Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ದೀಪಾವಳಿ ಪ್ರಯುಕ್ತ 2,000 ವಿಶೇಷ ಬಸ್‌; ಎಲ್ಲಿಗೆ? ಯಾವಾಗ? – ಇಲ್ಲಿದೆ ಫುಲ್‌ ಡಿಟೇಲ್ಸ್‌

Public TV
Last updated: October 26, 2024 3:48 pm
Public TV
Share
3 Min Read
KSRTC 2
SHARE

ಬೆಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC) ಸುಮಾರು 2,000 ಹೆಚ್ಚುವರಿ ವಿಶೇಷ ಬಸ್‌ ವ್ಯವಸ್ಥೆ ಕಲ್ಪಿಸಿದೆ.

ಅಕ್ಟೋಬರ್‌ 31 ನರಕ ಚತುರ್ದಶಿ, ನವೆಂಬರ್‌ 1 ಕನ್ನಡ ರಾಜ್ಯೋತ್ಸವ (Kannada Rajyotsava) ಹಾಗೂ ನವೆಂಬರ್‌ 2ರಂದು ಬಲಿಪಾಡ್ಯಮಿ ಹಬ್ಬದ ಪ್ರಯುಕ್ತ ಕೆಎಸ್‌ಆರ್‌ಟಿಸಿಯು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಅಕ್ಟೋಬರ್‌ 30ರಿಂದ ನವೆಂಬರ್‌ 1ರ ವರೆಗೆ ಬೆಂಗಳೂರಿನಿಂದ (Bengaluru) ಈ ಕೆಳಕಂಡ ಸ್ಥಳಗಳಿಗೆ 2,000 ಹೆಚ್ಚುವರಿ ಬಸ್‌ಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ. ನಂತರ ರಾಜ್ಯದ ಮತ್ತು ಅಂತಾರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ನವೆಂಬರ್‌ 3 ಹಾಗೂ ನವೆಂಬರ್‌ 4ರಂದು ವಿಶೇಷ ಬಸ್‌ ಕಾರ್ಯಾಚರಣೆ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

KSRTC

ವಿಶೇಷ ಬಸ್‌ ಸೌಲಭ್ಯ ಎಲ್ಲಿಂದ – ಎಲ್ಲಿಗೆ? ಪ್ರಕಟಣೆಯಲ್ಲಿ ಏನಿದೆ?

* ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಬಸ್‌ ಇರಲಿದೆ.

* ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆಗೆ ವಿಶೇಷ ಬಸ್‌ ಸೌಲಭ್ಯ ಇರಲಿದೆ. ಇದನ್ನೂ ಓದಿ: ಉತ್ತರ ಪ್ರದೇಶ| ರೈಲು ಹಳಿಗಳ ಮೇಲೆ 6 ಕೆಜಿ ಮರದ ತುಂಡು ಇರಿಸಿ ಹಳಿ ತಪ್ಪಿಸಲು ಯತ್ನ

KSRTC

* ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಬಕೋಣಂ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ನಡೆಸಲಿವೆ.

ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್‌ಅಪ್ ಪಾಯಿಂಟ್‌ನ ಹೆಸರನ್ನು ಗಮನಿಸುವಂತೆ ಸಾರಿಗೆ ನಿಗಮವು ಪ್ರಕಟಣೆಯಲ್ಲಿ ಕೋರಿದೆ. ಇದನ್ನೂ ಓದಿ: ಬೆಂಗಳೂರಲ್ಲಿ ಡಿ.6ಕ್ಕೆ ದಿಲ್ಜಿತ್ ಶೋ; ಅಕ್ರಮ ಟಿಕೆಟ್‌ ಮಾರಾಟ ಆರೋಪ – ಕರ್ನಾಟಕ ಸೇರಿ 5 ರಾಜ್ಯಗಳಲ್ಲಿ ED ದಾಳಿ

KSRTC electric bus

ಟಿಕೆಟ್‌ ಬುಕಿಂಗ್‌ ಹೇಗೆ?
ಇ-ಟಿಕೇಟ್ ಬುಕಿಂಗ್‌ನ್ನು www.ksrtc.karnataka.gov.in ವೆಬ್‌ಸೈಟ್‌ ಮುಖಾಂತರ ಮಾಡಬಹುದಾಗಿದೆ. ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಕಾಯ್ದಿರಿಸಿದಲ್ಲಿ ಶೇ. 5ರಷ್ಟು ರಿಯಾಯಿತಿ, ಹೋಗುವ ಮತ್ತು ಬರುವ ಪ್ರಯಾಣದ ಟಿಕೆಟ್‌ನ್ನು ಒಟ್ಟಿಗೆ ಕಾಯ್ದಿರಿಸಿದಲ್ಲಿ ಬರುವ ಪ್ರಯಾಣ ದರದಲ್ಲಿ ಶೇ. 10ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಸಂಸ್ಥೆಯು ಹೇಳಿದೆ.

ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟç ಹಾಗೂ ಪುದುಚೇರಿಯಲ್ಲಿ ಇರುವ ಪ್ರಮುಖ ನಗರಗಳಲ್ಲಿ ನಿಗಮದ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್‌ಗಳು ಇದ್ದು, ಇವುಗಳ ಮೂಲಕ ಸಹ ಮುಂಗಡವಾಗಿ ಆಸನಗಳನ್ನು ನಿಗಮದ ಸಾರಿಗೆಗಳಿಗೆ ಕಾಯ್ದಿರಿಸಬಹುದಾಗಿದೆ. ಇದನ್ನೂ ಓದಿ: ಕಾಂಗ್ರೆಸ್‌ನ ಪಠಾಣ್ ರೌಡಿಶೀಟರ್ ಅಂದಿದ್ದು ಅವರ ಪಕ್ಷದವರೇ, ಅವ್ರೇ ಸ್ಪಷ್ಟೀಕರಣ ಕೊಡಲಿ- ಬೊಮ್ಮಾಯಿ

ಕಾರ್ಯಾಚರಣೆ ಮಾಡಲಾಗುವ ಹೆಚ್ಚುವರಿ ಸಾರಿಗೆಗಳು, ಅವುಗಳು ಹೊರಡುವ ಸ್ಥಳ ಹಾಗೂ ವೇಳಾ ವಿವರಗಳನ್ನು ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಅಂತರ್‌ಜಾಲ ವ್ಯವಸ್ಥೆಯಲ್ಲಿ ಹಾಗೂ ಸಾರಿಗೆ ನಿಗಮದ ವೆಬ್‌ಸೈಟ್‌ನಲ್ಲಿ ಸಾರ್ವಜನಿಕ ಮಾಹಿತಿಗಾಗಿ ಒದಗಿಸಲಾಗಿದೆ. ಸದರಿ ಹೆಚ್ಚುವರಿ ಸಾರಿಗೆಗಳಲ್ಲಿ ಸಂಚರಿಸುವ ಪ್ರಯಾಣಿಕರು ಕಾಯ್ದಿರಿಸುವ ಮುಂಗಡ ಚೀಟಿಗಳಲ್ಲೂ ಕೂಡ ವಾಹನ ಹೊರಡುವ ಸ್ಥಳದ ವಿವರ ನಮೂದಿಸಲಾಗಿದೆ. ಅಲ್ಲದೇ, ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲ್ಲೂಕು/ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು ಎಂದು ಮುಖ್ಯ ಸಂಚಾರ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

TAGGED:DeepavaliDeepavali Special BusDiwaliKannada Rajyotsavaksrtcಕನ್ನಡ ರಾಜ್ಯೋತ್ಸವಕೆಎಸ್‍ಆರ್‍ಟಿಸಿದೀಪಾವಳಿದೀಪಾವಳಿ ವಿಶೇಷ ಬಸ್‌
Share This Article
Facebook Whatsapp Whatsapp Telegram

You Might Also Like

Yadagiri chemical water
Districts

ಯಾದಗಿರಿ | ಕಲುಷಿತ ನೀರು ಸೇವನೆ ಶಂಕೆ – ಮೂವರು ಸಾವು, 20 ಮಂದಿ ಅಸ್ವಸ್ಥ

Public TV
By Public TV
51 minutes ago
Darshan Devil making in Udaipur 2
Cinema

ಡೆವಿಲ್‌ಗೆ ಯುದ್ಧಾತಂಕ – ವಿದೇಶಿ ಪ್ರವಾಸ ಮರುನಿಗದಿ ಕೋರಿ ದರ್ಶನ್ ಅರ್ಜಿ

Public TV
By Public TV
9 minutes ago
supreme Court 1
Latest

ಬಿಹಾರ ಮತದಾರರ ಪಟ್ಟಿ ನವೀಕರಣ: ಜುಲೈ 10 ರಂದು ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ

Public TV
By Public TV
20 minutes ago
Kiccha Sudeep
Cinema

ಕಿಚ್ಚ ಸುದೀಪ್ ಹೊಸ ಚಿತ್ರಕ್ಕೆ ಚೆನ್ನೈನಲ್ಲಿ ಮುಹೂರ್ತ

Public TV
By Public TV
24 minutes ago
Tejasvi Surya
Bengaluru City

ಮೆಟ್ರೋ ದರ ಏರಿಕೆ| ನೀವಿಷ್ಟು ಪ್ರಬಲರಾಗಿದ್ದರೂ ನಿಮಗೆ ವರದಿ ಸಿಗುತ್ತಿಲ್ಲವೇ? – ಬಿಎಂಆರ್‌ಸಿಎಲ್‌ಗೆ ಹೈಕೋರ್ಟ್‌ ನೋಟಿಸ್‌ ಜಾರಿ

Public TV
By Public TV
50 minutes ago
Chitradurga Heart Attack
Chitradurga

ಚಿತ್ರದುರ್ಗದಲ್ಲಿ ಹೃದಯಾಘಾತಕ್ಕೆ ವ್ಯಕ್ತಿ ಬಲಿ

Public TV
By Public TV
53 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?