ಬೆಂಗಳೂರು: ಈ ವರ್ಷ ರಾಜ್ಯದಲ್ಲಿ ಸುಮಾರು ಎರಡು ಸಾವಿರ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.
ಬೆಂಗಳೂರು ಮೆಟ್ರೋ ರೈಲು ನಿಗಮ ವತಿಯಿಂದ ನಿರ್ಮಿಸಿರುವ ಜಯನಗರ ಅಗ್ನಿಶಾಮಕ ಠಾಣೆ ನೂತನ ಕಟ್ಟಡವನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಉದ್ಘಾಟಿಸಿ ಮಾತನಾಡಿದರು. ಇದನ್ನೂ ಓದಿ: ಸರಿಯಾಗಿ ಬೈಕ್ ಓಡಿಸಿ ಎಂದಿದ್ದಕ್ಕೆ ವ್ಯಕ್ತಿಯ ಮೇಲೆ ಪುಂಡರಿಂದ ಮಾರಣಾಂತಿಕ ಹಲ್ಲೆ
ಜನತೆಯ ಪ್ರಾಣ ಹಾಗೂ ಆಸ್ತಿ ರಕ್ಷಣೆಗೆ ರಾಜ್ಯ ಸರ್ಕಾರ ಎಲ್ಲಾ ಸಾಧ್ಯವಾದ ಕ್ರಮಗಳನ್ನು ಕೈಗೊಳ್ಳುತ್ತದೆ ಎಂದರು.
ಅಗ್ನಿಶಾಮಕ ಇಲಾಖೆಗೆ ಅತ್ಯಾಧುನಿಕ ಸೌಲಭ್ಯಗಳನ್ನು ಕಲ್ಪಿಸಲು ಸರ್ಕಾರ ವಿಶೇಷ ಆದ್ಯತೆ ನೀಡುತ್ತದೆ ಹಾಗೂ ಹೆಚ್ಚಿನ ಅನುದಾನ ಒದಗಿಸಲಾಗುತ್ತದೆ ಎಂದೂ ಸಚಿವರು ಹೇಳಿದರು. ಇದನ್ನೂ ಓದಿ: ಅಗ್ಗದ ಹೋಟೆಲ್ ರೂಂ, ಆಸ್ಪತ್ರೆ ಸೇವೆ ಇನ್ನಷ್ಟು ದುಬಾರಿ
ಕಾರ್ಯಕ್ರಮದಲ್ಲಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕರು, ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಅಮರ್ ಕುಮಾರ್ ಪಾಂಡೆ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.