ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 208 ಪಾಸಿಟಿವ್ ಕೇಸ್ ಪತ್ತೆಯಾಗಿದೆ. ಈ ಪೈಕಿ ಬೆಂಗಳೂರಿನಲ್ಲಿ 197 ಪ್ರಕರಣ ಪತ್ತೆಯಾಗುವ ಮೂಲಕ 200ರ ಸನಿಹಕ್ಕೆ ಕಾಲಿಟ್ಟಿದೆ.
Advertisement
ಬೆಂಗಳೂರಿನಲ್ಲಿ ಹೊರತು ಪಡಿಸಿ ದಕ್ಷಿಣ ಕನ್ನಡದಲ್ಲಿ ದಾಖಲಾಗಿರುವ 6 ಪ್ರಕರಣ ಜಿಲ್ಲೆಯಲ್ಲಿ ದಾಖಲಾದ ಹೆಚ್ಚಿನ ಕೊರೊನಾ ಕೇಸ್ ಆಗಿದೆ. ಇಂದು ಯಾವುದೇ ಮರಣ ಪ್ರಕರಣ ದಾಖಲಾಗಿಲ್ಲ. ಇಂದು 124 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದ ಇಂದಿನ ಪಾಸಿಟಿವಿಟಿ ರೇಟ್ ಶೇ. 0.90 ದಾಖಲಾಗಿದ್ದು, ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,799ಕ್ಕೆ ತಲುಪಿದೆ. ರಾಜ್ಯದಲ್ಲಿ ಈವರೆಗೆ ಒಟ್ಟು 40,064 ಮರಣ ಪ್ರಕರಣ ಪತ್ತೆಯಾಗಿದೆ. ಕೆಲದಿನಗಳಿಂದ ಮರಣ ಪ್ರಕರಣ ಸ್ಥಿರವಾಗಿದೆ. ಇಂದು ಕೂಡ ಸ್ಥಿರತೆ ಕಾಯ್ದುಕೊಂಡಿದೆ. ಇದನ್ನೂ ಓದಿ: ಸಿಲಿಕಾನ್ ಸಿಟಿ ಬೆಂಗ್ಳೂರಲ್ಲಿ ತಲೆ ಎತ್ತಲಿದೆ ಐಕಿಯ ಸ್ಟೋರ್
Advertisement
Advertisement
ಈವರೆಗೆ ರಾಜ್ಯದಲ್ಲಿ ಒಟ್ಟು 39,50,978 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,09,073 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 1,075,18 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 23,024 ಸ್ಯಾಂಪಲ್ (ಆರ್ಟಿಪಿಸಿಆರ್ 17,176 + 5,848 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: 10ನೇ ತರಗತಿ ಪಠ್ಯದಲ್ಲಿ ಸ್ತ್ರೀ ದ್ವೇಷಿ ವಿಚಾರ – ಮಹಿಳಾ ಸಂಘಟನೆಗಳಿಂದ ಆಕ್ಷೇಪ
Advertisement
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬೆಂಗಳೂರು ನಗರ 197, ದಕ್ಷಿಣ ಕನ್ನಡ 6, ಮೈಸೂರು 3, ಚಿಕ್ಕಮಗಳೂರು ಮತ್ತು ತುಮಕೂರಿನಲ್ಲಿ ತಲಾ ಒಂದೊಂದು ಪ್ರಕರಣ ಸೇರಿ ಒಟ್ಟು 208 ಪ್ರಕರಣ ವರದಿಯಾಗಿದೆ.