ಪಾಟ್ನಾ: ಶಾಲೆಯಲ್ಲಿ ಮಧ್ಯಾಹ್ನ ವೇಳೆ ನೀಡಲಾಗಿದ್ದ ಉಪಹಾರ ಸೇವಿಸಿ 20 ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ಬಿಹಾರದ ಮಾಧೇಪುರ ಜಿಲ್ಲೆಯ ಕಾಶಿಪುರದಲ್ಲಿ ಬೆಳಕಿಗೆ ಬಂದಿದೆ.
ಮಕ್ಕಳು ಸೇವಿಸಿದ ಆಹಾರ ಕಲುಷಿತಗೊಂಡಿದ್ದರಿಂದ ಅಸ್ವಸ್ಥಗೊಂಡಿದ್ದಾರೆ ಎನ್ನಲಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಹುತೇಕ ಮಕ್ಕಳು ಸಹಜ ಸ್ಥಿತಿಗೆ ಮರಳಿದ್ದು, ಇಬ್ಬರು ಮಕ್ಕಳಿಗೆ ಇನ್ನೂ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರಾದ ಡಾ.ಮುಖೇಶ್‌ಕುಮಾರ್ ತಿಳಿಸಿದ್ದಾರೆ. ಇದನ್ನೂ ಓದಿ: ಆಂಬುಲೆನ್ಸ್‌ಗೆ ದಾರಿ ಕಲ್ಪಿಸಲು ತಮ್ಮ ಬೆಂಗಾವಲು ವಾಹನ ನಿಲ್ಲಿಸಿದ ಯೋಗಿ ಆದಿತ್ಯನಾಥ್
Advertisement
Advertisement
ಘಟನೆ ಸಂಬಂಧ ಶಾಲಾ ಶಿಕ್ಷಕಿ ಬಬಿತಾ ಕುಮಾರಿ ಅವರಿಂದ ಮಾಹಿತಿ ಪಡೆದ ಬ್ಲಾಕ್ ಶಿಕ್ಷಣಾಧಿಕಾರಿ ಗುಣಾನಂದ್‌ಸಿಂಗ್, ಮಕ್ಕಳಿಗೆ ಮಧ್ಯಾಹ್ನ ನೀಡಲಾದ ಆಹಾರವು ಹಳಸಾಗಿತ್ತು ಎಂದು ತಿಳಿದು ಬಂದಿದೆ. ಈ ಕುರಿತು ಉನ್ನತ ಅಧಿಕಾರಿಗಳಿಗೆ ದೂರು ನೀಡಲಾಗುವುದು. ಅಲ್ಲದೆ, ಇನ್ನು ಮುಂದೆ ಅಂತಹ ಗುಣಮಟ್ಟದ ಆಹಾರ ನೀಡದಂತೆ ಕ್ರಮವಹಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: 20 ಕಡೆ ದಾಳಿ, ಸಾವಿರಾರು ಜನರ ಹತ್ಯೆ – ಮೋದಿಗೆ ಕೊಲೆ ಬೆದರಿಕೆ
Advertisement
ಸರ್ಕಾರೇತರ ಸಂಸ್ಥೆಯೊಂದು ಮಕ್ಕಳಿಗೆ ಮಧ್ಯಾಹ್ನದ ಉಪಹಾರ ನೀಡಲು ಪ್ರಾರಂಭಿಸಿದಾಗಿನಿಂದಲೂ ಕಳಪೆ ಗುಣಮಟ್ಟದ ಆಹಾರವನ್ನು ಪೂರೈಸುತ್ತಿದೆ. ಈ ಬಗ್ಗೆ ಪೋಷಕರು ಶಾಲಾ ಮುಖ್ಯಸ್ಥರಿಗೆ ದೂರು ನೀಡಿದ್ದರು. ಅಲ್ಲದೆ, ಶಾಲೆಗಳಲ್ಲಿ ಬೇಯಿಸಿದ ಆಹಾರವನ್ನೇ ನೀಡುವಂತೆ ಮನವಿ ಮಾಡಿದ್ದರು. ಕ್ರಮ ಕೈಗೊಳ್ಳದ ಪರಿಣಾಮ ಇಂದು ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರಿದೆ ಎಂದು ಪೋಷಕರು ವಿಷಾದ ವ್ಯಕ್ತಪಡಿಸಿದ್ದಾರೆ.ಶಾಲೆ, ಪಾಟ್ನಾ, ಬಿಹಾರ, ಶಿಕ್ಷಣಾಧಿಕಾರಿ.
Advertisement