ಅಹಮದಾಬಾದ್: ಗೋಧ್ರಾ ಹತ್ಯಾಕಾಂಡ ಪ್ರಕರಣದಲ್ಲಿ 11 ದೋಷಿಗಳಿಗೆ ವಿಧಿಸಲಾಗಿದ್ದ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಗೆ ಮಾರ್ಪಾಡಿಸಿ ಗುಜರಾತ್ ಹೈಕೋರ್ಟ್ ತೀರ್ಪು ಪ್ರಕಟಿಸಿದೆ.
2011ರ ಫೆಬ್ರವರಿಯಲ್ಲಿ ವಿಶೇಷ ನ್ಯಾಯಾಲಯ(ಎಸ್‍ಐಟಿ) 11 ದೋಷಿಗಳಿಗೆ ಗಲ್ಲು ಶಿಕ್ಷೆ ಮತ್ತು 31 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಈ ಆದೇಶವನ್ನು ಮಾರ್ಪಾಡುಗೊಳಿಸಿದ ನ್ಯಾಯಾಲಯ ಗಲ್ಲು ಶಿಕ್ಷೆಯನ್ನು ಜೀವಾವಧಿಗೆ ಇಳಿಸಿ ಸೋಮವಾರ ತನ್ನ ತೀರ್ಪು ಪ್ರಕಟಿಸಿದೆ.
Advertisement
ಎಸ್‍ಐಟಿ ಪ್ರಕರಣದಿಂದ 63 ಜನರನ್ನು ಕೈಬಿಟ್ಟದ್ದನ್ನು ಪ್ರಶ್ನಿಸಿ ಗುಜರಾತ್ ಸರ್ಕಾರ ಸಲ್ಲಿಸಿದ್ದ ಮೇಲನವಿಯನ್ನು ನ್ಯಾ. ಎಎಸ್ ದಾವೆ ಮತ್ತು ಜಿಆರ್ ಉದಹರಿ ನೇತೃತ್ವದ ದ್ವಿಸದಸ್ಯ ಪೀಠ ವಜಾಗೊಳಿಸಿದೆ.
Advertisement
ಇದೇ ವೇಳೆ 2002 ಗಲಭೆ ನಿಯಂತ್ರಿಸಲು ರಾಜ್ಯ ಸರ್ಕಾರ ಮತ್ತು ರೈಲ್ವೇ ಸಚಿವಾಲಯ ವಿಫಲವಾಗಿದೆ ಎಂದು ಪೀಠ ಅಸಮಾಧಾನ ವ್ಯಕ್ತಪಡಿಸಿದೆ. ಇದೇ ವೇಳೆ ಮೃತಪಟ್ಟ ಸದಸ್ಯರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ ಧನವನ್ನು ವಿತರಿಸುವಂತೆ ರಾಜ್ಯ ಸರ್ಕಾರಕ್ಕೆ ಮತ್ತು ರೈಲ್ವೇಗೆ ಸೂಚಿಸಿದೆ.
Advertisement
ಏನಿದು ಪ್ರಕರಣ?
2002ರ ಫೆಬ್ರವರಿ 22 ರಂದು ಗೋದ್ರಾದಲ್ಲಿ ಸಬರಮತಿ ಎಕ್ಸ್ ಪ್ರೆಸ್ ನ ಎಸ್6 ಬೋಗಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಪರಿಣಾಮ ಆಯೋಧ್ಯೆಯಿಂದ ಗುಜರಾತ್ ಗೆ ಮರಳುತ್ತಿದ್ದ 59 ಕರಸೇವಕರು ಸಜೀವವಾಗಿ ದಹನವಾಗಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ವಿಶೇಷ ಕೋರ್ಟ್ 11 ದೋಷಿಗಳಿಗೆ ಗಲ್ಲು ಶಿಕ್ಷೆ, 20 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ಪ್ರಕರಣದಿಂದ 63 ಮಂದಿಯನ್ನು ಖುಲಾಸೆಗೊಳಿಸಿತ್ತು. ಈ ಹತ್ಯಾಕಾಂಡದ ನಂತರ ಗುಜರಾತ್‍ನ ಅನೇಕ ಕಡೆಗಳಲ್ಲಿ ಕೋಮು ಗಲಾಭೆ ಸಂಭವಿಸಿ 1,200 ಕ್ಕೂ ಹೆಚ್ಚು ಮಂದಿಯ ಹತ್ಯೆಯಾಗಿತ್ತು.
Advertisement
ಗುಜರಾತ್ ಸರ್ಕಾರ ಈ ಪ್ರಕರಣದ ತನಿಖೆಗಾಗಿ ರಚಿಸಿದ್ದ ನಾನಾವತಿ ಆಯೋಗವು, ಸಬರಮತಿ ಎಕ್ಸ್‍ಪ್ರೆಸ್ ರೈಲಿನ ಎಸ್-6 ಬೋಗಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಲ್ಲ. ಪೆಟ್ರೋಲ್ ಸುರಿದು ಬೋಗಿಗೆ ಬೆಂಕಿ ಹಚ್ಚಲಾಗಿದೆ ಎಂದು ವರದಿಯನ್ನು ಸಲ್ಲಿಸಿತ್ತು.
HC confirmed conviction of all 31 accused persons; Even High Court has believed the case of conspiracy and unlawful assembly: Spl Prosecutor pic.twitter.com/N5vkHXENAB
— ANI (@ANI) October 9, 2017