ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೊನಾ ಸ್ಫೋಟವಾಗಿದ್ದು, 20,628 ಹೊಸ ಪ್ರಕರಣಗಳು ವರದಿಯಾಗಿವೆ. ರಾಜಧಾನಿಯಲ್ಲಿ ಸೋಂಕಿನ ಪ್ರಮಾಣ ಇಳಿಕೆಯಾಗಿದ್ದು, 4,889 ಹೊಸ ಪ್ರಕರಣ ವರದಿಯಾಗಿವೆ. ಬೆಂಗಳೂರಿನಲ್ಲಿ ಸೋಂಕು ಹರಡುವಿಕೆ ಪ್ರಮಾಣ ಶೇ.8.97ಕ್ಕೆ ಇಳಿಕೆಯಾಗಿದೆ.
Advertisement
ಬೆಂಗಳೂರಿನಲ್ಲಿ 21,126 ಜನ ಸೇರಿದಂತೆ ಒಟ್ಟು 42,444 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ. ಇಂದು ರಾಜ್ಯದಲ್ಲಿ 1,37,894 ಸ್ಯಾಂಪಲ್ ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇನ್ನು ಬೆಂಗಳೂರಿನಲ್ಲಿ 54,448 ಟೆಸ್ಟ್ ನಡೆಸಲಾಗಿದೆ.
Advertisement
Advertisement
ಕೊರೊನಾಗೆ ಇವತ್ತು 492 ಜನರು ಮೃತಪಟ್ಟಿದ್ದು, ಸಾವನ್ನಪ್ಪಿದವರ ಸಂಖ್ಯೆ 28,298ಕ್ಕೆ ಏರಿಕೆಯಾಗಿದೆ. ಕೋವಿಡ್ -19 ಸೋಂಕಿನಿಂತ ಮೃತಪಟ್ಟವರ ಶೇಕಡಾವಾರು ಪ್ರಮಾಣ ಶೇ.2.38ರಷ್ಟಿದೆ. ಸದ್ಯ ರಾಜ್ಯದಲ್ಲಿ 3,50,066 ಸಕ್ರಿಯ ಪ್ರಕರಣಗಳಿವೆ.
Advertisement
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 166, ಬಳ್ಳಾರಿ 671, ಬೆಳಗಾವಿ 1,027, ಬೆಂಗಳೂರು ಗ್ರಾಮಾಂತರ 557, ಬೆಂಗಳೂರು ನಗರ 4,889, ಬೀದರ್ 42, ಚಾಮರಾಜನಗರ 365, ಚಿಕ್ಕಬಳ್ಳಾಪುರ 434, ಚಿಕ್ಕಮಗಳೂರು 843, ಚಿತ್ರದುರ್ಗ 763, ದಕ್ಷಿಣ ಕನ್ನಡ 923, ದಾವಣಗೆರೆ 449, ಧಾರವಾಡ 519, ಗದಗ 307, ಹಾಸನ 1,024, ಹಾವೇರಿ 194, ಕಲಬುರಗಿ 107, ಕೊಡಗು 333, ಕೋಲಾರ 684, ಕೊಪ್ಪಳ 350, ಮಂಡ್ಯ 453, ಮೈಸೂರು 1,720, ರಾಯಚೂರು 340, ರಾಮನಗರ 181, ಶಿವಮೊಗ್ಗ 972, ತುಮಕೂರು 1,102, ಉಡುಪಿ 984, ಉತ್ತರ ಕನ್ನಡ 536, ವಿಜಯಪುರ 210 ಮತ್ತು ಯಾದಗಿರಿಯಲ್ಲಿ 83 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.
????Karnataka reports 42,444 recoveries today including 21,126 in Bengaluru.
????With 1,37,894 tests and 20,628 new cases Karnataka's positivity rate stands at 14.95%.
????With 54,448 tests and 4,889 new cases, Bengaluru's positivity rate stands at 8.97%. #KarnatakaFightsBack
— Dr Sudhakar K (@mla_sudhakar) May 29, 2021