ಜೈಪುರ: 2019ರ ಐಪಿಎಲ್ ಆವೃತ್ತಿಯಲ್ಲಿ ಭಾರತದ ಯುವ ಆಟಗಾರರು ಹೆಚ್ಚಿನ ಅವಕಾಶಗಳನ್ನು ಪಡೆದಿದ್ದು, 20 ಲಕ್ಷ ರೂ. ಮೂಲ ಬೆಲೆ ಹೊಂದಿದ್ದ 16 ವರ್ಷದ ಪ್ರಯಾಸ್ ರೇ ಬರ್ಮನ್ ಬರೋಬ್ಬರಿ 1.5 ಕೋಟಿ ರೂ.ಗೆ ಹರಾಜು ಆಗುವ ಮೂಲಕ ದಾಖಲೆ ಬರೆದಿದ್ದಾರೆ.
ಬೆಂಗಾಲ್ ತಂಡದ ಲೆಗ್ ಸ್ಪಿನ್ನರ್ ಆಗಿರುವ ಪ್ರಯಾಸ್ 16 ವರ್ಷಕ್ಕೆ ಕೋಟಿ ರೂ. ಮೊತ್ತಕ್ಕೆ ಹರಾಜದ ಹೆಗ್ಗಳಿಕೆಯನ್ನು ಪಡೆದಿದ್ದು, ಆರ್‌ಸಿಬಿ ತಂಡ ಪ್ರಯಾಸ್ ಅವರನ್ನು ಖರೀದಿಸಿದೆ. ಕೇವಲ ಪ್ರಯಾಸ್ ಮಾತ್ರವಲ್ಲದೇ ಹಲವು ಯುವ ಭಾರತೀಯ ಆಟಗಾರರಿಗೆ ಈ ಬಾರಿಯ ಐಪಿಎಲ್ ಹರಾಜು ಪ್ರಕ್ರಿಯೆ ಹಲವು ಅಚ್ಚರಿ ಫಲಿತಾಂಶಗಳನ್ನು ನೀಡಿದೆ.
Advertisement
Advertisement
ಯುವ ಆಟಗಾರ ಕೊಹ್ಲಿ ನಾಯಕತ್ವದ ತಂಡಕ್ಕೆ ಆಗುವ ಮೂಲಕ ತನ್ನ ಸಾಮರ್ಥ್ಯವನ್ನ ಸಾಬೀತು ಪಡಿಸಲು ಉತ್ತಮ ಅವಕಾಶವನ್ನು ಪಡೆದಿದ್ದು, `ಮಿಸ್ಟರಿ’ ಸ್ಪಿನ್ನರ್ ಎಂಬ ಹೆಸರು ಪಡೆದಿರುವ ಪ್ರಯಾಸ್ 20 ರನ್ ನೀಡಿ 4 ವಿಕೆಟ್ ಪಡೆದಿರುವುದು ಇದೂವರೆಗಿನ ಅತ್ಯುತ್ತಮ ಪ್ರದರ್ಶನವಾಗಿದೆ. 2002 ರಲ್ಲಿ ಜನಿಸಿರುವ ಪ್ರಯಾಸ್ ಬೌಲರ್ ಮಾತ್ರವಲ್ಲದೇ ಉತ್ತಮ ಆಲ್‍ರೌಂಡರ್ ಆಗಿದ್ದು, ಬಲಗೈ ಬ್ಯಾಟ್ಸ್ ಮನ್ ಕೂಡ ಆಗಿದ್ದಾರೆ.
Advertisement
ಇದುವರೆಗೂ ಆಡಿರುವ 9 ಲಿಸ್ಟ್ ಪಂದ್ಯಗಳನ್ನು ಆಡಿರುವ ಪ್ರಯಾಸ್ 6 ಇನ್ನಿಂಗ್ಸ್ ಗಳಲ್ಲಿ ಬ್ಯಾಟಿಂಗ್ ನಡೆಸಿ 47 ರನ್ ಗಳಿಸಿದ್ದರೆ ಹಾಗೂ ಬೌಲಿಂಗ್‍ನಲ್ಲಿ 11 ವಿಕೆಟ್ ಪಡೆದಿದ್ದಾರೆ. ಉಳಿದಂತೆ ವಿಜಯ್ ಹಜಾರೆ ಟೂರ್ನಿಯಲ್ಲಿ ಉತ್ತಮ ಎಕಾನಮಿಯೊಂದಿಗೆ 11 ವಿಕೆಟ್ ಪಡೆದುಕೊಂಡಿದ್ದಾರೆ. ಮೊದಲು ದೆಹಲಿ ತಂಡದ ಪರ ಆಡಿದ್ದ ಪ್ರಯಾಸ್ ಬಳಿಕ ಬೆಂಗಾಲ್ ತಂಡವನ್ನು ಸೇರಿಕೊಂಡಿದ್ದರು.
Advertisement
ರಾತ್ರೋರಾತ್ರಿ ದೇಶಾದ್ಯಂತ ಸುದ್ದಿಯಾಗಿರುವ ಪ್ರಯಾಸ್ ಕೆಲ ದಿನಗಳ ಹಿಂದೆ ಟೀಂ ಇಂಡಿಯಾ ನಾಯಕ ಕೊಹ್ಲಿ ಜೊತೆಗೆ ಸೆಲ್ಫಿ ತೆಗೆದುಕೊಳ್ಳಲು ಹವಣಿಸುತ್ತದ್ದರು. ಆದರೆ ಇಂದು ಕೊಹ್ಲಿ ನಾಯಕತ್ವದ ತಂಡದಲ್ಲಿ ಸ್ಥಾನಗಳಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪ್ರಯಾಸ್ ಆಯ್ಕೆಯ ಕುರಿತು ಭಾರೀ ಚರ್ಚೆ ಕೂಡ ನಡೆದಿದ್ದು, ಪ್ರಯಾಸ್ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Name : Prayas Ray Barman
Role : All Rounder
Age : **15**
Base Price : 20 Lakh
Sold Price : 150 Lakh to @RCBTweets
All Indian young players in this #IPLAuction currently be like #IPLAuction2019 #AuctionOnStar pic.twitter.com/x5lil4330l
— Sagar Patil (@pro_sp21) December 18, 2018
15 years old Prayas Ray Barman gets Rs. 1.5 crores in the IPL auction. Mind Blowing. @RCBTweets
— …. (@ynakg2) December 18, 2018
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv