ಕೆನಡಾ: 20 ವರ್ಷದ ಭಾರತೀಯ ವಿದ್ಯಾರ್ಥಿಯನ್ನು (Indian Origin Student) ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಕೆನಡಾದ (Canada) ಎಡ್ಮಂಟನ್‌ನ (Edmonton) ಅಪಾರ್ಟ್‌ಮೆಂಟ್‌ವೊಂದರಲ್ಲಿ ನಡೆದಿದೆ.
ಸೆಕ್ಯೂರಿಟಿ ಗಾರ್ಡ್ ಆಗಿಯೂ ಕೆಲಸ ಮಾಡುತ್ತಿದ್ದ ಹರ್ಷನದೀಪ್ ಸಿಂಗ್‌ನನ್ನು ಶುಕ್ರವಾರ ಮಧ್ಯರಾತ್ರಿ 12:30ರ ಸುಮಾರಿಗೆ ಶೂಟೌಟ್ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಶಂಕಿತರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂಧಿತರನ್ಮು ಇವಾನ್ ರೈನ್ ಮತ್ತು ಜುಡಿತ್ ಸಾಲ್ಟ್ಯಾಕ್ಸ್ ಎಂದು ಗುರುತಿಸಲಾಗಿದೆ. ಮೂವರು ಸದಸ್ಯರ ಗ್ಯಾಂಗ್ ಹರ್ಷನದೀಪ್‌ಗೆ ಗುಂಡಿಕ್ಕಿ ಹತ್ಯೆಗೈಯ್ಯುವ ದೃಶ್ಯ ಸಿಸಿಟಿವಿ ವೀಡಿಯೋದಲ್ಲಿ ರೆಕಾರ್ಡ್ ಆಗಿದೆ. ಇದನ್ನೂ ಓದಿ: ಕಾಫಿ ತೋಟದಲ್ಲಿ ಕಾಡಾನೆಗಳ ಹಿಂಡು – ಭಯಕ್ಕೆ ತೋಟದ ಕಡೆ ತೆರಳದ ಕಾರ್ಮಿಕರು
Advertisement
Advertisement
ಕೊಲೆಗೆ ನಿರ್ದಿಷ್ಟ ಕಾರಣ ತಿಳಿದು ಬಂದಿಲ್ಲ. ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಹರ್ಷನದೀಪ್ ಸಿಂಗ್‌ನನ್ನು ಆಸ್ಪತ್ರಗೆ ದಾಖಲಿಸಿದ್ದಾರೆ. ಅಷ್ಟು ಹೊತ್ತಿಗಾಗಲೇ ಹರ್ಷನದೀಪ್ ಮೃತಪಟ್ಟಿದ್ದರು ಎಂದು ವೈದ್ಯರು ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷೆಯನ್ನು ಸೋಮವಾರ ನಿಗದಿಪಡಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಸಿಎಂ ಪಟ್ಟಕ್ಕೆ ಕುಮಾರಸ್ವಾಮಿ, ಅಶೋಕ್ ಕನಸು – 5 ವರ್ಷ ನಮ್ಮದೇ ಸರ್ಕಾರ ಎಂದ ಸಿದ್ದರಾಮಯ್ಯ
Advertisement