ಮುಂಬೈ: ವಾಣಿಜ್ಯ ಎಲ್‌ಪಿಜಿ ಪೂರೈಕೆಯಲ್ಲಿನ ಅಡಚಣೆಯಿಂದಾಗಿ ಮುಂಬೈನಲ್ಲಿ ಸುಮಾರು 20% ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳು ಬಂದ್ ಆಗಿವೆ ಎಂದು ನಗರದ ಹೋಟೆಲ್ ಮತ್ತು ರೆಸ್ಟೋರೆಂಟ್ ಸಂಘ AHAR ತಿಳಿಸಿದೆ.
ಅನಿಲ ಪೂರೈಕೆ ಪರಿಸ್ಥಿತಿ ಸುಧಾರಿಸದಿದ್ದರೆ ಮುಂದಿನ ಎರಡು ದಿನಗಳಲ್ಲಿ ನಗರದ ಶೇ.50ರಷ್ಟು ಹೋಟೆಲ್‌ಗಳು ಮುಚ್ಚುವ ಸಾಧ್ಯತೆಗಳಿವೆ ಎಂದು ಸಂಘ ಎಚ್ಚರಿಸಿದೆ. AHAR ಪ್ರಕಾರ, ಕಾರ್ಯನಿರ್ವಹಿಸುತ್ತಿರುವ ರೆಸ್ಟೋರೆಂಟ್‌ಗಳ ಸಂಖ್ಯೆಯು ಪ್ರಸ್ತುತ ಎಷ್ಟು LPG ಸ್ಟಾಕ್ ಅನ್ನು ಹೊಂದಿವೆ ಎಂಬುದರ ಆಧಾರದ ಮೇಲೆ ಅವಲಂಬಿತವಾಗಿವೆ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ, ಮುಂಬರುವ ದಿನಗಳಲ್ಲಿ ಮುಂಬೈನ ಅರ್ಧದಷ್ಟು ಹೋಟೆಲ್‌ಗಳು ಮುಚ್ಚುವ ಸಾಧ್ಯತೆಗಳಿವೆ ಎಂದು ಸಂಘ ಹೇಳಿದೆ. ಇದನ್ನೂ ಓದಿ: ದೊಡ್ಡಬಳ್ಳಾಪುರ | ಕೇಬಲ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ – 15 ಗಂಟೆ ಕಳೆದ್ರೂ ಆರದ ಬೆಂಕಿ
ಹೋಟೆಲ್‌ಗಳನ್ನು ಸಾಮೂಹಿಕವಾಗಿ ಮುಚ್ಚುವ ಬಗ್ಗೆ ಸಂಘವು ಯಾವುದೇ ಅಧಿಕೃತ ನಿರ್ಧಾರವನ್ನು ತೆಗೆದುಕೊಂಡಿಲ್ಲ ಎಂದು AHAR ಸ್ಪಷ್ಟಪಡಿಸಿದೆ. ರೆಸ್ಟೋರೆಂಟ್‌ಗಳನ್ನು ತೆರೆದಿಡುವ ಅಥವಾ ತಾತ್ಕಾಲಿಕವಾಗಿ ಮುಚ್ಚುವ ನಿರ್ಧಾರವನ್ನು ವೈಯಕ್ತಿಕವಾಗಿ ಹೋಟೆಲ್ ಮಾಲೀಕರು ಹಾಗೂ ಆ ಸಂಸ್ಥೆಗಳಲ್ಲಿ ಅನಿಲ ಪೂರೈಕೆಯ ಲಭ್ಯತೆಯ ಮೇಲೆ ಆಧರಿಸಿರುತ್ತದೆ.
ಅನಿಲ ಅಲಭ್ಯತೆಯ ಕುರಿತಾದ ಮಾಹಿತಿಯಿಂದಾಗಿ ಹಲವಾರು ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳು ಈಗಾಗಲೇ ಮೆನು ಐಟಂಗಳನ್ನು ಕಡಿತಗೊಳಿಸಲು ಅಥವಾ ಕಾರ್ಯಾಚರಣೆಯನ್ನು ಸೀಮಿತಗೊಳಿಸಲು ನಿರ್ಧರಿಸಿವೆ ಎಂದು ತಿಳಿದುಬಂದಿವೆ.ಇದನ್ನೂ ಓದಿ: ಅರುಣಾಚಲ ಪ್ರದೇಶದಲ್ಲಿ ಕಾಡ್ಗಿಚ್ಚು – ಬೆಂಕಿ ನಂದಿಸಲು ಹೆಲಿಕಾಪ್ಟರ್‌ನಿಂದ 66,000 ಲೀಟರ್ ನೀರು ಚೆಲ್ಲಿದ ವಾಯುಪಡೆ

