20 ವರ್ಷದ ವಿದ್ಯಾರ್ಥಿ ಮ್ಯಾರಥಾನ್‌ನಲ್ಲಿ ಓಡಿದ ಬಳಿಕ ಹೃದಯಾಘಾತದಿಂದ ಸಾವು

Public TV
1 Min Read
marathon

ಚೆನ್ನೈ: ಮ್ಯಾರಥಾನ್‌ನಲ್ಲಿ (Marathon) ಭಾಗವಹಿಸಿದ 20 ವರ್ಷದ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ (Heart Attack) ಸಾವನ್ನಪ್ಪಿರುವ ಆಘಾತಕಾರಿ ಘಟನೆ ಭಾನುವಾರ ತಮಿಳುನಾಡಿನ (Tamil Nadu) ಮಧುರೈನಲ್ಲಿ (Madurai) ನಡೆದಿದೆ.

ಮೃತನನ್ನು ಕಲ್ಲಕುರಿಚಿಯ ದಿನೇಶ್ ಕುಮಾರ್ ಎಂದು ಗುರುತಿಸಲಾಗಿದ್ದು, ಆತ ಭಾನುವಾರ ನಡೆದ ಉತಿರಂ 2023 ರಕ್ತದಾನ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ. ಈ ಕಾರ್ಯಕ್ರಮಕ್ಕೆ ಆರೋಗ್ಯ ಸಚಿವ ಸುಬ್ರಮಣಿಯನ್ ಹಾಗೂ ವಾಣಿಜ್ಯ ತೆರಿಗೆ ಮತ್ತು ನೋಂದಣಿ ಸಚಿವ ಪಿ ಮೂರ್ತಿ ಅವರು ಚಾಲನೆ ನೀಡಿದ್ದರು.

costochondritis man grabbing chest heart attack2

ಮುಂಜಾನೆ ಮ್ಯಾರಥಾನ್‌ನಲ್ಲಿ ಭಾಗವಹಿಸಿದ ಬಳಿಕ ವಿದ್ಯಾರ್ಥಿ 1 ಗಂಟೆಗಳ ಕಾಲ ಆರೋಗ್ಯವಾಗಿಯೇ ಇದ್ದಂತೆ ಕಾಣಿಸುತ್ತಿದ್ದ ಎಂದು ಆತನ ಸಹಪಾಠಿಗಳು ತಿಳಿಸಿದ್ದಾರೆ. ಬಳಿಕ ಆತ ಮೂರ್ಛೆ ಹೋಗಿದ್ದು, ತಕ್ಷಣ ಆತನನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಇದನ್ನೂ ಓದಿ: ಬೆಂಗ್ಳೂರಿನ ಬಾಡಿಗೆ ಮನೆಯಲ್ಲಿದ್ದುಕೊಂಡೇ ಡ್ರಗ್ಸ್ ಸಪ್ಲೈ ಮಾಡ್ತಿದ್ದ ನೈಜೀರಿಯನ್ ಪ್ರಜೆ ಅರೆಸ್ಟ್!

ಆಸ್ಪತ್ರೆಯ ಅಧಿಕಾರಿಗಳು ವಿದ್ಯಾರ್ಥಿಯನ್ನು 8:45ರ ಸುಮಾರಿಗೆ ತುರ್ತು ವಿಭಾಗಕ್ಕೆ ದಾಖಲಿಸಿದ್ದಾರೆ. ಅಲ್ಲಿ ಆತನಿಗೆ ಕೃತಕ ಉಸಿರಾಟದ ಬೆಂಬಲ ನೀಡಲಾಗಿದೆ. ಆದರೆ ಇದಾದ ಕೆಲವೇ ಗಂಟೆಗಳಲ್ಲಿ ಬೆಳಗ್ಗೆ 10:10ರ ಸುಮಾರಿಗೆ ಆತ ಹೃದಯ ಸ್ಥಂಭನಕ್ಕೆ ಒಳಗಾಗಿದ್ದಾನೆ. ಆತನನ್ನು ವೈದ್ಯರು ಬದುಕಿಸಲು ಪ್ರಯತ್ನಿಸಿದರೂ ಬೆಳಗ್ಗೆ 10:45ಕ್ಕೆ ಆತ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ದೂರು ದಾಖಲಿಸಿಕೊಂಡಿದ್ದು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ದಿನೇಶ್ ಕುಮಾರ್ ಮಧುರೈನ ಖಾಸಗಿ ಕಾಲೇಜಿನಲ್ಲಿ ಎಂಜಿನಿಯರಿಂಗ್ ಪದವಿ ವ್ಯಾಸಂಗ ಮಾಡುತ್ತಿದ್ದು, ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಕುಸಿದು ಬಿದ್ದ ಜಿಮ್ ಛಾವಣಿ- 10 ಮಂದಿ ದುರ್ಮರಣ

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article