ಬೆಂಗಳೂರು: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ (Sonia Gandhi) ಕರ್ನಾಟಕದಿಂದ (Karnataka) ಸಂಸತ್ತಿಗೆ ಹೋಗುತ್ತಾರಾ ಹೀಗೊಂದು ಪ್ರಶ್ನೆ ಈಗ ಎದ್ದಿದೆ.
ಹೌದು. ಒಂದು ವೇಳೆ ಡಿಸಿಎಂ ಶಿವಕುಮಾರ್ (DK Shivakumar) ಅವರ ಮನವಿಯನ್ನು ಸೋನಿಯಾ ಗಾಂಧಿ ಪುರಸ್ಕರಿಸಿದರೆ ಕರ್ನಾಟಕದಿಂದ ರಾಜ್ಯಸಭೆಗೆ ಹೋಗುವ ಸಾಧ್ಯತೆಯಿದೆ.
Advertisement
ತೆಲಂಗಾಣ ಕಾಂಗ್ರೆಸ್ ಸಿಎಂ ಆಯ್ಕೆ ಕಸರತ್ತಿಗೆ ದೆಹಲಿಗೆ ಹೋದ ಡಿಕೆ ಶಿವಕುಮಾರ್ ಅವರು ಕಾಂಗ್ರೆಸ್ ಹೈಕಮಾಂಡ್ ಮುಂದೆ ಹೊಸ ಬೇಡಿಕೆ ಇಟ್ಟಿದ್ದಾರೆ. ಲೋಕಸಭಾ ಚುನಾವಣೆಗೆ (Lok Sabha Election) ಅನುಕೂಲ ದೃಷ್ಟಿಯಿಂದ ಸೋನಿಯಾ ಗಾಂಧಿ ಅವರಿಗೆ ಆಹ್ವಾನ ನೀಡಿರುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಇದನ್ನೂ ಓದಿ: ನಾನು ಮಾಡಿದ ತೀರ್ಮಾನ ನನ್ನ ಮುಖದ ಮೇಲೆ ನಾನೇ ಉಗುಳಿಕೊಂಡಂತಾಗಿದೆ: ಸೋಮಣ್ಣ
Advertisement
Advertisement
ಮಾರ್ಚ್‌ನಲ್ಲಿ ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಕರ್ನಾಟಕದಿಂದ ಸ್ಪರ್ಧೆ ಮಾಡಿ ಆಯ್ಕೆಯಾದರೆ ರಾಜ್ಯ ಕಾಂಗ್ರೆಸ್ ಗೆ ಅನುಕೂಲವಾಗಲಿದೆ. ರಾಜ್ಯದಲ್ಲೂ ಎಲ್ಲಾ ನಾಯಕರು ಈ ವಿಚಾರದಲ್ಲಿ ಆಸಕ್ತಿ ಹೊಂದಿದ್ದಾರೆ. ದಕ್ಷಿಣ ಭಾರತದಲ್ಲಿ ಪಕ್ಷಕ್ಕೆ ಶಕ್ತಿ ತುಂಬಿದಂತೆ ಆಗುತ್ತದೆ ಎಂದು ಹೇಳಿದ್ದಾರೆ.
Advertisement
1999 ರಿಂದ ಸೋನಿಯಾ ಗಾಂಧಿ ಲೋಕಸಭೆ ಚುನಾವಣೆಯನ್ನು ಗೆಲ್ಲುತ್ತಾ ಬಂದಿದ್ದಾರೆ. 1999 ರಲ್ಲಿ ಉತ್ತರ ಪ್ರದೇಶದ ಅಮೇಠಿ ಮತ್ತು ಕರ್ನಾಟಕದ ಬಳ್ಳಾರಿಯಿಂದ ಸ್ಪರ್ಧಿಸಿ ಗೆದ್ದಿದ್ದ ಅವರು 2004ರ ಚುನಾವಣೆಯಿಂದ 2019ರ ಚುನಾವಣೆಯವರೆಗೂ ಉತ್ತರ ಪ್ರದೇಶದ ರಾಯ್‌ಬರೇಲಿಯಿಂದ ಸತತವಾಗಿ ಆಯ್ಕೆ ಆಗುತ್ತಿದ್ದಾರೆ.
ಅನಾರೋಗ್ಯ ಕಾರಣದಿಂದ 2024ರ ಲೋಕಸಭಾ ಚುನಾವಣೆಗೆ ಸೋನಿಯಾ ಗಾಂಧಿ ಸ್ಪರ್ಧಿಸುತ್ತಿಲ್ಲ ಎಂಬ ಮಾತು ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ.