ಕೊಲಂಬೋ: ಶ್ರೀಲಂಕಾ ಇಂಗ್ಲೆಂಡ್ ನಡುವಿನ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಸ್ಪಿನ್ನರ್‌ಗಳು 20 ವರ್ಷದ ಹಿಂದಿನ ದಾಖಲೆಯನ್ನು ಮುರಿದಿದ್ದಾರೆ.
ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಎರಡು ತಂಡಗಳ ಸ್ಪಿನ್ನರ್ ಗಳು ಒಟ್ಟು 82 ವಿಕೆಟ್ ಗಳನ್ನು ಪಡೆಯುದರ ಮೂಲಕ ವಿಶೇಷ ಸಾಧನೆ ಮಾಡಿದ್ದಾರೆ.
Advertisement
Advertisement
ಈ ಹಿಂದೆ 1998ರಲ್ಲಿ ಶ್ರೀಲಂಕಾ ಮತ್ತು ನ್ಯೂಜಿಲೆಂಡ್ ನಡುವಿನ ಟೆಸ್ಟ ಪಂದ್ಯದಲ್ಲಿ ಸ್ಪಿನ್ನರ್‌ಗಳು 79 ವಿಕೆಟ್ ಗಳನ್ನು ಪಡೆದಿದ್ದರು.ಈ ಸರಣಿಯನ್ನು ಇಂಗ್ಲೆಂಡ್ 2-0 ಅಂತರದಿಂದ ಗೆದ್ದುಕೊಂಡಿದೆ. ಮೊದಲ ಟೆಸ್ಟ್ ಪಂದ್ಯವನ್ನು 211 ರನ್ ಗಳಿಂದ ಗೆದ್ದುಕೊಂಡರೆ, ಎರಡನೇ ಪಂದ್ಯವನ್ನು 57 ರನ್ ಗಳಿಂದ ಗೆದ್ದುಕೊಂಡಿತ್ತು.
Advertisement
ಮೂರನೇ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಇಂಗ್ಲೆಂಡ್ 336 ರನ್ ಗಳಿಸಿದ್ದರೆ ಶ್ರೀಲಂಕಾ 240 ರನ್ ಗಳಿಸಿತ್ತು. ಎರಡನೇ ಇನ್ನಿಂಗ್ಸ್ ಬ್ಯಾಟಿಂಗ್ ಮುಂದುವರಿಸಿರುವ ಇಂಗ್ಲೆಂಡ್ ಇತ್ತೀಚಿನ ವರದಿ ಬಂದಾಗ 199 ರನ್ ಗಳೊಂದಿಗೆ ಇಂಗ್ಲೆಂಡ್ ಮುನ್ನಡೆಯಲ್ಲಿದೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv