ಮುಂಬೈ: ಹಸುಗೂಸು, ಬಾಲಕಿ, ಯುವತಿ, ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯವೆಸಗುತ್ತಿದ್ದ ಕಾಮುಕರು ಇದೀಗ ಮೂಕ ಪ್ರಾಣಿಗಳನ್ನು ಬಿಡುತ್ತಿಲ್ಲ. ಇದಕ್ಕೆ ಸಾಕ್ಷಿ ಎಂಬಂತೆ 20 ವರ್ಷದ ಯುವಕನೊಬ್ಬ ಶ್ವಾನದ ಮೇಲೆ ಅತ್ಯಾಚಾರವೆಸಗಿ ತನ್ನ ಕಾಮತೃಷೆ ತೀರಿಸಿಕೊಂಡ ಪ್ರಕರಣವೊಂದು ಬೆಳಕಿಗೆ ಬಂದಿದೆ.
Advertisement
ಈ ಘಟನೆ ಮಹಾರಾಷ್ಟ್ರದ ಮುಂಬೈನಲ್ಲಿ ನಡೆದಿದ್ದು, ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಆರೋಪಿಯನ್ನು ತೌಫೀಕ್ ಅಹಮದ್ ಎಂದು ಗುರುತಿಸಲಾಗಿದೆ. ಸದ್ಯ ಈತನ ವಿರುದ್ಧ ಪ್ರಾಣಿ ರಕ್ಷಣಾ ಟ್ರಸ್ಟ್ ಮುಖ್ಯಸ್ಥೆ ಸವಿತಾ ಮಹಾಜನ್ ಅವರು ವಕೋಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತೌಫೀಕ್ ವಿರುದ್ಧ ಅನೈಸರ್ಗಿಕ ಲೈಂಗಿಕತೆ ನಡೆಸಿದ ಸಂಬಂಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ.
Advertisement
Advertisement
ಘಟನೆ ನಡೆದ ಸ್ಥಳದಲ್ಲಿ ಹಲವಾರು ಕಾರು ಪಾರ್ಕ್ ಮಾಡುತ್ತಿದ್ದವು. ಅಲ್ಲಿ ಕಾರುಗಳ್ಳರ ಸಂಖ್ಯೆಯೂ ಹೆಚ್ಚಾಗಿತ್ತು. ಹೀಗಾಗಿ ಸ್ಥಳದಲ್ಲಿ ಸಿಸಿಟಿವಿ ಅಳವಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಯುವಕನ ಕಾಮಕೃತ್ಯ ಬಯಲಾಗಿದೆ.
Advertisement
ಅದೇ ಪ್ರದೇಶದಲ್ಲಿ ಬ್ರೆಡ್ ಮಾರಿಕೊಂಡು ಜೀವನ ನಡೆಸುತ್ತಿದ್ದ ಆರೋಪಿ ತೌಫೀಕ್ ರಾತ್ರಿ ವೇಳೆ ಹೆಣ್ಣು ನಾಯಿಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಈ ದೃಶ್ಯ ಅಲ್ಲಿಯೇ ಇದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇತ್ತ ತನ್ನ ಮೇಲೆ ಕೇಸ್ ದಾಖಲಾಗುತ್ತಿದ್ದಂತೆಯೇ ಆರೋಪಿ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಸದ್ಯ ತೌಫೀಕ್ ಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
View this post on Instagram