ಇಂಡೋ-ಪಾಕ್ ಬಿಕ್ಕಟ್ಟು, ಭಾರತದಿಂದ ಯುಎಇಗೆ ಏಷ್ಯಾ ಕಪ್ ಸ್ಥಳಾಂತರ

Public TV
1 Min Read
ind vs pak 1

ನವದೆಹಲಿ: 2018 ರ ಸೆಪ್ಟೆಂಬರ್ ನಲ್ಲಿ ಭಾರತದಲ್ಲಿ ನಡೆಯ ಬೇಕಿದ್ದ ಏಷ್ಯಾಕಪ್ ಟೂರ್ನಿ ಯುನೈಟೆಡ್ ಅರಬ್ ಎಮಿರೈಟ್ಸ್(ಯುಎಇ)ಗೆ ಸ್ಥಳಾಂತರಗೊಂಡಿದೆ.

ಭಾರತ-ಪಾಕಿಸ್ತಾನ ನಡುವಿನ ರಾಜಕೀಯ ಬಿಕ್ಕಟ್ಟಿನಿಂದಾಗಿ ಸರಣಿಯನ್ನು ಸ್ಥಳಾಂತರಿಸುವ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಮಂಗಳವಾರ ಏಷ್ಯಾ ಕ್ರಿಕೆಟ್ ಕೌನ್ಸಿಲ್ ತಿಳಿಸಿದೆ.

ind vs pak 2

ಕಳೆದ ಕೆಳ ದಿನಗಳ ಹಿಂದೆ ಪಾಕಿಸ್ತಾನ ಭಾರತದಲ್ಲಿ ಸೆ.13 ರಿಂದ 28 ರವರೆಗೆ ನಡೆಯಲಿರುವ 14ನೇ ಆವೃತ್ತಿಯ ಏಷ್ಯಾಕಪ್ ಟೂರ್ನಿಯನ್ನು ತಟಸ್ಥ ಸ್ಥಳದಲ್ಲಿ ನಡೆಸಲು ಐಸಿಸಿಗೆ ಮನವಿ ಸಲ್ಲಿಸಿತ್ತು. ಏಷ್ಯಾ ಕ್ರಿಕೆಟ್ ಕೌನ್ಸಿಲ್ ಯುಎಇನಲ್ಲಿ ಟೂರ್ನಿ ಆಯೋಜಿಸಲು ನಿರ್ಧರಿಸಿದೆ ಎಂದು ಎಸಿಸಿ ಹಾಗೂ ಪಿಸಿಬಿ ಅಧ್ಯಕ್ಷ ನಜಾಂ ಸೇಥಿ ಹೇಳಿದ್ದಾರೆ.

ಈ ಬಾರಿ ಟೂರ್ನಿಯಲ್ಲಿ ಭಾರತ, ಪಾಕಿಸ್ತಾನ, ಶ್ರೀಲಂಕಾ, ಬಾಂಗ್ಲಾದೇಶ ಮತ್ತು ಆಫ್ಘಾನಿಸ್ತಾನ ತಂಡಗಳು ಕಣಕ್ಕಿಳಿಯಲಿವೆ. 2016 ರಲ್ಲಿ ಏಷ್ಯಾಕಪ್ ಟೂರ್ನಿಯು ಟಿ20 ಪಂದ್ಯಾವಳಿಯಾಗಿ ಬದಲಾಯಿಸಲಾಗಿತ್ತು. ಇದಕ್ಕೂ ಮುನ್ನ ಟೂರ್ನಿಯಲ್ಲಿ ಏಕದಿನ ಪಂದ್ಯ ಆಯೋಜಿಸಲಾಗುತ್ತಿತ್ತು. ಈ ಹಿಂದೆ 1984 ರ ಏಷ್ಯಾ ಕಪ್ ಟೂರ್ನಿಯನ್ನು ಯುಎಇ ನಲ್ಲಿ ಆಯೋಜಿಸಲಾಗಿತ್ತು.

Share This Article
Leave a Comment

Leave a Reply

Your email address will not be published. Required fields are marked *