ಗಾಂಧೀನಗರ: ಗುಜರಾತ್ (Gujarat) ರಾಜ್‌ಕೋಟ್‌ನ (Rajkot) ಗೇಮಿಂಗ್ ಝೋನ್‌ನಲ್ಲಿ ಶನಿವಾರ ಸಂಜೆ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ 20 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಜ್‌ಕೋಟ್‌ನ ಗೇಮ್ ಝೋನ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ತಕ್ಷಣದ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಾಗಿ ಮುನ್ಸಿಪಲ್ ಕಾರ್ಪೊರೇಷನ್ ಹಾಗೂ ಆಡಳಿತಕ್ಕೆ ಸೂಚನೆ ನೀಡಲಾಗಿದೆ. ಗಾಯಾಳುಗಳಿಗೆ ತಕ್ಷಣದ ಚಿಕಿತ್ಸೆಗೆ ಆದ್ಯತೆ ನೀಡಲು ಸೂಚನೆ ನೀಡಲಾಗಿದೆ ಎಂದು ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಹೇಳಿದ್ದಾರೆ. ಇದನ್ನೂ ಓದಿ: ಮಹಿಳೆಯ ಧ್ವನಿಯಲ್ಲಿ ಮಾತನಾಡಿ 7 ವಿದ್ಯಾರ್ಥಿನಿಯರ ಅತ್ಯಾಚಾರ – ಆರೋಪಿ ಸಿಕ್ಕಿಬಿದ್ದಿದ್ದೇ ರೋಚಕ
ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ. ನಾವು ಸಾಧ್ಯವಾದಷ್ಟು ಶವಗಳನ್ನು ಹೊರತೆಗೆಯಲು ಪ್ರಯತ್ನಿಸುತ್ತಿದ್ದೇವೆ. ಸದ್ಯಕ್ಕೆ ಸುಮಾರು 20 ಶವಗಳನ್ನು ಹೊರತೆಗೆಯಲಾಗಿದೆ. ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ರಾಜ್‌ಕೋಟ್ ಪೊಲೀಸ್ ಕಮಿಷನರ್ ಮಾಹಿತಿ ನೀಡಿದ್ದಾರೆ.
ಬೆಂಕಿ ಅವಘಡ ಸಂಬಂಧ ತನಿಖೆ ನಡೆಸಲಾಗುವುದು. ಗೇಮಿಂಗ್ ವಲಯವು ಯುವರಾಜ್ ಸಿಂಗ್ ಸೋಲಂಕಿ ಎಂಬ ವ್ಯಕ್ತಿಯ ಮಾಲೀಕತ್ವದಲ್ಲಿದೆ. ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ನಾವು ಅಗ್ನಿಶಾಮಕ ದಳದ ಅಧಿಕಾರಿಗಳೊಂದಿಗೆ ಏನು ಕ್ರಮ ತೆಗೆದುಕೊಳ್ಳಬೇಕು ಎಂಬುದರ ಕುರಿತು ಚರ್ಚಿಸುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿ ಮೇಲೆ ಕಲ್ಲು ತೂರಾಟ
ವಲಯದೊಳಗೆ ಬೆಂಕಿಯನ್ನು ನಿಯಂತ್ರಿಸಿದ ನಂತರ ನಿಖರವಾದ ಸಾವು-ನೋವುಗಳ ಸಂಖ್ಯೆಯನ್ನು ಕಂಡುಹಿಡಿಯಲು ಸಾಧ್ಯವಾಗುತ್ತದೆ. ನಾವು ಬೆಂಕಿ ಅವಘಡದ ಕಾರಣವನ್ನು ಸಹ ತನಿಖೆ ಮಾಡುತ್ತೇವೆ. ನಗರದ ಎಲ್ಲಾ ಗೇಮಿಂಗ್ ವಲಯಗಳನ್ನು ಮುಚ್ಚುವಂತೆ ಸಂದೇಶ ನೀಡಲಾಗಿದೆ ಎಂದು ಅಗ್ನಿಶಾಮಕ ದಳ ಸಿಬ್ಬಂದಿ ಹೇಳಿದ್ದಾರೆ.