ಬೆಂಗಳೂರು: ಇಷ್ಟು ದಿನ 2 ಸಾವಿರ ರೂಪಾಯಿ ಮುಖಬೆಲೆಯ ನೋಟು ಬ್ಯಾನ್ ಆಗುತ್ತೆ ಎಂಬ ಮಾತುಗಳು ಕೇಳಿಬಂದಿತ್ತು. ಆದರೆ ಈಗ ಅದಕ್ಕೆ ಪುಷ್ಠಿ ಎಂಬಂತೆ ಮಾರ್ಚ್ 1ರಿಂದ ಎಟಿಎಂಗಳಲ್ಲಿ 2 ಸಾವಿರ ರೂಪಾಯಿ ಮುಖಬೆಲೆಯ ನೋಟು ಸಿಗಲ್ಲ ಎಂಬ ಮಾತುಗಳು ಕೇಳಿ ಬರುತ್ತಿವೆ. ಹೀಗಾಗಿ ಬೆಂಗಳೂರಿನಲ್ಲಿ ಎಟಿಎಂಗಳಲ್ಲಿ 2 ಸಾವಿರ ರೂಪಾಯಿ ನೋಟು ಸಿಗ್ತಿಲ್ಲ ಎಂಬುದು ಜನರ ಮಾತಾಗಿದ್ದು, ಸಿಲಿಕಾನ್ ಸಿಟಿಯ ಎಟಿಎಂಗಳಲ್ಲಿ 2 ಸಾವಿರ ರೂಪಾಯಿ ನೋಟ್ ಸಿಗುತ್ತಾ ಇದೆಯಾ? ಇಲ್ವ? ಎಂದು ಪಬ್ಲಿಕ್ ಟಿವಿ ನಡೆಸಿದ ರಿಯಾಲಿಟಿ ಚೆಕ್‍ನಲ್ಲಿ ಆತಂಕಕಾರಿ ವಿಚಾರ ಬಯಲಾಗಿದೆ.
Advertisement
ಇಂಡಿಯನ್ ಬ್ಯಾಂಕ್ ಹೇಳಿದ್ದೇನು?
ಫೆ. 17ರಂದು ಇಂಡಿಯನ್ ಬ್ಯಾಂಕಿನ ಲೆಂಡರ್ಸ್ ಡಿಜಿಟಲ್ ಬ್ಯಾಂಕಿಂಗ್ ವಿಭಾಗ ಸುತ್ತೋಲೆ ಹೊರಡಿಸಿದೆ. 2000 ರೂಪಾಯಿ ಮುಖಬೆಲೆಯ ನೋಟುಗಳು ಭಾರಿ ಮೊತ್ತದ್ದಾಗಿದ್ದು, ಇದರಿಂದ ಚಿಲ್ಲರೆ ವ್ಯಾಪಾರಿಗಳು ಹಾಗೂ ಗ್ರಾಹಕರು ಚೇಂಜ್ ಪಡೆಯಲು ಸಮಸ್ಯೆ ಎದುರಿಸುತ್ತಿದ್ದಾರೆ. ಆದ್ದರಿಂದ ಈ ನೋಟುಗಳ ವ್ಯವಹಾರವನ್ನು ನಮ್ಮ ಬಾಂಕಿನಲ್ಲಿ ಸ್ಥಗಿತಗೊಳಿಸಲಾಗಿದ್ದು, ಕೇವಲ 100, 200 ಹಾಗೂ 500 ರೂಪಾಯಿ ಮುಖಬೆಲೆಯ ನೋಟುಗಳು ಮಾತ್ರ ನಮ್ಮ ಎಟಿಎಂಗಳಲ್ಲಿ ಲಭ್ಯವಿರುತ್ತೆ ಎಂದು ತಿಳಿಸಿತ್ತು. ಅಲ್ಲದೇ ಮಾರ್ಚ್ 1ರಿಂದ 2000 ರೂಪಾಯಿ ನೋಟು ನಮ್ಮಲ್ಲಿ ಸಿಗಲ್ಲ ಎಂದು ಹೇಳಿತ್ತು.
Advertisement
Advertisement
ಕಳೆದ ನಾಲ್ಕೈದು ತಿಂಗಳಿನಿಂದ ಎಟಿಎಂಗಳಲ್ಲಿ 2 ಸಾವಿರ ನೋಟು ಹೆಚ್ಚಾಗಿ ಸಿಗುತ್ತಿಲ್ಲ. 2 ಸಾವಿರ ರೂಪಾಯಿ ನೋಟು ಸಿಗ್ತಿಲ್ಲ ಎಂದು ಗ್ರಾಹಕರು ಮಾತಾಡಿಕೊಳ್ಳುತ್ತಿದ್ದರು. ಅದಕ್ಕೆ ಪುಷ್ಠಿ ಎಂಬಂತೆ ಇಂಡಿಯಾನ್ ಬ್ಯಾಂಕ್ ಆತಂಕಕಾರಿ ಮಾಹಿತಿ ನೀಡಿದೆ. ಇದರಿಂದ ಗ್ರಾಹಕರು ಆತಂಕಕ್ಕೆ ಒಳಗಾಗಿದ್ದಾರೆ. ಹೀಗಾಗಿ ಬೆಂಗಳೂರಿನ ಎಟಿಎಂಗಳಲ್ಲಿ 2 ಸಾವಿರ ರೂಪಾಯಿ ನೋಟ್ ಸಿಗುತ್ತಾ ಇದೆಯಾ? ಇಲ್ವ ಎಂದು ಪಬ್ಲಿಕ್ ಟಿವಿ ರಿಯಾಲಿಟಿ ಚೆಕ್ ಮಾಡಿದಾಗ ಎರಡು ಸಾವಿರ ನೋಟ್ ನಾಪತ್ತೆಯಾಗಿರೋದು ಪತ್ತೆಯಾಗಿದೆ.
Advertisement
ಸ್ಥಳ- ಮತ್ತಿಕೆರೆ
ಮತ್ತಿಕೆರೆ ಸರ್ಕಲ್‍ನಲ್ಲಿ ಇರುವ ಎಸ್‍ಬಿಐ ಎಟಿಎಂನಲ್ಲಿ 2 ಸಾವಿರ ನೋಟ್ ಸಿಗುತ್ತಿದೆಯಾ? ಇಲ್ವಾ ಎಂದು ಪಬ್ಲಿಕ್ ಟಿವಿ ತಂಡ ರಿಯಾಲಿಟಿ ಚೆಕ್ ಮಾಡೋದಕ್ಕೆ ಮುಂದಾಯಿತು. ಎಟಿಎಂನಲ್ಲಿ ಹಣ ಡ್ರಾ ಮಾಡುತ್ತಿದ್ದ ಗ್ರಾಹಕರನ್ನು ಕೂಡ ಮಾತಾಡಿಸಿದೇವು. ಈ ಎಟಿಎಂನಲ್ಲಿ 2 ಸಾವಿರ ರೂಪಾಯಿ ಡ್ರಾ ಮಾಡಿದಾಗ 2 ಸಾವಿರ ರೂಪಾಯಿ ಮುಖಬೆಲೆಯ ನೋಟು ಬರಲಿಲ್ಲ. ಬದಲಿಗೆ ಬರೀ 500 ರೂಪಾಯಿ ನೋಟುಗಳು ಮಾತ್ರ ಬಂದವು. ಈ ಬಗ್ಗೆ ಪ್ರತಿಕ್ರಿಯಿಸಿದ ಸ್ಥಳೀಯರು ಕಳೆದ 20 ದಿನಗಳಿಂದಲೂ 2 ಸಾವಿರ ರೂಪಾಯಿ ನೋಟು ಸಿಗುತ್ತಿಲ್ಲ ಎಂದರು.
ಸ್ಥಳ- ಯಲಹಂಕ
ಇತ್ತ ಯಲಹಂಕ ಸರ್ಕಲ್‍ನಲ್ಲಿ ಕೂಡ ಕೊಟಕ್ ಮಹಿಂದ್ರಾ ಬ್ಯಾಂಕ್ ಎಟಿಎಂನಲ್ಲಿ 2 ಸಾವಿರ ರೂಪಾಯಿ ಮುಖಬೆಲೆಯ ನೋಟು ಬರುತ್ತಾ ಅಂತಾ ಚೆಕ್ ಮಾಡಿದ್ದೆವು. ಆದರೆ ಅಲ್ಲಿ ಕೂಡ ಬರೀ 500 ರೂಪಾಯಿ ನೋಟು ಬಂದವು. ಯಾಕೆ 2 ಸಾವಿರ ರೂಪಾಯಿ ನೋಟು ಸಿಗ್ತಿಲ್ಲ ಎಂದು ಸೆಕ್ಯೂರಿಟಿನಾ ಕೇಳುದರೆ, ಇಲ್ಲಿ ನಾಲ್ಕೈದು ತಿಂಗಳಿಂದ 2 ಸಾವಿರ ನೋಟು ಬರುತ್ತಿಲ್ಲ. ಮತ್ತೆ ಡೆಪಾಸಿಟ್ ಕೂಡ ಮಾಡ್ತಿಲ್ಲ ಎಂದು ತಿಳಿಸಿದರು.
ಸ್ಥಳ- ಹೆಬ್ಬಾಳ
ಮತ್ತಿಕೆರೆ ,ಯಲಹಂಕ ಎರಡು ಕಡೆ ಎಟಿಎಂನಲ್ಲೂ ಕೂಡ 2 ಸಾವಿರ ರೂಪಾಯಿ ನೋಟ್ ಬರಲಿಲ್ಲ. ಬಳಿಕ ಹೆಬ್ಬಾಳದ ಐಸಿಐಸಿಐ ಬ್ಯಾಂಕ್‍ನ ಎಟಿಎಂನಲ್ಲಿ ರಿಯಾಲಿಟಿ ಚೆಕ್ ಮಾಡಿದಾಗ, ಅಲ್ಲಿ ಕೂಡ 2 ಸಾವಿರ ರೂಪಾಯಿ ನೋಟು ಸಿಗಲಿಲ್ಲ.
ಸ್ಥಳ-ಮಲ್ಲೇಶ್ವರಂ
ಬಳಿಕ ಅಲ್ಲಿಂದ ಮಲ್ಲೇಶ್ವರ ಕಡೆ ಹೋಗಿ ಒಂದು ಎಟಿಎಂನಲ್ಲಿ ಎರಡು ಸಾವಿರ ನೋಟು ಡ್ರಾ ಮಾಡಿಕೊಳ್ಳಲು ಮುಂದಾದೆವು. ಆದರೆ ಇಲ್ಲಿಯೂ ಅದೇ ಪರಸ್ಥಿತಿ, ಕೇವಲ 100, 200 ಹಾಗೂ 500 ರೂಪಾಯಿ ಮುಖಬೆಲೆಯ ನೋಟುಗಳೇ ಎಂಟಿಎಂನಲ್ಲಿ ಸಿಕ್ಕಿತು.
ಹೀಗೆ ಬೆಂಗಳೂರಿನ ಬಹುತೇಕ ಎಟಿಎಂಗಳಲ್ಲಿ 2 ಸಾವಿರ ನೋಟು ಸಿಗಲಿಲ್ಲ. ಬರೀ 500, 200, 100 ರೂಪಾಯಿ ಮುಖಬೆಲೆಯ ನೋಟುಗಳು ಸಿಗುತ್ತಿವೆ. ಈ ಪರಿಸ್ಥಿತಿ ನಾಲ್ಕೈದು ತಿಂಗಳಿಂದನೂ ಇದೆ. ನೋಟು ಸಿಗುತ್ತಿಲ್ಲ ಎಂಬ ಮಾಹಿತಿ ಸದ್ಯ ಗ್ರಾಹಕರಲ್ಲಿ ಸಾಕಷ್ಟು ಪ್ರಶ್ನೆ ಹುಟ್ಟುಹಾಕಿದ್ದು, ಮುಂದಿನ ದಿನಗಳಲ್ಲಿ 2 ಸಾವಿರ ನೋಟ್ ಬ್ಯಾನ್ ಆಗುತ್ತಾ ಎಂಬ ಅನುಮಾನಗಳು ಕೂಡ ಗ್ರಾಹಕರಲ್ಲಿ ಕಾಡುತ್ತಿದೆ.