ಬೆಂಗಳೂರು: ಆರೋಗ್ಯ ಸೇವೆ ಮತ್ತು ಕೃಷಿ ಕ್ಷೇತ್ರಗಳಲ್ಲಿ ಜಾಗತಿಕ ಮಟ್ಟದ ಕಂಪನಿಯಾಗಿರುವ ಜರ್ಮನಿ ಮೂಲದ ಬೇಯರ್ ಸೈನ್ಸ್ ಅಂಡ್ ಇನ್ನೋವೇಶನ್ ಬೆಂಗಳೂರಿನ (Bengaluru) ಸಮೀಪ ತನ್ನ ಅತ್ಯಾಧುನಿಕ ಉತ್ಪಾದನಾ ಸ್ಥಾವರ ಅಭಿವೃದ್ಧಿಗೆ 200 ಕೋಟಿ ರೂ. ಹೂಡಿಕೆ ಮಾಡಲಿದ್ದು, ಈ ಸಂಬಂಧ ಸರ್ಕಾರದೊಂದಿಗೆ ಒಡಂಬಡಿಕೆಗೆ ಸಹಿ ಹಾಕಿದೆ.
ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ (MB Patil) ಅವರ ಸಮ್ಮುಖದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಸೆಲ್ವಕುಮಾರ್ ಮತ್ತು ಬೇಯರ್ ಕಂಪನಿಯ ಸಿಎಫ್ಒ ವಿನೀತ್ ಜಿಂದಾಲ್ ಒಡಂಬಡಿಕೆಗೆ ಸಹಿ ಹಾಕಿದರು. ಇದನ್ನೂ ಓದಿ:ಪೆಟ್ರೋ ಲ್ನಲ್ಲಿ ಶೇ.20 ಕ್ಕಿಂತಲೂ ಹೆಚ್ಚು ಎಥೆನಾಲ್ ಮಿಶ್ರಣ, ತೈಲ ಕಂಪನಿಗಳಿಗೆ ಲಾಭ: ರಿಜ್ವಾನ್ ಅರ್ಷದ್
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಬೇಯರ್ ಕಂಪನಿಯು ಮುಂದಿನ 7 ವರ್ಷಗಳಲ್ಲಿ ಹಂತಹಂತವಾಗಿ ಈ ಹೂಡಿಕೆ ಮಾಡಲಿದೆ. ಇದರಿಂದ 220 ಉದ್ಯೋಗಗಳು ಸೃಷ್ಟಿಯಾಗಲಿವೆ. ತಾವು ಇತ್ತೀಚೆಗೆ ರಾಜ್ಯಕ್ಕೆ ಬಂಡವಾಳ ಆಕರ್ಷಿಸಲು ನೆದರ್ಲೆಂಡ್ಸ್ ಪ್ರವಾಸ ಕೈಗೊಂಡಿದ್ದಾಗ ಆಮ್ಸ್ಟರ್ ಡ್ಯಾಮ್ನಲ್ಲಿ ಕಂಪನಿಯ ಉನ್ನತ ಮಟ್ಟದ ಪ್ರತಿನಿಧಿಗಳ ಜೊತೆ ಮಾತುಕತೆ ನಡೆಸಲಾಗಿತ್ತು ಎಂದಿದ್ದಾರೆ.
ರಸಗೊಬ್ಬರ, ಕೀಟನಾಶಕ ಮತ್ತು ಶಿಲೀಂಧ್ರನಾಶಕ ಮುಂತಾದವನ್ನು ಉತ್ಪಾದಿಸುವ ಈ ಕಂಪನಿಯು ಹೂಡಿಕೆಯಿಂದ 220 ಉದ್ಯೋಗಗಳು ಸೃಷ್ಟಿಯಾಗಲಿವೆ. ಕಂಪನಿಯು ಮುಂದಿನ ವರ್ಷದ ಏಪ್ರಿಲ್ ತಿಂಗಳಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೂ ಮೊದಲೇ ಯೋಜನೆಯ ಭೂಮಿಪೂಜೆ ನೆರವೇರಿಸಲು ಬಯಸಿದ್ದು, ತ್ವರಿತವಾಗಿ ತಯಾರಿಕೆ ಚಟುವಟಿಕೆಗಳನ್ನು ಆರಂಭಿಸಲು ಉತ್ಸುಕವಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಕಂಪನಿಯು ಈಗಾಗಲೇ ಬೆಂಗಳೂರಿನಲ್ಲಿ ತನ್ನ ಸೇವಾ ಮತ್ತು ನಾವೀನ್ಯತೆಯ ಹಬ್ ಹಾಗೂ ಚಾಮರಾಜನಗರದಲ್ಲಿ ಬೆಳೆ ಪರೀಕ್ಷಾ ಕೇಂದ್ರವನ್ನು ಹೊಂದಿದೆ. ಭಾರತದಲ್ಲಿ ಇದು 125 ವರ್ಷಗಳಿಂದಲೂ ಇದ್ದು, 11 ಸಾವಿರ ಜನರಿಗೆ ಕೆಲಸ ಕೊಟ್ಟಿದೆ. ದೇಶದಲ್ಲಿ ಬೇಯರ್ ಕಂಪನಿಯು 7 ಉತ್ಪಾದನಾ ಸ್ಥಾವರಗಳು ಮತ್ತು 3 ಜಿಇಸಿ ಕೇಂದ್ರಗಳನ್ನು ಹೊಂದಿದೆ. ಈ ಸಂದರ್ಭದಲ್ಲಿ ಕೈಗಾರಿಕಾ ಇಲಾಖೆಯ ಆಯುಕ್ತೆ ಖುಷ್ಬೂ ಗೋಯಲ್ ಚೌಧರಿ, ಕೆಐಎಡಿಬಿ ಗೋವಿಂದ ರೆಡ್ಡಿ ಉಪಸ್ಥಿತರಿದ್ದರು ಎಂದು ಅವರು ನುಡಿದಿದ್ದಾರೆ.ಇದನ್ನೂ ಓದಿ:ನಿಮ್ಮ ಮ್ಮನ ನಡತೆ ಸರಿಯಿಲ್ಲ ಅಂತಾ ಮಗಳ ಮನಸ್ಸಿನಲ್ಲಿ ವಿಷಬೀಜ ಬಿತ್ತಿದ್ದ ತಂದೆ – ಪತ್ನಿ ವಿರುದ್ಧ ನಿರಂತರ ಬ್ರೈನ್ವಾಷ್!
