ವಾಷಿಂಗ್ಟನ್: ಒಲಿಂಪಿಕ್ಸ್ ಕ್ರೀಡೆಯಲ್ಲಿ (2016 Olympic) ಮೂರು ಪದಕಗಳು ಹಾಗೂ ಎರಡು ಬಾರಿ ವಿಶ್ವಚಾಂಪಿಯನ್ ಶಿಪ್ ಪ್ರಶಸ್ತಿಗಳನ್ನು ಗೆದ್ದಿದ್ದ ಟೋರಿ ಬೋವಿ (32) (Tori Bowie) ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ.
ಹಲವು ದಿನಗಳ ಹಿಂದೆ ಆರೋಗ್ಯ ತಪಾಸಣೆಗಾಗಿ ತೆರಳಿದ್ದ ಬೋವಿ ಫ್ಲೋರಿಡಾದಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಆದರೂ ಈ ಬಗ್ಗೆ ಸಂಬಂಧಪಟ್ಟ ಇಲಾಖೆ ತನಿಖೆ ನಡೆಸಲು ಹಿಂದೇಟು ಹಾಕಿದೆ ಎಂಬ ಆರೋಪಗಳು ಕೇಳಿಬಂದಿದೆ.
Advertisement
Advertisement
ಐಒಸಿ ಅಧ್ಯಕ್ಷ ಥಾಮಸ್ ಬಾಚ್ ತಮ್ಮ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ಟೋರಿ ಬೋವಿ ಹಠಾತ್ ನಿಧನವು ಆಘಾತ ತಂದಿದೆ. ಅವರ ಕುಟುಂಬಸ್ಥರು ಹಾಗೂ ಸ್ನೇಹಿತರಿಗೆ ದುಃಖ ಭರಿಸುವ ಶಕ್ತಿ ಕೊಡಲಿ ಎಂದು ಪ್ರಾರ್ಥಿಸುವುದಾಗಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಪಂಜಾಬ್ ವಿರುದ್ಧ ಸೇಡು ತೀರಿಸಿಕೊಂಡ ಮುಂಬೈ – 6 ವಿಕೆಟ್‌ಗಳ ಭರ್ಜರಿ ಜಯ
Advertisement
Advertisement
ಟೋರಿ 2016ರ ಒಲಿಂಪಿಕ್ಸ್‌ನಲ್ಲಿ ಮೂರು ಪದಗಳನ್ನು ಬಾಚಿಕೊಂಡಿದ್ದರು. 4*100 ಮೀಟರ್ ರಿಲೇನಲ್ಲಿ ಚಿನ್ನದ ಪದಕ (Gold Medallist), 100 ಮೀಟರ್ ರಿಲೇನಲ್ಲಿ (Relay) ಬೆಳ್ಳಿ ಹಾಗೂ 200 ಮೀಟರ್ ಓಟದಲ್ಲಿ ಕಂಚಿನ ಪದಕಗಳನ್ನ ಗೆದ್ದಿದ್ದರು. 2017ರ ವಿಶ್ವಚಾಂಪಿಯನ್‌ಶಿಪ್‌ನಲ್ಲಿ 100 ಮೀಟರ್ ಓಟ ಮತ್ತು 4*100 ಮೀಟರ್ ರಿಲೇನಲ್ಲಿ ಚಿನ್ನದ ಪದಕ, 2019ರಲ್ಲಿ ನಡೆದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್‌ನಲ್ಲಿ ಲಾಂಗ್ ಜಂಪ್‌ನಲ್ಲಿ 4ನೇ ಸ್ಥಾನ ಪಡೆದು ಮಿಂಚಿದ್ದರು. ಕೊನೆಯದ್ದಾಗಿ 2022ರಲ್ಲಿ ಅಂತಾರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು. ಇದನ್ನೂ ಓದಿ: IPL 2023: ಜಯದ ನಿರೀಕ್ಷೆಯಲ್ಲಿದ್ದ ಚೆನ್ನೈಗೆ ಭಾರೀ ನಿರಾಸೆ – ಮಳೆಗೆ ಪಂದ್ಯ ರದ್ದು