ನವದೆಹಲಿ: ಬಹುಮಹಡಿ ಕಟ್ಟಡವೊಂದರಲ್ಲಿ ಪಾರ್ಕಿಂಗ್ ಸ್ಥಳದಲ್ಲಿ ಬೆಂಕಿ (Fire) ಕಾಣಿಸಿಕೊಂಡಿದ್ದು, 21 ಕಾರುಗಳು (Cars) ಸುಟ್ಟು ಭಸ್ಮವಾಗಿರುವ ಘಟನೆ ಪಶ್ಚಿಮ ದೆಹಲಿಯ ಸುಭಾಷ್ ನಗರದಲ್ಲಿ ನಡೆದಿದೆ.
ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ. ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ. ದುರ್ಘಟನೆಗೆ ಕಾರಣ ತಿಳಿಯಲು ಪೊಲೀಸರು ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿ ಪರಿಶೀಲಿಸುತ್ತಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಶಾಸಕನ ಬಂಗಲೆಯಲ್ಲಿ ವಿದ್ಯಾರ್ಥಿ ಆತ್ಮಹತ್ಯೆ
ಮುಂಜಾನೆ 4 ಗಂಟೆ ಸುಮಾರಿಗೆ ಪಾರ್ಕಿಂಗ್ ಸ್ಥಳದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ನಂತರ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ತೆರಳಿ, ಬೆಳಗ್ಗೆ 6:10ರ ವೇಳೆಗೆ ಬೆಂಕಿಯನ್ನು ನಂದಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಘಟನೆಯಲ್ಲಿ ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸಿಸಿಟಿವಿ ದೃಶ್ಯ ಪರಿಶೀಲಿಸಿದಾಗ, ವ್ಯಕ್ತಿಯೊಬ್ಬ ಘಟನೆಗೂ ಮುನ್ನ ಪಾರ್ಕಿಂಗ್ ಸ್ಥಳದಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿರುವುದು ಕಂಡುಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: 26ನೇ ವಯಸ್ಸಿಗೆ 13 ಜಿಲ್ಲೆಗಳಲ್ಲಿ 21 ಮದುವೆ ಮಾಡಿಕೊಂಡ ರಣಧೀರನಿಗೆ ಕಂಟಕ!