ನವದೆಹಲಿ: 2024ರ ಲೋಕಸಭಾ ಚುನಾವಣೆಗೆ ಬಿಜೆಪಿ ನಿರೀಕ್ಷೆಯಂತೆ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಶನಿವಾರ ಬಿಡುಗಡೆಗೊಳಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು 3ನೇ ಬಾರಿಗೆ ವಾರಣಾಸಿಯಿಂದ ಕಣಕ್ಕಿಳಿಯುತ್ತಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ 2014ರಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿದ್ದಾಗ 10,30,685 (ಶೇ.58.3%) ಮತಗಳನ್ನು ಪಡೆದುಕೊಂಡಿದ್ದರು. 3,71,784 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. 2019ರ ಚುನಾವಣೆಯಲ್ಲೂ ವಾರಣಾಸಿಯಿಂದಲೇ ಸ್ಪರ್ಧಿಸಿ 10,60,476 (59.7%) ಮತಗಳನ್ನು ಪಡೆದು, 4,79,505 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದರು. ಸದ್ಯ 3ನೇ ಅವಧಿಯಲ್ಲೂ ಅಧಿಕಾರದ ಗದ್ದುಗೆ ಹಿಡಿಯುವ ವಿಶ್ವಾದಲ್ಲಿರುವ ಮೋದಿ, ವಾರಣಾಸಿಯಿಂದಲೇ ಕಣಕ್ಕಿಳಿಯುತ್ತಿದ್ದಾರೆ.
Advertisement
Advertisement
ಪ್ರಧಾನಿ ಮೋದಿ ಸೇರಿದಂತೆ 34 ಸಚಿವರು, ಇಬ್ಬರು ಮಾಜಿ ಮುಖ್ಯಮಂತ್ರಿಗಳು, 28 ಮಹಿಳೆಯರು, 47 ಹೊಸ ನಾಯಕರು, ಒಬಿಸಿ ಸಮುದಾಯದ 57 ಸದಸ್ಯರು ಪಟ್ಟಿಯಲ್ಲಿದ್ದಾರೆ.
Advertisement
ಉತ್ತರ ಪ್ರದೇಶದಿಂದ 51, ಪಶ್ಚಿಮ ಬಂಗಾಳದಿಂದ 20, ಮಧ್ಯಪ್ರದೇಶದಿಂದ 24, ಗುಜರಾತ್ ಮತ್ತು ರಾಜಸ್ಥಾನದಿಂದ ತಲಾ 15, ಕೇರಳದಿಂದ 12, ತೆಲಂಗಾಣದಿಂದ 9, ಅಸ್ಸಾಂನಿಂದ 11, ಜಾರ್ಖಂಡ್ ಮತ್ತು ಛತ್ತೀಸ್‌ಗಢದಿಂದ ತಲಾ 11, ದೆಹಲಿಯಿಂದ 5, ಜಮ್ಮು ಮತ್ತು ಕಾಶ್ಮೀರದಿಂದ 2, ಉತ್ತರಾಖಂಡದಿಂದ 3, ಅರುಣಾಚಲ ಪ್ರದೇಶದಿಂದ 2 ಮತ್ತು ಗೋವಾ, ತ್ರಿಪುರಾ, ಅಂಡಮಾನ್ ಮತ್ತು ನಿಕೋಬಾರ್ ಮತ್ತು ದಮನ್ ಮತ್ತು ದಿಯುನಿಂದ ತಲಾ 1 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಪ್ರಕಟಿಸಿದೆ. ಒಟ್ಟು 16 ರಾಜ್ಯಗಳ ಹಾಗೂ 2 ಕೇಂದ್ರಾಡಳಿತ ಪ್ರದೇಶಗಳಿಂದ 195 ಸೀಟುಗಳಿಗೆ ಹೆಸರು ಪ್ರಕಟಿಸಲಾಗಿದೆ.
Advertisement
ಪ್ರಮುಖ ಅಭ್ಯರ್ಥಿಗಳು
ವಾರಣಾಸಿ – ನರೇಂದ್ರ ಮೋದಿ
ಅಮೇಥಿ – ಸ್ಮೃತಿ ಇರಾನಿ
ಮಥುರಾ – ಹೇಮಮಾಲಿನಿ