ಅಹ್ಮದಾಬಾದ್ : ಅಹ್ಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ 49 ಅಪರಾಧಿಗಳಲ್ಲಿ 38 ಮಂದಿಗೆ ಮರಣ ದಂಡನೆ ವಿಧಿಸಿ ನ್ಯಾಯಲಯ ಆದೇಶ ಹೊರಡಿಸಿದೆ. ಪ್ರಕರಣ ಸಂಬಂಧ ತ್ವರಿತ ವಿಚಾರಣೆಗೆ ಗೊತ್ತುಪಡಿಸಿದ ವಿಶೇಷ ನ್ಯಾಯಲಯ ಇಂದು ಈ ಆದೇಶ ನೀಡಿದೆ.
ಕಾನೂನು ಬಾಹಿರ ಚಟುವಟಿಕೆಗಳನ್ನು ತಡೆಗಟ್ಟುವ ಕಾಯಿದೆ ( UAPA ) ಮತ್ತು ಭಾರತೀಯ ದಂಡ ಸಂಹಿತೆ 302ರ ಅಡಿಯಲ್ಲಿ ತೀರ್ಪು ಪ್ರಕಟಿಸಿದ ನ್ಯಾ. ಎ.ಆರ್ ಪಟೇಲ್, ಉಳಿದ 11 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿದರು. ಇನ್ನು ಸ್ಫೋಟದಲ್ಲಿ ಮೃತಪಟ್ಟವರಿಗೆ 1 ಲಕ್ಷ ರೂ. ಗಂಭೀರ ಗಾಯಗೊಂಡವರಿಗೆ 50,000 ರೂಪಾಯಿ ಮತ್ತು ಅಪ್ರಾಪ್ತರಿಗೆ 25,000 ರೂಪಾಯಿ ಪರಿಹಾರವನ್ನು ನೀಡುವಂತೆ ಸೂಚಿಸಿದ್ದಾರೆ.
Advertisement
2008 Ahmedabad serial bomb blast case | A special court pronounces death sentence to 38 out of 49 convicts pic.twitter.com/CtcEWGze2z
— ANI (@ANI) February 18, 2022
Advertisement
ಶಸ್ತ್ರಾಸ್ತ್ರ ಕಾಯಿದೆಯಡಿಯಲ್ಲಿ ಅಪರಾಧಿ ಮತ್ತು ಮರಣದಂಡನೆ ಶಿಕ್ಷೆಗೆ ಒಳಗಾದವರ ಪೈಕಿ ಉಸ್ಮಾನ್ ಅಗರಬತ್ತಿವಾಲಾನಿಗೆ ಹೆಚ್ಚುವರಿಯಾಗಿ ಶಸ್ತ್ರಾಸ್ತ್ರ ಕಾಯಿದೆಯಡಿಯಲ್ಲಿ ಶಿಕ್ಷೆಗಾಗಿ ಒಂದು ವರ್ಷ ಜೈಲು ಶಿಕ್ಷೆಯನ್ನು ನೀಡಲಾಗಿದೆ. ಇದನ್ನೂ ಓದಿ: ವಿದ್ಯಾರ್ಥಿಗಳಲ್ಲಿ ಸಮಸಮಾಜದ ಹೆಮ್ಮೆ ಮೂಡಿಸುವುದು ಇಂದಿನ ಅಗತ್ಯ – ಸಿಎಂಗೆ ಸುರೇಶ್ ಕುಮಾರ್ ಮನವಿ
Advertisement
ಐಪಿಸಿ, ಯುಎಪಿಎ, ಸ್ಫೋಟಕ ವಸ್ತುಗಳ ಕಾಯಿದೆ ಮತ್ತು ಸಾರ್ವಜನಿಕ ಆಸ್ತಿ ಹಾನಿ ತಡೆ ಕಾಯ್ದೆಯ ಪ್ರತಿ ಸೆಕ್ಷನ್ ಅಡಿಯಲ್ಲಿ 49 ಅಪರಾಧಿಗಳಲ್ಲಿ ಪ್ರತಿಯೊಬ್ಬರಿಗೂ ನೀಡಲಾದ ಶಿಕ್ಷೆಗಳು ಏಕಕಾಲದಲ್ಲಿ ನಡೆಯುತ್ತವೆ, ನ್ಯಾಯಾಲಯವು 48 ಅಪರಾಧಿಗಳಿಗೆ ತಲಾ 2.85 ಲಕ್ಷ ರೂ. ಅಗರಬತ್ತಿವಾಲಾಗೆ ಶಸ್ತ್ರಾಸ್ತ್ರ ಕಾಯ್ದೆಯಡಿ ಹೆಚ್ಚುವರಿ ಶಿಕ್ಷೆಯೊಂದಿಗೆ 2.88 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ.
Advertisement
38 sentenced to death, 11 get life imprisonment in 2008 Ahmedabad serial bomb blast case
Read @ANI Story | https://t.co/zhnrssAMaa#2008serialbombblastcase #2008Ahmedabadblast pic.twitter.com/eRSSOd4gBP
— ANI Digital (@ani_digital) February 18, 2022
ಜುಲೈ 26, 2008 ರಂದು ಅಹಮದಾಬಾದ್‍ನಲ್ಲಿರುವ ಸಿವಿಲ್ ಆಸ್ಪತ್ರೆ, ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಷನ್ ನಡೆಸುತ್ತಿರುವ ಎಲ್‍ಜಿ ಆಸ್ಪತ್ರೆ, ಬಸ್‍ಗಳು, ನಿಲ್ಲಿಸಿದ ಬೈಸಿಕಲ್‍ಗಳು, ಕಾರುಗಳು ಮತ್ತು ಇತರ ಸ್ಥಳಗಳು ಸೇರಿದಂತೆ ವಿವಿಧ ಸ್ಥಳಗಳಲ್ಲಿ 22 ಬಾಂಬ್‍ಗಳನ್ನು ಸ್ಫೋಟಿಸಲಾಗಿತ್ತು. ಈ ಘಟನೆಯಲ್ಲಿ 56 ಜನರು ಸಾವನ್ನಪ್ಪಿದರು. ಸುಮಾರು 200 ಮಂದಿ ಗಾಯಗೊಂಡಿದ್ದರು. ಕೆಲವು ಮಾಧ್ಯಮ ಸಂಸ್ಥೆಗಳಿಗೆ ಕಳುಹಿಸಲಾದ ಇಮೇಲ್‍ಗಳಲ್ಲಿ, ಇಂಡಿಯನ್ ಮುಜಾಹಿದೀನ್ (ಐಎಂ) ಸಂಘಟನೆಯು ಈ ದಾಳಿಯ ಹೊಣೆಯನ್ನು ಹೊತ್ತುಕೊಂಡಿತ್ತು. ಇದನ್ನೂ ಓದಿ: ಹಿಜಬ್ ಬಳಿಕ ಸಿಂಧೂರ ವಿವಾದ – ಹಣೆಗೆ ಕುಂಕುಮ ಹಚ್ಚಿಕೊಂಡು ಬಂದ ವಿದ್ಯಾರ್ಥಿಗೆ ಪ್ರವೇಶ ನಿರಾಕರಣೆ