ಮಾರುತಿ ಕಂಪನಿಯ ಕಾರುಗಳು ತಗೋಬೇಡಿ, ಸೇಫ್ ಅಲ್ಲ.. ಮಾರುತಿಯ ಕಾರುಗಳು ಟಿನ್ ಡಬ್ಬಿಗಳು ಎಂದೆಲ್ಲಾ ಕರೆಯುತ್ತಿದ್ದವರಿಗೆ ಮೂಗಿನ ಮೇಲೆ ಬೆರಳು ಇಡುವಂತೆ ಮಾಡಿದೆ ಹೊಸ ಮಾರುತಿ ಸುಜುಕಿ ಡಿಸೈರ್ (Maruthi Suzuki Dzire) ಕಾರು. ಇದು 5 ಸ್ಟಾರ್ ಸೇಫ್ಟಿ ರೇಟಿಂಗ್ ಸಿಕ್ಕ ಮಾರುತಿ ಕಂಪನಿಯ ಮೊದಲ ಕಾರು ಎಂಬ ಖ್ಯಾತಿಗೆ ಪಾತ್ರವಾಗಿದೆ.
Advertisement
ಗ್ಲೋಬಲ್ ಎನ್‌ಸಿಎಪಿ (Global NCAP) ನಡೆಸಿದ ಸುರಕ್ಷತಾ ಪರೀಕ್ಷೆಯ ವಯಸ್ಕರ ರಕ್ಷಣೆ ವಿಭಾಗದಲ್ಲಿ (Adult Occupant Protection) 34ಕ್ಕೆ 31.24 ಅಂಕಗಳನ್ನು ಗಳಿಸುವ ಮೂಲಕ ಡಿಸೈರ್ 5-ಸ್ಟಾರ್ ರೇಟಿಂಗ್ ಪಡೆದಿದೆ. ಅದೇ ರೀತಿ ಮಕ್ಕಳ ರಕ್ಷಣೆ ವಿಭಾಗದಲ್ಲಿ (Child Occupant Protection) 42ಕ್ಕೆ 39.20 ಅಂಕಗಳನ್ನು ಪಡೆದು 4-ಸ್ಟಾರ್ ರೇಟಿಂಗನ್ನು ತನ್ನದಾಗಿಸಿಕೊಂಡಿದೆ. ಟಾಟಾ ಕಂಪನಿಯ ಆಲ್ಟ್ರೋಜ್ ಮತ್ತು ಟಿಯಾಗೋ ಕಾರುಗಳಿಗಿಂತ ಹೊಸ ಡಿಸೈರ್ ಸುರಕ್ಷಿತವಾಗಿದೆ.
Advertisement
Advertisement
ಪ್ರಯಾಣಿಕರ ರಕ್ಷಣೆಗಾಗಿ ಗರಿಷ್ಠ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿರುವುದರಿಂದ ಗ್ಲೋಬಲ್ NCAP ಈ 5-ಸ್ಟಾರ್ ಸೇಫ್ಟಿ ರೇಟಿಂಗ್ ನೀಡಿದೆ. ಡಿಸೈರ್ ಕಾರು 6-ಏರ್‌ಬ್ಯಾಗ್‌ಗಳು, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಹಾಗೂ 3-ಪಾಯಿಂಟ್ ಸೀಟ್‌ಬೆಲ್ಟ್‌ಗಳನ್ನು ಹೊಂದಿದೆ. ಈಗ ಮಾರಾಟದಲ್ಲಿರುವ ಡಿಸೈರ್ ಕೇವಲ 2-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಮಾತ್ರ ಪಡೆದಿತ್ತು. ಇದನ್ನೂ ಓದಿ: ಟೆಸ್ಲಾದಿಂದ ಸ್ಟೀರಿಂಗ್ ವೀಲ್ ಇಲ್ಲದ AI ಆಧಾರಿತ ರೋಬೋಟ್ಯಾಕ್ಸಿ ಬಿಡುಗಡೆ
Advertisement
ಕೆಲ ತಿಂಗಳ ಹಿಂದೆ ಬಿಡುಗಡೆಯಾದ ಹೊಸ ಸ್ವಿಫ್ಟ್ ಕಾರಿನಂತೆಯೇ ಹೊಸ ಡಿಸೈರ್ ಕಾರು ಕೂಡ Z12E 1.2-ಲೀಟರ್ 3-ಸಿಲಿಂಡರ್ ಪೆಟ್ರೋಲ್ ಎಂಜಿನ್ ಹೊಂದಿರಲಿದ್ದು, 81.58 PS ಪವರ್ ಮತ್ತು 111.7 ಎನ್ಎಂ ಟಾರ್ಕ್ ಉತ್ಪಾದಿಸಲಿದೆ. 5-ಸ್ಪೀಡ್ ಮ್ಯಾನುವಲ್ ಮತ್ತು ಆಟೋಮೆಟಿಕ್ ಗೇರ್‌ಬಾಕ್ಸ್‌ನೊಂದಿಗೆ ಡಿಸೈರ್ ದೊರೆಯಲಿದೆ. ಇದನ್ನೂ ಓದಿ: ನ್ಯಾನೋ ಕಾರು ತಯಾರಿಸಿದ್ದು ಯಾಕೆ? ಪಶ್ಚಿಮ ಬಂಗಾಳದಿಂದ ಗುಜರಾತ್‌ಗೆ ಘಟಕ ಶಿಫ್ಟ್ ಆಗಿದ್ದು ಯಾಕೆ?
ಎಲೆಕ್ಟ್ರಿಕ್ ಸನ್ ರೂಫ್, 360 ಡಿಗ್ರಿ ಕ್ಯಾಮೆರಾ, 9 ಇಂಚ್ ಇನ್ಫೋಟೈನ್‌ಮೆಂಟ್ ಸ್ಕ್ರೀನ್, ಆಟೋ ಕ್ಲೈಮೇಟ್ ಕಂಟ್ರೋಲ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ವೈರ್‌ಲೆಸ್ ಚಾರ್ಜರ್, ಆರ್ಕಮಿಸ್ ಟ್ಯೂನ್ಡ್ ಸೌಂಡ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಯುಎಸ್‌ಬಿ ಟೈಪ್-A & ಟೈಪ್-C ಪೋರ್ಟ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಡಿಸೈರ್ ಹೊಂದಿರುವ ನಿರೀಕ್ಷೆ ಇದೆ.
ಈಗಾಗಲೇ ಬುಕ್ಕಿಂಗ್ ಶುರುವಾಗಿದ್ದು, ಆಸಕ್ತ ಗ್ರಾಹಕರು ಡಿಸೈರ್ ಕಾರನ್ನು ಸಮೀಪದ ಶೋರೂಂ ಅಥವಾ ಕಂಪನಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ರೂ.11,000 ಮುಂಗಡವಾಗಿ ಪಾವತಿಸುವ ಮೂಲಕ ಬುಕ್ಕಿಂಗ್ ಮಾಡಬಹುದು.
ಮಾರುತಿ ಸುಜುಕಿ ಕಂಪನಿ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿರುವುದು ಉತ್ತಮವಾದ ಬೆಳವಣಿಗೆಯಾಗಿದೆ. ಇದರಿಂದ ಗ್ರಾಹಕರಿಗೆ ಕಂಪನಿ ಮೇಲಿನ ವಿಶ್ವಾಸ ಮತ್ತಷ್ಟು ಹೆಚ್ಚಾಗುವುದರಲ್ಲಿ ಎರಡು ಮಾತಿಲ್ಲ. ಮುಂಬರುವ ಎಲ್ಲಾ ಕಾರುಗಳು ಸಹ ಇದೇ ಕಾರಿನ ರೀತಿ 5 ಸ್ಟಾರ್ ಸೇಫ್ಟಿ ರೇಟಿಂಗ್‌ನೊಂದಿಗೆ ಬರಲಿ. ಇದನ್ನೂ ಓದಿ: ಕಾರು ಮಾರಾಟ ಭಾರೀ ಕುಸಿತ – 7.90 ಲಕ್ಷ ವಾಹನಗಳು ಸಿದ್ದವಾಗಿದ್ದರೂ ಖರೀದಿಸುತ್ತಿಲ್ಲ ಜನ