಾದ್ಯಂತ ಜಾತಿಗಣತಿ: ಕೇಂದ್ರ ಸರ್ಕಾರ
ಕೊಲೆಯಾಗಿದ್ದು ಯಾಕೆ?
ಏ.27ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಕುಡುಪು ಭಟ್ರಕಲ್ಲುರ್ಟಿ ದೈವಸ್ಥಾನದ ಬಳಿ ಮೈದಾನದಲ್ಲಿ ಕ್ರಿಕೆಟ್ ಪಂದ್ಯಾವಳಿ ನಡೆಯುತ್ತಿತ್ತು. ಈ ಸಂದರ್ಭ ವಿಚಾರವೊಂದಕ್ಕೆ ಮೃತ ವ್ಯಕ್ತಿಗೆ ಅಲ್ಲಿದ್ದ ಸಚಿನ್ ಎಂಬಾತನೊಂದಿಗೆ ವಾಗ್ವಾದ ನಡೆದಿತ್ತು. ಈ ಸಂದರ್ಭ ಸಚಿನ್ ಆತನಿಗೆ ಥಳಿಸಿದ್ದು, ಬಳಿಕ ಅಲ್ಲಿದ್ದ 25ರಿಂದ 30 ಮಂದಿಯ ಗುಂಪು ಅಪರಿಚಿತ ವ್ಯಕ್ತಿಗೆ ಕೈಯಿಂದ ಮತ್ತು ಕಟ್ಟಿಗೆಯಿಂದ ಹೊಡೆದು, ಕಾಲಿನಿಂದ ಯದ್ವಾತದ್ವ ತುಳಿದು ಹಲ್ಲೆ ನಡೆಸಿದ್ದಾರೆ. ಈ ಸಂದರ್ಭ ಕೆಲವರು ತಡೆಯಲು ಯತ್ನಿಸಿದರೂ, ಆತನ ಮೇಲೆ ನಿರಂತರ ಹಲ್ಲೆ ನಡೆಸಿದ ಕಾರಣ ಗಂಭೀರವಾಗಿ ಗಾಯಗೊಂಡು ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ಮಂಗಳೂರು ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ಪ್ರತಿಕ್ರಿಯಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ನಿವಾಸಿ ದೀಪಕ್ ಕುಮಾರ್ ಎಂಬುವವರು 19 ಮಂದಿ ಮತ್ತು ಇತರರ ವಿರುದ್ಧ ನೀಡಿದ ದೂರಿನ ಆಧಾರದಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 37/2025, ಕಲಂ: 103(2), 115(2), 189(2), 190, 191(1), 191(3), 240 ಕಾಯ್ದೆಯಡಿ ಕೇಸ್ ದಾಖಲಾಗಿತ್ತು. ಇದನ್ನೂ ಓದಿ: 5 ತಿಂಗಳ ಬಳಿಕ ಇಸ್ಕಾನ್‌ನ ಚಿನ್ಮಯ್ ಕೃಷ್ಣದಾಸ್‌ಗೆ ಬಾಂಗ್ಲಾ ಹೈಕೋರ್ಟ್ ಜಾಮೀನು
ಗುಂಪು ಹತ್ಯೆಯ ಹಿನ್ನೆಲೆಯಲ್ಲಿ ಮಂಗಳೂರು ನಗರದಲ್ಲಿ ಇದೇ ಮೊದಲ ಬಾರಿಗೆ 2023 (BNS 2023) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಈ ಕೃತ್ಯದಲ್ಲಿ ಸುಮಾರು 25ಕ್ಕೂ ಅಧಿಕ ಮಂದಿ ಭಾಗವಹಿಸಿರುವ ಸಂಶಯವಿದೆ. ಮೊದಲಿಗೆ 15 ಮಂದಿ ಹಾಗೂ ಮತ್ತೆ ಐವರು ಸೇರಿ ಒಟ್ಟು 20 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಉಳಿದ ಆರೋಪಿಗಳನ್ನು ಶೀಘ್ರದಲ್ಲಿ ಪತ್ತೆ ಮಾಡಿ ಬಂಧಿಸಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಈ ಪ್ರಕರಣದಲ್ಲಿ ಮಾಜಿ ಕಾರ್ಪೊರೇಟರ್ ಪತಿಯ ಹೆಸರು ಥಳಕು ಹಾಕಿಕೊಂಡಿದೆ. ಈ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ನಿಗದಿಯಾಗಿದ್ದ ಮೋದಿ ರಷ್ಯಾ ಪ್ರವಾಸ ದಿಢೀರ್ ರದ್ದು!
ಯಾವುದೇ ದಾಖಲೆ, ವಿಳಾಸ ಇಲ್ಲದ ಮೃತ ವ್ಯಕ್ತಿಯ ಗುರುತು ಪತ್ತೆ ಬಗ್ಗೆ ಪೊಲೀಸರು ಸಾಕಷ್ಟು ಪರಿಶ್ರಮವಹಿಸಿ 2 ದಿನದ ಬಳಿಕ ಗುರುತು ಪತ್ತೆಯಾಗಿದೆ. ಮಂಗಳೂರಿಗೆ ವಲಸೆ ಕಾರ್ಮಿಕನಾಗಿ ಬಂದಿದ್ದ ಕೇರಳದ ವಯನಾಡಿನ ಮನವಂತವಾಡಿಯ ಪುಲ್ಪಲ್ಲಿ ನಿವಾಸಿ ಮಹಮ್ಮದ್ ಅಶ್ರಫ್ ಎಂದು ಗುರುತಿಸಲಾಗಿದೆ.
ಇದೀಗ ಆತನ ಸಂಬಂಧಿಕರು ಮಂಗಳೂರಿಗೆ ಬಂದು ಮೃತದೇಹ ಅಶ್ರಫ್‌ನದ್ದೇ ಎಂದು ಗುರುತಿಸಿದ್ದಾರೆ. ಮೃತದೇಹವನ್ನು ಅಶ್ರಫ್ ಕುಟುಂಬಸ್ಥರಿಗೆ ಇಂದು ಹಸ್ತಾಂತರ ಮಾಡಲಾಗಿದ್ದು, ಸಂಬಂಧಿಕರು ಮೃತದೇಹವನ್ನು ಕೊಂಡು ಹೋಗಿದ್ದಾರೆ. ಕೊಲೆಯಾದ ಅಶ್ರಫ್ ಪಾನಮತ್ತನಾಗಿ ಪಾಕಿಸ್ಥಾನಕ್ಕೆ ಜೈಕಾರ ಕೂಗಿದ್ದಕ್ಕೆ ಗುಂಪು ಆತನ ಮೇಲೆ ಬಿದ್ದಿರುವ ಬಗ್ಗೆಯೂ ಸುದ್ದಿ ಹರಿದಾಡುತ್ತಿದೆ. ಒಟ್ಟಿನಲ್ಲಿ ಯುವಕರ ಬಲವಾದ ಏಟಿಗೆ ಅಮಾಯಕ ಪ್ರಾಣ ಚೆಲ್ಲಿರೋದು ನಿಜಕ್ಕೂ ಖಂಡನೀಯವಾಗಿದೆ. ಇದನ್ನೂ ಓದಿ: LKG-UKG ದಾಖಲಾತಿಗೆ ವಯಸ್ಸಿನ ಮಿತಿ ಸಡಿಲ ಇಲ್ಲ: ಶಿಕ್ಷಣ ಇಲಾಖೆ ಸ್ಪಷ್ಟನೆ
ಹೇಳಿಕೆ ನನ್ನದ್ದಲ್ಲ:
ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕಾರಣ ಎಂದು ಮಂಗಳವಾರ ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಬುಧವಾರ ಸ್ಪಷ್ಟನೆ ನೀಡಿದ ಗೃಹ ಸಚಿವ ಪರಮೇಶ್ವರ್ (G.Parameshwar), ಪಾಕಿಸ್ತಾನ್ ಜಿಂದಾಬಾದ್ ಹೇಳಿಕೆ ನನ್ನದಲ್ಲ, ಕೊಲೆ ಆರೋಪಿಗಳದ್ದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ದ್ವೇಷರಹಿತ ಸಮಾಜಕ್ಕೆ ಬಸವಣ್ಣ ಸಂದೇಶ ಅಗತ್ಯ: ದಕ್ಷಿಣ ಕನ್ನಡ ಜಿಪಂ ಸಿಇಒ
ಗುಂಪು ಹಲ್ಲೆ ನಡೆಸಿದ್ದವರ ಪೈಕಿ ಈವರೆಗೆ 20 ಮಂದಿಯನ್ನು ಬಂಧಿಸಲಾಗಿದೆ. ಅವರನ್ನು ಪೊಲೀಸರು ವಿಚಾರಣೆ ಮಾಡುವಾಗ ಮೃತಪಟ್ಟ ಯುವಕ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದ ಎಂದು ಹೇಳಿದರು.