ನವದೆಹಲಿ: ಧೈರ್ಯವೊಂದಿದ್ದರೆ ಎಂತಹ ಕಠಿಣ ಗುರಿಗಳನ್ನು ಸಹ ಸುಲಭವಾಗಿ ತಲುಪಬಹುದು ಎಂಬ ಮಾತಿದೆ. ಇದನ್ನು 2023ರ ಅರ್ಜನ ಪ್ರಶಸ್ತಿ ಪಡೆದ ಶೀತಲ್ ದೇವಿ (Sheetal Devi) ಸಾಬೀತುಪಡಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ (Jammu And Kashmir) ಪುಟ್ಟ ಹಳ್ಳಿಯಲ್ಲಿ ಹುಟ್ಟಿ ಬೆಳೆದಿರುವ ಶೀತಲ್ ಕೈಗಳಿಲ್ಲದಿದ್ದರೂ ಪ್ಯಾರಾ ಏಷ್ಯನ್ ಗೇಮ್ಸ್‌ನಲ್ಲಿ (Para Asian Games) ಪದಕ ಗೆಲ್ಲುವ ಮೂಲಕ ದೇಶದ ಕೀರ್ತಿ ಪತಾಕೆ ಹಾರಿಸಿದ್ದಾರೆ. ತನ್ನ ಪಾದಗಳಿಂದ ಬಿಲ್ಲುಗಾರಿಕೆ ಮಾಡಿ ಕಳೆದ ವರ್ಷ ಪ್ಯಾರಾ ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಇವರ ಈ ಅದ್ಭುತ ಸಾಧನೆಯನ್ನು ಗುರುತಿಸಿ ಶೀತಲ್ ದೇವಿ ಅವರಿಗೆ 2023ರ ಅರ್ಜುನ ಪ್ರಶಸ್ತಿಯನ್ನು (Arjuna Award) ನೀಡಿ ಗೌರವಿಸಲಾಗಿದೆ.
ಶೀತಲ್ ದೇವಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ಈ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ. ಕ್ರೀಡಾ ಗೌರವವನ್ನು ಸ್ವೀಕರಿಸಿದ ನಂತರ ಶೀತಲ್ ದೇವಿ ಅವರು ಪ್ರಶಸ್ತಿ ಸಮಾರಂಭದಲ್ಲಿ ಭಾಗಿಯಾಗಿರುವ ವಿಡಿಯೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೇ, ಈ ದಿನ ವಿಶೇಷವಾಗಿದೆ. ಭಾರತದ ಗೌರವಾನ್ವಿತ ರಾಷ್ಟ್ರಪತಿಗಳು ಪ್ರತಿಷ್ಠಿತ ಅರ್ಜುನ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ. ಪ್ರೀತಿ, ಬೆಂಬಲ ಮತ್ತು ಪ್ರೋತ್ಸಾಹಕ್ಕಾಗಿ ಎಲ್ಲರಿಗೂ ಧನ್ಯವಾದಗಳು ಎಂದು ವಿಡಿಯೋದ ಜೊತೆಗೆ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ರಾಮಮಂದಿರ ಉದ್ಘಾಟನೆ – ಜ.22ರಂದು ಉತ್ತರ ಪ್ರದೇಶದಲ್ಲಿ ಶಾಲಾ ಕಾಲೇಜುಗಳಿಗೆ ರಜೆ
Advertisement
Advertisement
ಶೀತಲ್ ದೇವಿ ಯಾರು?
ಶೀತಲ್ ಅವರು 2007ರಲ್ಲಿ ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್‌ನ ಲೋಯಿಧಾರ್ ಗ್ರಾಮದಲ್ಲಿ ಫೋಕೊಮೆಲಿಯಾ ಎಂಬ ಅಪರೂಪದ ಕಾಯಿಲೆಯೊಂದಿಗೆ ಜನಿಸಿದರು. ಈ ಕಾಯಿಲೆಯಿಂದಾಗಿ ಅವರ ತೋಳುಗಳು ಸಂಪೂರ್ಣವಾಗಿ ರೂಪುಗೊಂಡಿರಲಿಲ್ಲ. ಈ ಅಂಗವೈಕಲ್ಯದ ನಡುವೆಯೂ 2023ರಲ್ಲಿ ಶೀತಲ್ ಅಂತಾರಾಷ್ಟ್ರೀಯ ಹಂತದಲ್ಲಿ ಅನೇಕ ಪದಕಗಳನ್ನು ಗೆಲ್ಲುವ ಮೂಲಕ ರಾಷ್ಟ್ರಕ್ಕೆ ಹೆಮ್ಮೆ ತಂದಿದ್ದಾರೆ. ಆದರೆ ಅವರ ಅಂಗವೈಫಲ್ಯ ಕ್ರೀಡೆಯನ್ನು ವೃತ್ತಿಜೀವನವನ್ನಾಗಿಸಲು ಬಿಡಲಿಲ್ಲ. ಇದನ್ನೂ ಓದಿ: ಅರ್ಜುನ ಪ್ರಶಸ್ತಿ ಪಡೆದ ಬೆಂಕಿ ಬೌಲರ್ ಮೊಹಮ್ಮದ್ ಶಮಿ – ಇನ್ಯಾರಿಗೆಲ್ಲಾ ಸಿಕ್ತು ಪ್ರಶಸ್ತಿ?
Advertisement
ಶೀತಲ್ ದೇವಿಯವರ ಸಾಧನೆಗಳು:
2023ರಲ್ಲಿ ಶೀತಲ್ ದೇವಿ ಪ್ಯಾರಾ-ಆರ್ಚರ್‌ಗೆ (Para Archer) ಸೇರಿದರು. ಜೆಕ್ ರಿಪಬ್ಲಿಕ್‌ನಲ್ಲಿ ನಡೆದ ವರ್ಲ್ಡ್ ಆರ್ಚರಿ ಪ್ಯಾರಾ ಚಾಂಪಿಯನ್‌ಶಿಪ್ 2023ರಲ್ಲಿ ಓಪನ್ ಮಹಿಳಾ ಕಾಂಪೌಂಡ್ ಬಿಲ್ಲುಗಾರಿಕೆ ಸ್ಪರ್ಧೆಯಲ್ಲಿ ಶೀತಲ್ ಬೆಳ್ಳಿ ಪದಕವನ್ನು ಪಡೆದರು. ಮೊದಲು ಪ್ಯಾರಾ ವರ್ಲ್ಡ್ ಚಾಂಪಿಯನ್‌ಶಿಪ್‌ನಲ್ಲಿ ಪದಕ ಗೆದ್ದ ಮೊದಲ ಮಹಿಳಾ ತೋಳಿಲ್ಲದ ಬಿಲ್ಲುಗಾರ್ತಿ ಇವರಾಗಿದ್ದಾರೆ. ಇದನ್ನೂ ಓದಿ: ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್‌ಗೆ ಕೊರೊನಾ ದೃಢ
Advertisement
ಏಷ್ಯನ್ ಪ್ಯಾರಾ ಗೇಮ್ಸ್ 2023ರಲ್ಲಿ, ಶೀತಲ್ ವೈಯಕ್ತಿಕ ಮತ್ತು ಮಿಶ್ರ ತಂಡ ಸ್ಪರ್ಧೆಗಳಲ್ಲಿ ಭಾಗವಹಿಸಿ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡರು. ಇಷ್ಟು ಮಾತ್ರವಲ್ಲದೇ ಮಹಿಳೆಯರ ಡಬಲ್ಸ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕವನ್ನು ಸಹ ಪಡೆದಿದ್ದಾರೆ. ಇದನ್ನೂ ಓದಿ: ದುಡ್ಡು ಇದ್ದವರು ದೇವಸ್ಥಾನ ಕಟ್ಟುತ್ತಾರೆ, ಇಲ್ಲದವರು ಇರುವಲ್ಲೇ ಪೂಜಿಸಿ: ಸಿದ್ದರಾಮಯ್ಯ