ಜೈಪುರ: ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ (Sachin Pilot) ಮತ್ತು ಸಾರಾ ಅಬ್ದುಲ್ಲಾ (Sara Abdullah) ಸುಮಾರು 20 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದ್ದಾರೆ. ಮುಂಬರುವ ರಾಜಸ್ಥಾನದ ಚುನಾವಣೆಯಲ್ಲಿ (Rajasthan Election) ಸ್ಪರ್ಧಿಸಲು ಪೈಲಟ್ ಅವರು ತಮ್ಮ ನಾಮಪತ್ರವನ್ನು ಸಲ್ಲಿಸಿದ್ದು, ಅದರಲ್ಲಿ ಅವರ ವಿಚ್ಛೇದನ ನೀಡಿರುವ ವಿಷಯ ಬಹಿರಂಗವಾಗಿದೆ.
ಸಚಿನ್ ಪೈಲಟ್ ಅವರು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ (NC) ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಪುತ್ರಿ ಸಾರಾ ಅಬ್ದುಲ್ಲಾ ಅವರನ್ನು ಮದುವೆಯಾಗಿದ್ದರು. ಇದೀಗ ದಂಪತಿ ಬೇರ್ಪಟ್ಟಿರುವುದು ಮೊದಲ ಬಾರಿಗೆ ಬಹಿರಂಗವಾಗಿದೆ. ಟೋಂಕ್ ಕ್ಷೇತ್ರದಲ್ಲಿ ಸ್ಪರ್ಧಿಸಲು ಸಲ್ಲಿಸಿರುವ ಅಫಿಡವಿಟ್‌ನಲ್ಲಿ ಸಂಗಾತಿಯ ವಿವರವನ್ನು ಕೋರಿದ ಅಂಕಣದಲ್ಲಿ ವಿಚ್ಛೇದಿತ ಎಂದು ಉಲ್ಲೇಖಿಸಿದ್ದಾರೆ.
Advertisement
Advertisement
ಸಚಿನ್ ಪೈಲಟ್ ಮತ್ತು ಸಾರಾ ಅಬ್ದುಲ್ಲಾ 2004 ರಲ್ಲಿ ವಿವಾಹವಾಗಿದ್ದು, ಅವರಿಗೆ ಆರನ್ ಮತ್ತು ವೆಹಾನ್ ಎಂಬ ಇಬ್ಬರು ಗಂಡು ಮಕ್ಕಳಿದ್ದಾರೆ. ಪೈಲಟ್ ತಮ್ಮ ಅಫಿಡವಿಟ್‌ನಲ್ಲಿ ತಮ್ಮ ಇಬ್ಬರೂ ಪುತ್ರರು ತಮ್ಮ ಅವಲಂಬಿತರು ಎಂದು ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಕೋವಿಡ್‌ನಿಂದ ಹೆಚ್ಚುತ್ತಿದ್ಯಾ ಹೃದಯಾಘಾತ?- ಹೃದ್ರೋಗ ತಜ್ಞರು ಹೇಳೋದು ಏನು?
Advertisement
Advertisement
ಕಳೆದ 5 ವರ್ಷಗಳಲ್ಲಿ ಪೈಲಟ್ ಅವರ ಸಂಪತ್ತು ದ್ವಿಗುಣಗೊಂಡಿದೆ. 2018 ರಲ್ಲಿ ಅವರ ಒಟ್ಟು ಆಸ್ತಿಯ ಮೌಲ್ಯ ಸುಮಾರು 3.8 ಕೋಟಿ ರೂ. ಇದ್ದು, 2023ರ ವೇಳೆಗೆ ಅದು 7.5 ಕೋಟಿ ರೂ.ಗಳ ಅಂದಾಜು ಮೌಲ್ಯವನ್ನು ತಲುಪಿದೆ. ನವೆಂಬರ್ 25 ರಂದು ರಾಜಸ್ಥಾನ ವಿಧಾನಸಭೆ ಚುನಾವಣೆ ನಡೆಯಲಿದ್ದು, ಡಿಸೆಂಬರ್ 3 ರಂದು ಫಲಿತಾಂಶ ಪ್ರಕಟವಾಗಲಿದೆ. ಇದನ್ನೂ ಓದಿ: ಪಬ್ಲಿಕ್ ಹೀರೋ ಬಾದಾಮಿಯ ಶಿವ ರೆಡ್ಡಿ ವಾಸನ್‌ಗೆ ರಾಜ್ಯೋತ್ಸವ ಪ್ರಶಸ್ತಿ
Web Stories