ಪುಲ್ವಾಮಾ ದಾಳಿಯ ಪ್ರಮುಖ ಆರೋಪಿ ಹೃದಯಾಘಾತದಿಂದ ಸಾವು

Public TV
1 Min Read
pulwama attack 5

ಶ್ರೀನಗರ: 2019ರಲ್ಲಿ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸಿಆರ್‌ಪಿಎಫ್‌ ಬೆಂಗಾವಲು ಪಡೆಯ ಮೇಲೆ ನಡೆದ ಭೀಕರ ಭಯೋತ್ಪಾದಕ ದಾಳಿಯ ಪ್ರಮುಖ ಆರೋಪಿ ಹೃದಯಾಘಾತದಿಂದ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

ಮೃತನನ್ನು ಕಾಕಪೋರಾದ ಹಾಜಿಬಲ್ ಗ್ರಾಮದ ಬಿಲಾಲ್ ಅಹ್ಮದ್ ಕುಚೇ ಎಂದು ಗುರುತಿಸಲಾಗಿದೆ. ಪ್ರಕರಣ ಸಂಬಂಧ 19 ಮಂದಿಯ ಮೇಲೆ ಆರೋಪ ಹೊರಿಸಲಾಗಿತ್ತು.

ಈ ಬಗ್ಗೆ ಮಾಹಿತಿ ನೀಡಿರುವ ಅಧಿಕಾರಿಗಳು, ಆರೋಪಿ ಸೆ.17 ರಂದು ಕಿಶ್ತ್ವಾರ್ ಜಿಲ್ಲಾ ಕಾರಾಗೃಹದಲ್ಲಿ ಅನಾರೋಗ್ಯಕ್ಕೆ ಒಳಗಾಗಿದ್ದ. ಬಳಿಕ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆತ ಸೋಮವಾರ ರಾತ್ರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಬಾಡಿಗೆಗಿದ್ದ ಮಹಿಳೆಯ ಮನೆಯ ಬಾತ್‍ರೂಮ್, ಬೆಡ್‍ರೂಮ್‍ನಲ್ಲಿ ಹಿಡನ್ ಕ್ಯಾಮೆರಾ ಇಟ್ಟಿದ ಕಾಮುಕ ಅರೆಸ್ಟ್

ಫೆ.14, 2019 ರಂದು ಪುಲ್ವಾಮಾದ ಲೆಥ್‍ಪೋರಾದಲ್ಲಿ ಪಾಕಿಸ್ತಾನ ಮೂಲದ ಜೈಶ್-ಎ-ಮೊಹಮ್ಮದ್‍ನ ಭಯೋತ್ಪಾದಕ ತನ್ನ ಸ್ಫೋಟಕ ತುಂಬಿದ ಕಾರನ್ನು ಬೆಂಗಾವಲು ಪಡೆಯ ವಾಹನಕ್ಕೆ ಡಿಕ್ಕಿ ಹೊಡೆಸಿದ್ದ. ಇದರಿಂದ 40 ಸಿಆರ್‌ಪಿಎಫ್‌ ಸಿಬ್ಬಂದಿ ಸಾವನ್ನಪ್ಪಿ, 8 ಮಂದಿ ಗಾಯಗೊಂಡಿದ್ದರು.

2020ರ ಆ.25 ರಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‍ಐಎ) ಕುಚೇ ಮತ್ತು ಪ್ರಕರಣದ ಇತರ 18 ಆರೋಪಿಗಳ ವಿರುದ್ಧ ಚಾರ್ಜ್‍ಶೀಟ್ ಸಲ್ಲಿಸಿತ್ತು. ಪ್ರಕರಣದಲ್ಲಿ ಬಂಧಿಸಲಾದ 7 ಆರೋಪಿಗಳಲ್ಲಿ ಈತನೂ ಸೇರಿದ್ದ.

ಆರೋಪಿಗಳಾದ ಶಾಕಿರ್ ಬಶೀರ್, ಇನ್ಶಾ ಜಾನ್ ಮತ್ತು ಪೀರ್ ತಾರಿಕ್ ಅಹ್ಮದ್ ಶಾ ಹಾಗೂ ಮೃತ ಆರೋಪಿ ದಾಳಿ ನಡೆಸಿದ್ದ ಉಗ್ರನಿಗೆ ಮತ್ತು ಜೆಎಂ ಭಯೋತ್ಪಾದಕರಿಗೆ ಆಶ್ರಯ ನೀಡಿದ್ದರು.

ದಾಳಿಯಲ್ಲಿ ಭಾಗಿಯಾದ ಮೂವರು ಪಾಕಿಸ್ತಾನಿಯರು ಸೇರಿದಂತೆ 6 ಭಯೋತ್ಪಾದಕರು ಪ್ರತ್ಯೇಕ ಎನ್‍ಕೌಂಟರ್‌ಗಳಲ್ಲಿ ಕೊಲ್ಲಲ್ಪಟ್ಟಿದ್ದರೆ, ಜೆಎಂ ಸಂಸ್ಥಾಪಕ ಮಸೂದ್ ಅಜರ್ ಸೇರಿದಂತೆ ಇನ್ನೂ 6 ಮಂದಿ ತಲೆಮರೆಸಿಕೊಂಡಿದ್ದಾರೆ. ಇದನ್ನೂ ಓದಿ: ಮೂರು ದಿನಗಳ ಅಮೆರಿಕ ಪ್ರವಾಸ ಮುಗಿಸಿ ಭಾರತಕ್ಕೆ ಹೊರಟ ಮೋದಿ

Share This Article