ಚಿಕ್ಕಬಳ್ಳಾಪುರ: ಮುಂಬರುವ ಚುನಾವಣೆಯಲ್ಲಿ ಯಡಿಯೂರಪ್ಪ ರನ್ನು ಕೇಳಿ ನಾನು ಸ್ಪರ್ಧೆ ಮಾಡಬೇಕೇ ಎಂದು ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಇಂದು ಹೆಬ್ಬಾಳ-ನಾಗವಾರ ಏತ ನೀರಾವರಿ ಯೋಜನೆಗೆ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಯಾರು ಎಲ್ಲಿ ಬೇಕಾದ್ರೂ ಸ್ಪರ್ಧೆ ಮಾಡಬಹುದು. ಉತ್ತರ ಕರ್ನಾಟಕದ ಜನ ಕೂಡ ನನ್ನನ್ನ ಬಹಳ ದಿನದಿಂದ ಕರೆಯುತ್ತಿದ್ದಾರೆ. ಅಂತಿಮವಾಗಿ ಹೈಕಮಾಂಡ್ ತೀರ್ಮಾನ ಮಾಡಿದ ಕಡೆ ಸ್ಪರ್ಧಿಸುತ್ತೇನೆ ಎಂದು ಹೇಳಿದರು.
Advertisement
ರಾಜ್ಯ ಸರ್ಕಾರದ ಕೆಲ ಸಚಿವರ, ಸಿಎಂ ಸಂಬಂಧಿಗಳ ಭ್ರಷ್ಟಾಚಾರ ದಾಖಲೆಗಳನ್ನು ಬಿಡುಗಡೆ ಮಾಡುತ್ತೇವೆ ಎಂದಿರುವ ಬಿಜೆಪಿ ನಾಯಕರ ಹೇಳಿಕೆಗೆ, ಮೊದಲು ಅವರ ಮೇಲೆ ಇರುವ ಭ್ರಷ್ಟಾಚಾರದ ಬಗ್ಗೆ ಜನರಿಗೆ ಉತ್ತರ ಕೊಡಲಿ. ಯಡಿಯೂರಪ್ಪ ಅವರ ಮೇಲೆ 16 ಕೇಸ್ ಸುಪ್ರೀಂ ಕೋರ್ಟ್‍ನಲ್ಲಿದೆ. ಜೈಲಿಗೆ ಹೋಗಿ ಬಂದಿದ್ದಾರೆ ಅದೆಕ್ಕೆಲ್ಲಾ ಅವರು ಮೊದಲು ಉತ್ತರ ಕೊಡಲಿ. ನನ್ನ ಮೇಲೆ ಯಾವುದೇ ಭ್ರಷ್ಟಾಚಾರದ ಆರೋಪಗಳಿಲ್ಲ ಎಂದರು.
Advertisement
ಭಿಕ್ಷೆ ರೀತಿ ರಾಜ್ಯ ಸರ್ಕಾರ ರೈತರ ಸಾಲ ಮನ್ನಾ ಮಾಡಿದೆ ಎನ್ನುವ ಯಡಿಯೂರಪ್ಪ ಹೇಳಿಕೆಗೆ, ಬಿಎಸ್‍ವೈ ಒಬ್ಬ ಡೋಂಗಿ ಮನುಷ್ಯ. ಸತ್ಯ ಹೇಳೋದೆ ಗೊತ್ತೇ ಇಲ್ಲ. ಅವರಿಗೆ ರೈತರ ಸಾಲಮನ್ನಾ ಬಗ್ಗೆ ಮಾತನಾಡಲು ಯಾವ ನೈತಿಕತೆ ಇದೆ? ರೈತರ ಬಗ್ಗೆ ಕಾಳಜಿ ಇದ್ದರೆ ಮೊದಲು ರಾಷ್ಟ್ರೀಕೃತ ಬ್ಯಾಂಕುಗಳು ಸಾಲಾ ಮನ್ನಾ ಮಾಡಿಸಲಿ ಎಂದು ವಾಗ್ದಾಳಿ ನಡೆಸಿದರು.