ಗದಗ: ಟ್ಯಾಕ್ಸಿ ಪಡೆದ ಯುವಕರು ಪ್ರಾಮಾಣಿಕವಾಗಿ ಶ್ರಮವಹಿಸಿ ದುಡಿದು, ಉತ್ತಮ ಜೀವನ ನಡೆಸಿ ರಾಷ್ಟ್ರಕಟ್ಟುವಲ್ಲಿ ಭಾಗವಹಿಸಿ ಸಮಾಜಕ್ಕೆ ಮಾದರಿ ಆಗಬೇಕು ಎಂದು ರಾಜ್ಯದ ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ (Gadaga) ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಕೆ.ಪಾಟೀಲ್ (H K Patil) ಹೇಳಿದರು.
ನಗರದಲ್ಲಿ ಜಿಲ್ಲಾ ಕ್ರೀಡಾಂಗಣದಲ್ಲಿ ಸಚಿವರು ಶನಿವಾರ ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ಕರ್ನಾಟಕ ಸಂಭ್ರಮ 50 ರ ಅಂಗವಾಗಿ ಪ್ರವಾಸಿ ಟ್ಯಾಕ್ಸಿ ವಿತರಣೆ ಮಾಡಿದರು. ಈ ವೇಳೆ ಮಾತನಾಡಿದ ಅವರು, ಗದಗ ಜಿಲ್ಲೆಯೂ ಪ್ರವಾಸೋದ್ಯಮ ತಾಣ ಆಗಬೇಕು. ರಾಜಧಾನಿ ಬೆಂಗಳೂರಿನಿಂದ ದೂರ ಇರುವ ಕಾರಣಕ್ಕೆ ಪಾರಂಪರಿಕ ಸಂಪತ್ತಾದ ಐತಿಹಾಸಿಕ ದೇವಸ್ಥಾನ ಹೊಂದಿದ ಜಿಲ್ಲೆಯನ್ನು, ಪ್ರವಾಸೋದ್ಯಮ ತಾಣವಾಗಿಸಲು ಪ್ರವಾಸೋದ್ಯಮ ಇಲಾಖೆಯಿಂದ ಸಾಕಷ್ಟು ಕೆಲಸ ಪ್ರಾರಂಭವಾಗಿದೆ. ಯುವಕರು ಸ್ವಯಂ ಉದ್ಯೋಗ ಮಾಡಿ ಪ್ರವಾಸೋದ್ಯಮಕ್ಕೆ ಒತ್ತು ನೀಡಬೇಕು. ಅದಕ್ಕಾಗಿ 200 ಯುವ ಜನಕ್ಕೆ ಪ್ರವಾಸಿ ಟ್ಯಾಕ್ಸಿ ನೀಡಿ ಐತಿಹಾಸಿಕ ದಾಖಲೆಗೆ ಸಾಕ್ಷಿಯಾಗಿದೆ. ಟ್ಯಾಕ್ಸಿಯನ್ನು ತೆಗೆದುಕೊಂಡ ಯುವಕರು ಶ್ರದ್ಧೆಯಿಂದ ಟ್ಯಾಕ್ಸಿಯನ್ನು ಸದುಪಯೋಗ ಪಡೆಸಿಕೊಂಡು 1 ವರ್ಷದ ನಂತರ ಉತ್ತಮ ಜೀವನ ನಡೆಸಿ ಸಾಧನೆ ಮಾಡಿ ಸಮಾಜಕ್ಕೆ ಮಾದರಿ ಆಗಬೇಕು ಎಂದು ಪ್ರೇರೆಪಿಸಿದರು. ಇದನ್ನೂ ಓದಿ: ಒತ್ತೆಯಾಳುಗಳ ಹತ್ಯೆ – ಮಣಿಪುರದ ಸಚಿವರು, ಶಾಸಕರ ಮನೆಗಳ ಮೇಲೆ ಪ್ರತಿಭಟನಾಕಾರರ ದಾಳಿ
ಗದಗ ಜಿಲ್ಲೆಯ ಯುವಕರು ಉತ್ಸಾಹದಿಂದ ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸುತ್ತಾರೆ. ಹಾಗಾಗಿ ಬೆಂಗಳೂರಿನ (Bengaluru) ವಿಮಾನ ನಿಲ್ದಾಣದಲ್ಲಿ ಸಂಚಾರಕ್ಕಾಗಿ ಬಳಸುವ ಟ್ಯಾಕ್ಸಿಗಳಲ್ಲಿ ಇಂದು ಟ್ಯಾಕ್ಸಿ ಪಡೆದ ಜಿಲ್ಲೆಯ ಯುವಕರನ್ನು ಪರಿಗಣಿಸಿ ಬಳಸಿಕೊಳ್ಳಬೇಕು ಎಂದು ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಅವರಿಗೆ ತಿಳಿಸಿದರು. ಟ್ಯಾಕ್ಸಿಗಳನ್ನು ಪಡೆದ ಯುವಕರು ಗದಗ ಜಿಲ್ಲೆಯನ್ನು ಪ್ರವಾಸೋದ್ಯಮ ತಾಣವನ್ನಾಗಿಸಿ ಅಭಿವೃದ್ಧಿ ಪಡಿಸುವ ಗುರಿ ಹೊಂದಬೇಕು. ಗದಗ ಜಿಲ್ಲೆಗೆ ಸೀಮಿತವಾಗದೆ, ರಾಜ್ಯದಲ್ಲಿರುವ ವಿವಿಧ ದೇವಾಲಯ, ಸ್ಮಾರಕ, ನಿಸರ್ಗ ಧಾಮ ಅಲ್ಲಿನ ವಸತಿ, ಊಟ ವ್ಯವಸ್ಥೆ, ಐತಿಹಾಸಿಕ ಹಿನ್ನೆಲೆ ಬಗ್ಗೆ ಮಾಹಿತಿ ಹೊಂದಿರಬೇಕು. ಓಡಾಟದ ನಡುವೆ ಯಾವುದೇ ಚಟಕ್ಕೆ ಬಲಿಯಾಗದೇ ಉತ್ತಮ ಆಹಾರ ಸೇವಿಸಿ ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕು ಎಂದು ಹೇಳಿದರು. ಇದನ್ನೂ ಓದಿ: ದೆಹಲಿಯಲ್ಲಿ ಮಾಲಿನ್ಯ ನಿಯಂತ್ರಣಕ್ಕೆ GRAP-III ಜಾರಿ – ನಿಯಮ ಉಲ್ಲಂಘಿಸಿದವರಿಂದ 5 ಕೋಟಿಗೂ ಅಧಿಕ ದಂಡ ವಸೂಲಿ
ಈ ವೇಳೆ ಶಾಸಕ ಜಿ.ಎಸ್. ಪಾಟೀಲ (G S Patil), ಪರಿಷತ್ ಸದಸ್ಯ ಎಸ್.ವಿ ಸಂಕನೂರ, ಗದಗ-ಬೆಟಗೇರಿ (Betageri) ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಬರ್ಚಿ, ಮಾಜಿ ಶಾಸಕ ರಾಮಣ್ಣ ಲಮಾಣಿ, ಕೆಡಿಪಿ ಸದಸ್ಯ ಡಿಆರ್ ಪಾಟೀಲ, ಬಿ.ಬಿ. ಅಸೂಟಿ, ಅಶೋಕ ಮಂದಾಲಿ, ಐಯ್ಯಸ್ವಾಮಿ, ಸಿದ್ದು ಪಾಟೀಲ, ಪ್ರಭು ಬುರಬುರಿ, ನಗರಸಭೆ ಸದಸ್ಯರು, ಪ್ರವಾಸೋದ್ಯಮ ಇಲಾಖೆ ನಿರ್ದೇಶಕ ರಾಜೇಂದ್ರ, ಕೆನರಾ ಬ್ಯಾಂಕ್ ಮ್ಯಾನೇಜರ್ ವಿಜಯಕುಮಾರ, ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ, ಜಿ.ಪಂ.ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಭರತ್, ಪೊಲೀಸ್ ವರಿಷ್ಟಾಧಿಕಾರಿ ಬಿ.ಎಸ್. ನೇಮಗೌಡ, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ ವಿಭೂತಿ, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಶರಣು ಗೊಗೇರಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು. ಇದನ್ನೂ ಓದಿ: ಅಪ್ಪ, ಮಕ್ಕಳು ಒಬ್ಬೊರನ್ನ ಕೈ ಬಿಡ್ತಾರೆ, ಇದೇ ದಂಧೆ ಮಾಡ್ತಾರೆ – ಮತ್ತೆ ಸಿಡಿದ ಯತ್ನಾಳ್