ಶಿಮ್ಲಾ: ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ (Rain) ಹಿಮಾಚಲ ಪ್ರದೇಶದಲ್ಲಿ (Himachal Pradesh) ಪ್ರವಾಹದ (Flood) ಸ್ಥಿತಿ ಉಂಟಾಗಿದೆ. ಧುಮ್ಮಿಕ್ಕುತ್ತಿರುವ ನದಿಗಳಲ್ಲಿ ಸೇತುವೆ, ಮನೆಗಳು ಕೊಚ್ಚಿಕೊಂಡು ಹೋಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ 7 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಸೋಲನ್, ಶಿಮ್ಲಾ, ಸಿರ್ಮೌರ್, ಕುಲು, ಮಂಡಿ, ಕಿನ್ನೌರ್ ಮತ್ತು ಲಾಹೌಲ್ನಲ್ಲಿ ಮುಂದಿನ 24 ಗಂಟೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆ ಈ 7 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
Advertisement
Advertisement
ಇನ್ನುಳಿದಂತೆ ಉನಾ, ಹಮೀರ್ಪುರ, ಕಾಂಗ್ರಾ ಹಾಗೂ ಚಂಬಾದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಾತ್ರವಲ್ಲದೇ ಮಂಡಿ, ಕಿನ್ನೌರ್ ಹಾಗೂ ಲಾಹೌಲ್ ಭಾಗದಲ್ಲಿ ಹಠಾತ್ ಪ್ರವಾಹ ಎಚ್ಚರಿಕೆಯನ್ನು ನೀಡಲಾಗಿದೆ. ಇದನ್ನೂ ಓದಿ: ಭಾರೀ ಮಳೆ.. ಹಿಮಪಾತ – ಲಡಾಕ್ನಲ್ಲಿ ಬೆಂಗಳೂರಿಗರು ಲಾಕ್
Advertisement
Advertisement
ಹಿಮಾಚಲದಲ್ಲಿ ಭಾರೀ ಮಳೆಗೆ ಈಗಾಗಲೇ 12ಕ್ಕೂ ಹೆಚ್ಚು ಪ್ರಮುಖ ಸೇತುವೆಗಳೇ ಹಾನಿಗೊಳಗಾಗಿವೆ. ಭೂಕುಸಿತ, ವಿದ್ಯುತ್ ವ್ಯತ್ಯಯ, ರಸ್ತೆಗಳಿಗೂ ಹಾನಿಯಾಗಿದೆ. ರಾಜ್ಯದಲ್ಲಿ ಕಳೆದ 48 ಗಂಟೆಗಳಲ್ಲಿ ವರುಣನ ಅಬ್ಬರಕ್ಕೆ 20 ಮಂದಿ ಬಲಿಯಾಗಿದ್ದಾರೆ. ಇದನ್ನೂ ಓದಿ: ಮನಾಲಿ ಪ್ರವಾಸಕ್ಕೆಂದು ತೆರಳಿದ್ದ ಮೈಸೂರಿನ ಪ್ರವಾಸಿಗರು ನಾಪತ್ತೆ
Web Stories