– ಲಸಿಕೆ ತಯಾರಿಸುತ್ತಿರುವ ಆಸ್ಟ್ರಾಜನಿಕಾ ಜೊತೆ ಚರ್ಚೆ
– ಎಲ್ಲರಿಗೂ ಉಚಿತ ಲಸಿಕೆ ನೀಡಲು ಸರ್ಕಾರ ಬದ್ಧ
ಬೆಂಗಳೂರು: 2021 ರ ಆರಂಭದಲ್ಲೇ ಕೋವಿಡ್ ಲಸಿಕೆ ದೊರೆಯುವ ನಿರೀಕ್ಷೆ ಇದ್ದು, ರಾಜ್ಯದ ಎಲ್ಲರಿಗೂ ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಆಸ್ಟ್ರಾಜನಿಕಾ ಸಂಸ್ಥೆಯ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
Advertisement
ಆಕ್ಸ್ಫರ್ಡ್ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಕೊರೊನಾ ಲಸಿಕೆಯ ಸಂಶೋಧನೆ ಮತ್ತು ಪ್ರಾಯೋಗಿಕ ಪರೀಕ್ಷೆಯಲ್ಲಿ ತೊಡಗಿರುವ ಆಸ್ತ್ರಾ ಜೆನೆಕಾ ಸಂಸ್ಥೆಯ ಪ್ರತಿನಿಧಿಗಳು ಇಂದು ಲಸಿಕೆ ಅಭಿವೃದ್ಧಿಯ ಪ್ರಗತಿ, ಅದರ ಸಾಧಕ-ಬಾಧಕಗಳ ಕುರಿತು ಮಾಹಿತಿ ನೀಡಿದರು. 2021ರ ಆರಂಭದ ವೇಳೆಗೆ ಲಸಿಕೆ ಲಭ್ಯವಾಗುವ ವಿಶ್ವಾಸ ವ್ಯಕ್ತಪಡಿಸಿದರು. (1/5) pic.twitter.com/VMMFeFG31J
— Dr Sudhakar K (@mla_sudhakar) October 27, 2020
Advertisement
ಪುಣೆಯ ಸೇರಂ ಸಂಸ್ಥೆ ಜೊತೆ ಆಸ್ಟ್ರಾಜನಿಕಾ ಸಂಸ್ಥೆಯು ಒಡಂಬಡಿಕೆ ಮಾಡಿಕೊಂಡು ಲಸಿಕೆಯ ಪ್ರಾಯೋಗಿಕ ಪರೀಕ್ಷೆ ನಡೆಸುತ್ತಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ಸಹಯೋಗದಲ್ಲಿ ಪ್ರಯೋಗ ಮಾಡಲಾಗುತ್ತಿದೆ. ಮೈಸೂರಿನ ಜೆಎಸ್ಎಸ್ ಸಂಸ್ಥೆ ಜೊತೆಗೂ ಒಪ್ಪಂದವಾಗಿದೆ. 56 ದಿನಗಳ ಹಿಂದಷ್ಟೇ ಒಂದನೇ ಹಂತದ ಪ್ರಯೋಗವನ್ನು ಯಶಸ್ವಿಯಾಗಿ ಮಾಡಲಾಗಿದೆ. ಇನ್ನು 2 ಹಾಗೂ 3 ನೇ ಹಂತದಲ್ಲಿ ದೇಶದ 1,600 ಜನರ ಮೇಲೆ ಲಸಿಕೆ ಪ್ರಯೋಗ ಮಾಡಲಾಗುತ್ತದೆ. ಇನ್ನಷ್ಟು ಹೆಚ್ಚು ಜನರನ್ನು ಲಸಿಕೆ ಪ್ರಯೋಗಕ್ಕೆ ಒಳಪಡಿಸಬೇಕು ಎಂದು ಸಂಸ್ಥೆಗೆ ಕೋರಲಾಗಿದೆ. ಜೊತೆಗೆ ರಾಜ್ಯದಲ್ಲಿ ಲಸಿಕೆ ವಿತರಣೆ ಸಿದ್ಧತೆ ಕುರಿತು ಚರ್ಚಿಸಲಾಗಿದೆ. 100 ಕೋಟಿ ಜನರಿಗೆ ಲಸಿಕೆ ನೀಡುವ ಸಾಮರ್ಥ್ಯವಿದೆ ಎಂದು ಸಂಸ್ಥೆಯವರು ತಿಳಿಸಿದ್ದಾರೆ ಎಂದು ಸಚಿವರು ವಿವರಿಸಿದರು. ಇದನ್ನೂ ಓದಿ: ಪ್ರತಿ ನಿಮಿಷಕ್ಕೆ 500, ಪ್ರತಿ ಗಂಟೆಗೆ 30 ಸಾವಿರ ಸೀಸೆ ಲಸಿಕೆ ಉತ್ಪಾದಿಸುತ್ತೇವೆ: ಸೇರಮ್ ಸಿಇಓ
Advertisement
ಲಸಿಕೆ ಲಭ್ಯವಾದ ನಂತರ ಪ್ರತಿಯೊಬ್ಬರಿಗೂ ತಲುಪಿಸಲು ಪೂರ್ವಸಿದ್ಧತೆಗಳು ನಡೆಯುತ್ತಿದ್ದು ಸರಬರಾಜು, ಸಂಗ್ರಹಣೆ ಸೇರಿದಂತೆ ಎಲ್ಲಾ ಪ್ರಕ್ರಿಯೆಗಳ ಬಗ್ಗೆ ಸಲಹೆ ನೀಡಲು ತಜ್ಞರ ಸಮಿತಿ ರಚಿಸಲಾಗಿದೆ. ಪ್ರಥಮ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ, ನಂತರ ವಯೋವೃದ್ಧರು ಮತ್ತು ಇತರೆ ಸಹ ಅಸ್ವಸ್ಥತೆಗಳನ್ನು ಹೊಂದಿರುವವರಿಗೆ ಲಸಿಕೆ ನೀಡಲಾಗುವುದು. (2/5) pic.twitter.com/ZgXV8Yq2ot
— Dr Sudhakar K (@mla_sudhakar) October 27, 2020
Advertisement
ಕೇಂದ್ರ ಆರೋಗ್ಯ ಸಚಿವಾಲಯದ ಸಹಯೋಗದೊಂದಿಗೆ ಆರೋಗ್ಯ ತಜ್ಞರು, ತಾಂತ್ರಿಕ ಪರಿಣತರು, ಪೂರೈಕೆದಾರರನ್ನು ಒಳಗೊಂಡಂತೆ ತಾಂತ್ರಿಕ ಸಮಿತಿ ರಚಿಸಿದ್ದು, ಲಸಿಕೆಯ ಪೂರೈಕೆ, ಸಂಗ್ರಹಣೆ, ವಿತರಣೆ ಕುರಿತು ಸಮಿತಿ ಸಲಹೆ ನೀಡಲಿದೆ. ಮೊದಲ ಹಂತದಲ್ಲಿ ರಾಜ್ಯದ ಎಲ್ಲಾ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲು ಸಿದ್ಧತೆ ನಡೆಸಲಾಗುತ್ತಿದ್ದು, ಮುಂದಿನ ಹಂತದಲ್ಲಿ ವಯೋವೃದ್ಧರು, ಇತರೆ ಸಹ ಅಸ್ವಸ್ಥತೆಗಳನ್ನು ಹೊಂದಿರುವವರಿಗೆ, ಗರ್ಭಿಣಿ ಮತ್ತು ಬಾಣಂತಿ ಮಹಿಳೆಯರಿಗೆ ಲಸಿಕೆ ನೀಡಲಾಗುತ್ತದೆ.
ಲಸಿಕೆ ಸಂಶೋಧನೆಯಲ್ಲಿ ತೊಡಗಿರುವ ಇತರೆ ಸಂಸ್ಥೆಗಳಾದ ಸೀರಮ್ ಇನ್ಸ್ಟಿಟ್ಯೂಟ್, ಭಾರತ್ ಬಯೋಟೆಕ್ ಸಂಸ್ಥೆಗಳ ಜೊತೆಗೂ
ಮುಂದಿನ ದಿನಗಳಲ್ಲಿ ಚರ್ಚೆ ನಡೆಸಲಾಗುವುದು. ಲಸಿಕೆ ಕಂಡುಹಿಡಿಯಲು ವಿಶ್ವದಾದ್ಯಂತ ಹಲವಾರು ಪ್ರಯತ್ನಗಳು ನಡೆಯುತ್ತಿದ್ದು ಲಸಿಕೆ ಎಂದು ಲಭ್ಯವಾಗುತ್ತದೆ ಎಂಬ ಪ್ರಶ್ನೆಗೆ ನಿಖರ ಉತ್ತರ ಯಾರ ಬಳಿಯೂ ಸದ್ಯಕ್ಕಿಲ್ಲ. (3/5) pic.twitter.com/5QLFP1epU1
— Dr Sudhakar K (@mla_sudhakar) October 27, 2020
ಲಸಿಕೆಯ ದರದ ಬಗ್ಗೆ ಈಗ ಚರ್ಚೆಯಾಗುತ್ತಿದೆ. ನಮ್ಮ ಸರ್ಕಾರ ಕೋವಿಡ್ ಪರೀಕ್ಷೆ, ಚಿಕಿತ್ಸೆ ಮೊದಲಾದ ವೆಚ್ಚಗಳನ್ನು ಭರಿಸಿದೆ. ಅದೇ ರೀತಿ ರಾಜ್ಯದ ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಲು ಬದ್ಧ ಎಂದು ತಿಳಿಸಿದರು.
ಒಂದನೇ ಹಂತದ ಪ್ರಯೋಗದಲ್ಲಿ ಲಸಿಕೆ ನೀಡಿದಾಗ 28 ದಿನಗಳಲ್ಲಿ ಆ್ಯಂಟಿಬಾಡಿ ಉತ್ಪಾದನೆ ಆಗಿದೆ. 1 ನೇ ಹಂತದಲ್ಲಿ ಕೊರೊನಾ ಸೋಂಕು ಇಲ್ಲದ ವ್ಯಕ್ತಿಗಳಿಗೆ ಲಸಿಕೆ ನೀಡಲಾಗಿದೆ. 2, 3 ನೇ ಹಂತಗಳಲ್ಲಿ ಕೊರೊನಾ ಸೋಂಕು ಬಂದಿರುವವರಿಗೂ ಲಸಿಕೆ ನೀಡಲಾಗುತ್ತದೆ. ಪ್ರಯೋಗ ಯಶಸ್ವಿಯಾಗಿ ಕೇಂದ್ರ ಸರ್ಕಾರ ಅನುಮತಿ ನೀಡಿದ ನಂತರ ಕೇಂದ್ರದೊಂದಿಗೆ ಮಾತುಕತೆ ನಡೆಸಿ, ರಾಜ್ಯದಲ್ಲಿ ಲಸಿಕೆ ವಿತರಿಸಲಾಗುವುದು ಎಂದು ತಿಳಿಸಿದರು.
ರೋಟಾ ವೈರಸ್ ಗೆ ಲಸಿಕೆ ಸಿಗಲು 29 ವರ್ಷ ಬೇಕಾಯ್ತು. ಎಬೋಲಾ ವೈರಸ್ ಗೆ ಲಸಿಕೆ ಕಂಡುಹಿಡಿಯಲು 20 ವರ್ಷ ಕಾಯಬೇಕಾಯ್ತು. ಮಂಪ್ಸ್ ವೈರಸ್ ಗೆ 4 ವರ್ಷದಲ್ಲಿ ಲಸಿಕೆ ಕಂಡುಹಿಡಿದಿದ್ದೇ ಈವರೆಗೂ ನಮಗೆ ಅತ್ಯಂತ ಕಡಿಮೆ ಅವಧಿಯಲ್ಲಿ ಸಿಕ್ಕ ಲಸಿಕೆ. ಈಗ ಕೊರೊನಾ ವೈರಸ್ ಗೆ 1 ವರ್ಷದೊಳಗೆ ಲಸಿಕೆ ಕಂಡುಹಿಡಿಯುವ ಪ್ರಯತ್ನದಲ್ಲಿದ್ದೇವೆ. (4/5) pic.twitter.com/MVFiitOZvl
— Dr Sudhakar K (@mla_sudhakar) October 27, 2020
ನಾನು ಆರೋಗ್ಯ ಖಾತೆ ವಹಿಸಿಕೊಂಡ ಬಳಿಕ ಕಳೆದ ಹತ್ತು ದಿನಗಳಿಂದ ಈಚೆಗೆ ಕೋರಾನಾ ಸೋಂಕು ಮತ್ತು ಕೋವಿಡ್ ಸಾವಿನ ಪ್ರಮಾಣದಲ್ಲಿ ಗಣನೀಯ ಇಳಿಕೆ ಉಂಟಾಗಿದೆ. ಇದಕ್ಕೆ ಕೆಲವರು ಸಂಶಯದಿಂದಲೂ ನೋಡುತ್ತಿದ್ದಾರೆ. ಯಾವುದೇ ಅಂಕಿ- ಸಂಖ್ಯೆಯನ್ನು ನಾವು ವ್ಯತ್ಯಾಸ ಮಾಡುವ ಕೆಲಸ ಮಾಡಿಲ್ಲ. ವಿಶ್ವ ಆರೋಗ್ಯ ಸಂಸ್ಥೆಯೇ ಕರ್ನಾಟಕ ಸರ್ಕಾರ ಅತ್ಯಂತ ಪಾರದರ್ಶಕವಾಗಿ ನಡೆದುಕೊಂಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದೆ ಎಂದರು.
ಕೊರೊನಾ ವೈರಸ್ ವಿರುದ್ಧದ ಈ ಹೋರಾಟದಲ್ಲಿ ಲಸಿಕೆ ನಮಗೆ ಆಶಾಕಿರಣವಾಗಿದೆ. ವಿಜ್ಞಾನಿಗಳ ಪ್ರಯತ್ನ ಆದಷ್ಟು ಬೇಗ ಫಲ ನೀಡಲಿ ಎಂದು ಆಶಿಸುತ್ತಾ ಲಸಿಕೆ ಸಿಗುವವರೆಗೂ ಮಾಸ್ಕ್ ಧರಿಸಿವುದು, ಪದೇ ಪದೇ ಕೈ ತೊಳೆಯುವುದು ಮತ್ತು ಭೌತಿಕ ಅಂತರ ಕಾಯ್ದುಕೊಳ್ಳುವ ಮೂಲಕ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸೋಣ. (5/5) pic.twitter.com/RqwV0Wne43
— Dr Sudhakar K (@mla_sudhakar) October 27, 2020
ಲಸಿಕೆ ಇನ್ನೂ ಪ್ರಯೋಗದ ಹಂತದಲ್ಲಿದೆ. ಆದ್ದರಿಂದ ಲಸಿಕೆಯ ದರದ ಬಗ್ಗೆ ಚರ್ಚಿಸಿಲ್ಲ. ಲಾಭಕ್ಕಾಗಿ ಲಸಿಕೆ ಮಾಡುತ್ತಿಲ್ಲ ಎಂದು ಆಸ್ಟ್ರಾಜನಿಕಾ ಕಂಪನಿಯವರು ಹೇಳಿದ್ದಾರೆ. ಕೋವಿಡ್ ಅಂಕಿ ಅಂಶದಲ್ಲಿ ಯಾವುದೇ ತಪ್ಪು ಮಾಹಿತಿ ನೀಡಿಲ್ಲ. ವಿಶ್ವ ಆರೋಗ್ಯ ಸಂಸ್ಥೆಯವರು ಕೂಡ ನಮ್ಮ ಸರ್ಕಾರ ನೀಡುವ ಮಾಹಿತಿ ಪಾರದರ್ಶಕತೆಯಿಂದ ಕೂಡಿದೆ ಎಂದು ಶ್ಲಾಘಿಸಿದೆ. ನವೆಂಬರ್, ಡಿಸೆಂಬರ್, ಜನವರಿಯ ಚಳಿಗಾಲದ ಅವಧಿಯಲ್ಲಿ ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕಿದೆ ಎಂದು ಸಚಿವರು ಹೇಳಿದರು.
ಸಾವು, ಸೋಂಕು ಮತ್ತು ಗುಣಮುಖರಾದವರ ಅಂಕಿ-ಅಂಶಗಳನ್ನು ಅತ್ಯಂತ ಪಾರದರ್ಶಕವಾಗಿ ನೀಡುತ್ತಿದ್ದೇವೆ. ಇಳಿಮುಖವಾಗಲು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಪ್ರತಿಯೊಬ್ಬ ಕೊರೋನಾ ಯೋಧರ ಪ್ರಯತ್ನ ಕಾರಣವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಆಸ್ಟ್ರಾಜನಿಕಾ ವ್ಯವಸ್ಥಾಪಕ ನಿರ್ದೇಶಕ ಗಗನ್ ದೀಪ್ ಸಿಂಗ್, ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ.ಸುದರ್ಶನ್ ಸಭೆಯಲ್ಲಿದ್ದರು.