ಚಿಕ್ಕೋಡಿ: ಕಾಂಗ್ರೆಸ್ (Congress) ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೂ 200 ಯೂನಿಟ್ ಉಚಿತ ವಿದ್ಯುತ್ (Free Electricity) ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಘೋಷಣೆ ಮಾಡಿದ್ದಾರೆ.
ಬೆಳಗಾವಿ (Belagavi) ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ಡಿಕೆಶಿ ಉಚಿತ ವಿದ್ಯುತ್ ನೀಡುವ ಘೋಷಣೆ ಮಾಡಿ ಮುಖಂಡರಿಂದ ಬಿತ್ತಿ ಫಲಕ ಬಿಡುಗಡೆ ಮಾಡಿದರು. ಇನ್ಮೇಲೆ ನೀವ್ಯಾರೂ ಕರೆಂಟ್ಗೆ ದುಡ್ಡು ಕೊಡಬೇಕಾಗಿಲ್ಲ. 200 ಯೂನಿಟ್ ವರೆಗೂ ನೀವ್ಯಾರೂ ಬಿಲ್ ಕಟ್ಟುವ ಅವಶ್ಯಕತೆ ಇಲ್ಲ ಎಂದು ಡಿಕೆಶಿ ಘೋಷಿಸಿದರು.
Advertisement
Advertisement
ರೈತರ ಆದಾಯ ಡಬಲ್ ಮಾಡುತ್ತೇವೆ ಎಂದು ವಚನ ಕೊಟ್ರು, ಯಾರಿಗಾದರೂ ಆಯ್ತಾ? ನಿಮ್ಮ ಎಲ್ಲಾ ಸಾಲಗಳನ್ನು ಮನ್ನಾ ಮಾಡುತ್ತೇವೆ ಅಂತ ಹೇಳಿದ್ರು, ಯಾರದ್ದಾದರೂ ಸಾಲ ಮನ್ನಾ ಆಯ್ತಾ? ಆಪರೇಷನ್ ಕಮಲ ಮಾಡಿ ನಿಮ್ಮ ಜಿಲ್ಲೆಯ ಮೂವರನ್ನು ಕರೆದುಕೊಂಡು ಸರ್ಕಾರ ಮಾಡಿದರು. ಇವರು ನಿಮಗೇನಾದರೂ ಹೇಳಿದ್ರಾ? ಬಿಜೆಪಿಯ ಪಾಪಾದ ಪುರಾಣ ನಾವು ಬಿಡುಗಡೆ ಮಾಡಿದ್ದೇವೆ ಎಂದು ಕಿಡಿಕಾರಿದರು.
Advertisement
ಇದು ಬಿ ರಿಪೋರ್ಟ್ ಬರೆಯುವ ಸರ್ಕಾರ. ಮಂಚ, ಲಂಚದ ಸರ್ಕಾರ. 40 ಪರ್ಸೆಂಟ್ ಕಮಿಷನ್ ಸರ್ಕಾರ. ಈ ದೇಶದಲ್ಲಿ ಬರೀ ಕೋಮು ವಿಷ ಬೀಜ ಬಿತ್ತುವ ಕೆಲಸ ಮಾಡಲಾಗುತ್ತಿದೆ. ಮುಖ್ಯಮಂತ್ರಿ ಹುದ್ದೆಗೆ 2,500 ಕೋಟಿ ರೂ., ಮಂತ್ರಿ ಹುದ್ದೆಗೆ 100 ಕೋಟಿ ರೂ., ಮಠಗಳ ಅನುದಾನಕ್ಕೆ 40 ಪರ್ಸೆಂಟ್, ಮೊಟ್ಟೆಗಳಿಗೆ 30 ಪರ್ಸೆಂಟ್ ಸರ್ಕಾರ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಬಿಜೆಪಿ ಕೇಸರಿ ಬಟ್ಟೆಯನ್ನಿಟ್ಟುಕೊಂಡು ಅದರ ಪಾವಿತ್ರ್ಯತೆ ಹಾಳು ಮಾಡುತ್ತಿದೆ: ಹೆಚ್ಡಿಕೆ
Advertisement
ಗುತ್ತಿಗೆದಾರರು ದೂರು ನೀಡಿದರೂ, ಸಂತೋಷ್ ಪಾಟೀಲ್ ಕೆಲಸ ಮಾಡಿದರೂ ಈವರೆಗೂ ಅವರಿಗೆ ಬಿಲ್ ಕೊಡಲಿಲ್ಲ. 3 ವರ್ಷದಿಂದ ಪಾಪದ ಕೊಡ ತುಂಬಿದೆ. ಅವರು ಅಸೆಂಬ್ಲಿ ನಡೆಯುವವರೆಗೂ ಕೂಡಾ ನಿಮಗೆ ವಚನ ನೀಡಲು ಹೋಗುತ್ತಾರೆ. ಮೀಸಲಾತಿ ವಿಚಾರದಲ್ಲಿ ಯಾವ್ಯಾವ ನಾಟಕ ಆಡುತ್ತಿದ್ದಾರೆ, ಜನರನ್ನು ತಪ್ಪು ದಾರಿಗೆ ಎಳೆಯಲು ಪ್ರಯತ್ನ ಮಾಡುತ್ತಿದ್ದಾರೆ ಎಂದರು.
ಬಿಜೆಪಿ ಸರ್ಕಾರಕ್ಕೆ ಕೊಟ್ಟ ಮಾತನ್ನು ಉಳಿಸಿಕೊಳ್ಳಲು ಆಗಲಿಲ್ಲ. ಕುವೆಂಪು, ಶಿಶುನಾಳ ಶರೀಫ, ಬಸವಣ್ಣನ ಕರ್ನಾಟಕ ನಿರ್ಮಾಣ ಆಗಬೇಕು. ನಿಮ್ಮ ಸೇವೆ ಮಾಡಲು, ನಿಮಗೆ ಬಲಿಷ್ಠ ಸರ್ಕಾರ ನೀಡಲು ಕಾಂಗ್ರೆಸ್ಗೆ ಆಶೀರ್ವಾದ ಮಾಡಿ. ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಪ್ರಣಾಳಿಕೆ ಕೊಡಬೇಕು ಎಂಬ ಪ್ರಿಯಾಂಕಾ ಗಾಂಧಿಯವರ ಯೋಜನೆ ಇದೆ. ಪ್ರತಿ ಪಂಚಾಯಿತಿಯಿಂದ ಇಬ್ಬರು ಹೆಣ್ಣು ಮಕ್ಕಳು ಬರಬೇಕು, ಭಾಗವಹಿಸಬೇಕು ಎಂದು ಡಿಕೆಶಿ ಮನವಿ ಮಾಡಿದರು. ಇದನ್ನೂ ಓದಿ: ನನ್ನ ರಕ್ತನೇ ಕಾಂಗ್ರೆಸ್, ನಾನು ‘ಕೈ’ ಪಕ್ಷ ಸೇರುತ್ತೇನೆ: ಹೆಚ್. ವಿಶ್ವನಾಥ್
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k