ಬೆಂಗಳೂರು: 2025-26ನೇ ಸಾಲಿನ ಡಿಜಿ & ಐಜಿಪಿ ಕಮಾಂಡೇಷನ್ ಡಿಸ್ಕ್ ಪ್ರಶಸ್ತಿಗೆ ರಾಜ್ಯದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಆಯ್ಕೆ ಮಾಡಲಾಗಿದೆ.
ಪೊಲೀಸ್ ಇಲಾಖೆಯಲ್ಲಿ ವರ್ಷಪೂರ್ತಿ ಸಲ್ಲಿಸಿದ ಅತ್ಯುತ್ತಮ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಡಿಜಿ & ಐಜಿಪಿ ಎಂ.ಎ. ಸಲೀಂ ಬಿಡುಗಡೆ ಮಾಡಿ ಆದೇಶ ಹೊರಡಿಸಿದ್ದಾರೆ.ಇದನ್ನೂ ಓದಿ: ಗಿರವಿ ಇಟ್ಟ ಚಿನ್ನ ವಾಪಸ್ ಕೇಳಿದ್ದಕ್ಕೆ ಫೈರಿಂಗ್ – ಶಾಲಾ ಬಾಲಕಿಗೂ ತಗುಲಿದ ಗುಂಡು
ಪ್ರಶಸ್ತಿ ಪುರಸ್ಕೃತರ ಪಟ್ಟಿಯಲ್ಲಿ ಐಜಿಪಿ ಶಶಿಕುಮಾರ್, ಡಿಐಜಿಪಿ ಭೀಮಾಶಂಕರ್ ಗುಳೇದ್, ಡಿಸಿಪಿ ಅಕ್ಷಯ್ ಮಚೀಂದ್ರ ಹಾಗೂ ಎಸಿಪಿ ರಾಜೇಶ್ ಎಲ್.ವೈ ಸೇರಿದಂತೆ ಒಟ್ಟು 200 ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಾನ ಪಡೆದಿದ್ದಾರೆ.ಇದನ್ನೂ ಓದಿ: ಡೆತ್‌ನೋಟ್ ಬರೆದಿಟ್ಟು ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ
