ಚಂಡೀಗಢ: ಕಾರಿನಿಂದ ಹೊರಗೆ ಎಳೆದುಕೊಂಡು ಹೋಗಿ 21 ವರ್ಷದ ಯುವತಿಯ ಮೇಲೆ 10 ಮಂದಿ ಕಾಮುಕರು ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವ ಘಟನೆ ಪಂಜಾಬ್ ನ ಲುಧಿಯಾನದಲ್ಲಿ ನಡೆದಿದೆ.
ಸಿಂದ್ವಾನ್ ಕಾಲುವೆಯ ತೀರದಲ್ಲಿರುವ ಇಸವಲ್ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಸಂತ್ರಸ್ತೆ ಕಾರಿನಲ್ಲಿ ತನ್ನ ಸ್ನೇಹಿತನೊಂದಿಗೆ ಪ್ರಯಾಣಿಸುತ್ತಿದ್ದ ವೇಳೆ ಆರೋಪಿಗಳು ಎಳೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement
Advertisement
ಏನಿದು ಪ್ರಕರಣ?
ಸಂತ್ರಸ್ತೆ ಲುಧಿಯಾನದಿಂದ ಇಸವಲ್ ಗ್ರಾಮಕ್ಕೆ ತನ್ನ ಸ್ನೇಹಿತನ ಜೊತೆ ಶನಿವಾರ ರಾತ್ರಿ ಕಾರಿನಲ್ಲಿ ಹೋಗುತ್ತಿದ್ದಳು. ಕಾರ್ ಜಗಾನ್ ನಲ್ಲಿ ನಿಂತಿದೆ. ಈ ವೇಳೆ ಮೂರು ಬೈಕಿನಲ್ಲಿ ಬಂದ ವ್ಯಕ್ತಿಗಳು ಕಾರನ್ನು ಹಿಂಬಾಲಿಸುತ್ತಿದ್ದರು. ಕಾರು ನಿಲ್ಲಿಸಿದ ತಕ್ಷಣ ವ್ಯಕ್ತಿಗಳು ಕಲ್ಲು ಮತ್ತು ಇಟ್ಟಿಗೆಗಳಿಂದ ಕಾರಿನ ಮೇಲೆ ದಾಳಿ ಮಾಡಿದ್ದಾರೆ. ಬಳಿಕ ಸಂತ್ರಸ್ತೆಯ ಗೆಳೆಯನ ಮೇಲೂ ಹಲ್ಲೆ ಮಾಡಿದ್ದಾರೆ ಎಂದು ಪೊಲೀಸ್ ಅಧೀಕ್ಷಕ ತರುಣ್ ರಟ್ಟನ್ ತಿಳಿಸಿದ್ದಾರೆ.
Advertisement
ಆಕ್ರಮಣಕಾರರು ಯುವತಿಯನ್ನು ಕಾರಿನಿಂದ ಹೊರಗೆ ಎಳೆದುಕೊಂಡು ಕಾಲುವೆ ತೀರದ ಖಾಲಿ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಸುಮಾರು ಆರರಿಂದ ಏಳು ಜನರು ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ
Advertisement
ಸಂತ್ರಸ್ತೆಯನ್ನು ಸಿವಿಲ್ ಆಸ್ಪತ್ರೆಯ ವೈದ್ಯಕೀಯ ಪರೀಕ್ಷೆಗೆಂದು ಒಳಪಡಿಸಲಾಗಿತ್ತು. ವೈದ್ಯರು ಸಾಮೂಹಿಕ ಅತ್ಯಾಚಾರ ನಡೆದಿರುವುದನ್ನು ದೃಢಪಡಿಸಿದ್ದಾರೆ. ಸದ್ಯಕ್ಕೆ ಈ ಕುರಿತು ಐಪಿಸಿ ಸೆಕ್ಷನ್ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಶೋಧಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv