ರಾಯಚೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಕಾರ್ಯಕ್ರಮಕ್ಕಾಗಿ ರಾಯಚೂರಿನಿಂದ (Raichuru) ಕೊಪ್ಪಳಕ್ಕೆ (Koppal) 200 ಬಸ್ಸುಗಳು ತೆರಳಿವೆ. ಈ ಹಿನ್ನೆಲೆ ರಾಯಚೂರಿನಲ್ಲಿ ಬಸ್‌ಗಳಿಲ್ಲದೇ ಪ್ರಯಾಣಿಕರು ಪರದಾಡುವಂತಾಗಿತ್ತು.
ಕೊಪ್ಪಳದಲ್ಲಿ ಸಿಎಂ ಸಿದ್ದರಾಮಯ್ಯನವರಿಂದ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕು ಸ್ಥಾಪನೆ ಕಾರ್ಯಕ್ರಮವಿದ್ದ ಹಿನ್ನೆಲೆ ರಾಯಚೂರಿನ ಒಟ್ಟು 662 ಬಸ್ಸುಗಳ ಪೈಕಿ 200 ಬಸ್ಸುಗಳನ್ನು ಕೊಪ್ಪಳಕ್ಕೆ ಕಳುಹಿಸಲಾಗಿದೆ. ಹೀಗಾಗಿ ರಾಯಚೂರು ಕೇಂದ್ರ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಬಸ್ಸಿಗಾಗಿ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು.ಇದನ್ನೂ ಓದಿ: 2 ವರ್ಷದೊಳಗಿನ ಮಕ್ಕಳಿಗೆ ಸಿರಪ್ ನೀಡುವಂತಿಲ್ಲ – ರಾಜ್ಯ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ
ಬಸ್ಸುಗಳ ಕೊರತೆಯಿಂದಾಗಿ ಗಂಟೆಗೊಂದು ಬಸ್ಸುಗಳು ಬರುತ್ತಿದ್ದು, ಜನದಟ್ಟಣೆ ಹೆಚ್ಚಾಗಿ ಪ್ರಯಾಣಿಕರಲ್ಲಿ ನೂಕು ನುಗ್ಗಲು ಉಂಟಾಗಿತ್ತು. ಇದರಿಂದ ಬೇಸತ್ತ ಪ್ರಯಾಣಿಕರು ಸಾರಿಗೆ ಇಲಾಖೆಗೆ ಶಾಪ ಹಾಕುತ್ತಿದ್ದಾರೆ.
ಇನ್ನೂ ಮಾಹಿತಿ ಇಲ್ಲದೆ ಬಸ್ ನಿಲ್ದಾಣಕ್ಕೆ ಬರುತ್ತಿರುವ ಪ್ರಯಾಣಿಕರು ಬೆಳಗ್ಗೆಯಿಂದಲೂ ಪರದಾಟ ನಡೆಸಿದ್ದಾರೆ.ಇದನ್ನೂ ಓದಿ: ಚಿಕ್ಕಮಗಳೂರು | ಒಂದೂವರೆ ವರ್ಷದಿಂದ ರೈತರಿಗೆ ಕಾಟ ಕೊಡ್ತಿದ್ದ ಪುಂಡಾನೆ ಸೆರೆ