– ಪ್ರವಾಹ ಪೀಡಿತ ಪ್ರದೇಶಗಳಿಗೆ ಸಿಎಂ ಹಿಮಂತ ಬಿಸ್ವ ಶರ್ಮಾ ಭೇಟಿ
ಗುವಾಹಟಿ: ಅಸ್ಸಾಂನಲ್ಲಿ (Assam) ಭಾರೀ ಮಳೆಯಿಂದ ಉಂಟಾದ ಪ್ರವಾಹ (Flood) ಪರಿಸ್ಥಿತಿ ದಿನದಿಂದ ದಿನಕ್ಕೆ ಮತ್ತಷ್ಟು ಗಂಭೀರವಾಗುತ್ತಿದೆ. ಬುಧವಾರ ಒಂದೇ ದಿನ 21 ಮಂದಿ ಪ್ರಾಣ ಕಳೆದುಕೊಂಡಿದ್ದು, ರಾಜ್ಯದ 16 ಜಿಲ್ಲೆಗಳಲ್ಲಿನ 5.64 ಲಕ್ಷಕ್ಕೂ ಹೆಚ್ಚು ಜನರು ಪ್ರವಾಹದಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ವರ್ಷ ಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ 31ಕ್ಕೆ ಏರಿಕೆಯಾಗಿದೆ.
ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ASDMA) ಬಿಡುಗಡೆ ಮಾಡಿದ ವರದಿಯ ಪ್ರಕಾರ, ಶಿವಸಾಗರ್ (Sivasagar) ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಅತಿ ಹೆಚ್ಚು ಅಂದರೆ 13 ಮಂದಿ ಮೃತಪಟ್ಟಿದ್ದಾರೆ. ಚರೈದಿಯೋ ಜಿಲ್ಲೆಯಲ್ಲಿ ಐವರು, ಗೋಲಾಘಾಟ್‌ನಲ್ಲಿ ಇಬ್ಬರು ಹಾಗೂ ಜೋರ್ಹಾಟ್‌ನಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ಪ್ರವಾಹದಿಂದ ಹೆಚ್ಚು ಹಾನಿಗೊಳಗಾದ ಜಿಲ್ಲೆಗಳಲ್ಲಿ ಶಿವಸಾಗರ್, ಜೋರ್ಹಾಟ್ ಹಾಗೂ ಚರೈದಿಯೋ ಪ್ರಮುಖವಾಗಿವೆ. ಶಿವಸಾಗರ್ ಜಿಲ್ಲೆಯಲ್ಲಿ 3,59,535 ಮಂದಿ, ಜೋರ್ಹಾಟ್‌ನಲ್ಲಿ 87,662 ಮಂದಿ ಮತ್ತು ಚರೈದಿಯೋ ಜಿಲ್ಲೆಯಲ್ಲಿ 72,646 ಮಂದಿ ಪ್ರವಾಹದಿಂದ ತೊಂದರೆ ಅನುಭವಿಸುತ್ತಿದ್ದಾರೆ. ಇದನ್ನೂ ಓದಿ: ಆಸ್ಪತ್ರೆ, ಐಸಿಯು ಪೋಸ್ಟ್ ವೈರಲ್; ಅಭಿಮಾನಿಗಳ ಆತಂಕಕ್ಕೆ ಅಮಿತಾಬ್ ಬಚ್ಚನ್ ಸ್ಪಷ್ಟನೆ
ಸಿಎಂ ಶರ್ಮಾ ಭೇಟಿ:
ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಇಂದು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಹಾರ ಮತ್ತು ರಕ್ಷಣಾ ಕಾರ್ಯಗಳ ಪರಿಶೀಲನೆ ನಡೆಸಿದ್ದಾರೆ. ಚರೈದಿಯೋ, ನಜಿರಾ, ಶಿವಸಾಗರ್, ಸೋನಾರಿ, ಜೋರ್ಹಾಟ್ ಹಾಗೂ ತಿಯೋಕ್ ಪ್ರದೇಶಗಳ ಶಿಬಿರಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಮೇಘಸ್ಫೋಟದಿಂದ ಅಸ್ಸಾಂನಲ್ಲಿ ಭೀಕರ ಪ್ರವಾಹ ಉಂಟಾಗಿದ್ದು, ಜನರು ಅಪಾರ ಸಂಕಷ್ಟ ಅನುಭವಿಸುತ್ತಿದ್ದಾರೆ. ಪರಿಹಾರ ಕಾರ್ಯಗಳನ್ನು ಇನ್ನಷ್ಟು ವೇಗಗೊಳಿಸಲು ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಲಾಗುತ್ತದೆ ಎಂದು ಸಿಎಂ ಶರ್ಮಾ ಹೇಳಿದ್ದಾರೆ. ಇದನ್ನೂ ಓದಿ: ದೇಶದ್ರೋಹಿ ಸಂಘಟನೆ ʻಕಾಕ್ರೋಚ್ ಜನತಾ ಪಾರ್ಟಿʼ ಜೊತೆ ರಾಹುಲ್ ಹೋಗಿದ್ದಾರೆ: ಅಶೋಕ್ ಲೇವಡಿ
Visited the relief camp in Charaideo to assess the arrangements and interact with those affected by the floods.
Medical teams and all essential services are in place. I assured every family that the we will stand by them through relief, rehabilitation and recovery.#AssamFloods pic.twitter.com/NBZ1eCA3SF
— Himanta Biswa Sarma (@himantabiswa) July 22, 2026
ಗೋಲಾಘಾಟ್, ಕಾಮರೂಪ್, ಹೊಜೈ, ದಿಬ್ರುಗಢ, ಬಿಸ್ವನಾಥ್, ಧೇಮಾಜಿ, ಸೋನಿತ್ಪುರ್, ಉದಾಲ್ಗುರಿ, ನಾಗಾಂವ್, ಚರೈದಿಯೋ, ಕಾಮರೂಪ್ ಮೆಟ್ರೋ, ಜೋರ್ಹಾಟ್, ಟಿನ್ಸುಕಿಯಾ, ಕಾರ್ಬಿ ಆಂಗ್ಲಾಂಗ್, ಲಖಿಂಪುರ ಹಾಗೂ ಶಿವಸಾಗರ್ ಜಿಲ್ಲೆಗಳು ಪ್ರವಾಹದಿಂದ ತೀವ್ರವಾಗಿ ಬಾಧಿತವಾಗಿವೆ. ಇದನ್ನೂ ಓದಿ: ಮುಂದಿನ ಆದೇಶದವರೆಗೆ ದೆಹಲಿಯ 16 ಮೆಟ್ರೋ ನಿಲ್ದಾಣ ಬಂದ್
ರಾಜ್ಯದ 44 ಆದಾಯ ವಲಯಗಳ ವ್ಯಾಪ್ತಿಯ 872 ಗ್ರಾಮಗಳು ಇನ್ನೂ ನೀರಿನಿಂದ ಆವೃತವಾಗಿವೆ. ಪ್ರವಾಹದಿಂದ ಸ್ಥಳಾಂತರಗೊAಡ ಜನರಿಗಾಗಿ 71 ಪರಿಹಾರ ಶಿಬಿರಗಳನ್ನು ತೆರೆಯಲಾಗಿದ್ದು, ಅಲ್ಲಿ 12,284 ಮಂದಿ ಆಶ್ರಯ ಪಡೆದಿದ್ದಾರೆ. ಜೊತೆಗೆ 202 ಪರಿಹಾರ ವಿತರಣಾ ಕೇಂದ್ರಗಳ ಮೂಲಕ ಅಗತ್ಯ ವಸ್ತುಗಳನ್ನು ಪೂರೈಸಲಾಗುತ್ತಿದೆ. ಇದನ್ನೂ ಓದಿ: ರಾಹುಲ್ ಗಾಂಧಿ ನಡೆ ಖಂಡಿಸಿ ದೇಶವ್ಯಾಪಿ ಪ್ರತಿಭಟನೆಗೆ ಬಿಜೆಪಿ ಪ್ಲ್ಯಾನ್ – ಕಾಂಗ್ರೆಸ್ ಕಚೇರಿಗಳಿಗೆ ಮುತ್ತಿಗೆ ಸಾಧ್ಯತೆ
ಶಿವಸಾಗರ್ ಜಿಲ್ಲೆಯಲ್ಲಿನ ದಿಖೌ ಮತ್ತು ದಿಸಾಂಗ್ ನದಿಗಳು ಅತ್ಯುನ್ನತ ಪ್ರವಾಹ ಮಟ್ಟ ಮೀರಿ ಹರಿಯುತ್ತಿವೆ. ಇದೇ ವೇಳೆ ನೇಮಾತಿಘಾಟ್‌ನ ಬ್ರಹ್ಮಪುತ್ರ ನದಿ, ಖೋವಾಂಗ್‌ನ ಬುರ್ಹಿದಿಹಿಂಗ್ ಹಾಗೂ ಗೋಲಾಘಾಟ್ ಮತ್ತು ನುಮಾಲಿಗಢದ ಧನ್ಸಿರಿ (ದಕ್ಷಿಣ) ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಇದನ್ನೂ ಓದಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ಮೋದಿ ಸಂಪೂರ್ಣ ಜವಾಬ್ದಾರಿ ಹೊರಬೇಕು: ಪರಮೇಶ್ವರ್
ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಭಾರತೀಯ ವಾಯುಪಡೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ರಾಜ್ಯ ವಿಪತ್ತು ನಿರ್ವಹಣಾ ಪಡೆ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಜಂಟಿಯಾಗಿ ರಕ್ಷಣಾ ಹಾಗೂ ಪರಿಹಾರ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಪ್ರತಿಭಟನೆಗೆ ಟಿವಿಕೆ ಸಾಥ್ – ನೀಟ್ ರದ್ದುಪಡಿಸುವಂತೆ ವಿಜಯ್ ಪಕ್ಷ ಆಗ್ರಹ

ರೈಲು ಸಂಚಾರ ಅಸ್ತವ್ಯಸ್ತ:
ಪ್ರವಾಹದ ಪರಿಣಾಮ ರೈಲು ಸಂಚಾರವೂ ಎರಡನೇ ದಿನವೂ ಅಸ್ತವ್ಯಸ್ತಗೊಂಡಿದೆ. ಸಿಮಾಲುಗುರಿ ಪಟ್ಟಣದ ಬಳಿ ರೈಲು ಹಳಿಗಳು ನೀರಿನಲ್ಲಿ ಮುಳುಗಿರುವ ಕಾರಣ ಸಿಮಾಲುಗುರಿ-ನಾಮ್ತಿಯಾಲಿ ಹಾಗೂ ಸಿಮಾಲುಗುರಿ-ಸೆಲೆಂಗ್ಹಾಟ್ ಮಾರ್ಗಗಳಲ್ಲಿ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಈಶಾನ್ಯ ಗಡಿ ರೈಲ್ವೆ ಹಲವು ರೈಲುಗಳನ್ನು ರದ್ದುಪಡಿಸಿದ್ದು, ಕೆಲವು ರೈಲುಗಳ ಮಾರ್ಗ ಬದಲಾವಣೆ ಹಾಗೂ ಕೆಲವು ಸೇವೆಗಳನ್ನು ಮಧ್ಯದಲ್ಲೇ ಸ್ಥಗಿತಗೊಳಿಸಿದೆ. ಇದನ್ನೂ ಓದಿ: ಜಿರಳೆಗಳ ವಿರುದ್ಧ ಲಾಠಿಚಾರ್ಜ್| ವಿಡಿಯೋ ನೋಡಲು ಸಮಯವಿಲ್ಲ – ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ
ಪ್ರವಾಹದಿಂದ ದೂರಸಂಪರ್ಕ ಸೇವೆಗಳಿಗೆ ತೊಂದರೆಯಾಗದಂತೆ ಶಿವಸಾಗರ್, ಚರೈದಿಯೋ ಹಾಗೂ ಜೋರ್ಹಾಟ್ ಜಿಲ್ಲೆಗಳಲ್ಲಿ ಜುಲೈ 24ರವರೆಗೆ ಇಂಟ್ರಾ-ಸರ್ಕಲ್ ರೋಮಿಂಗ್ ವ್ಯವಸ್ಥೆಯನ್ನು ಕೇಂದ್ರ ದೂರಸಂಪರ್ಕ ಇಲಾಖೆ ಜಾರಿಗೆ ತಂದಿದೆ. ಇದರಿಂದ ತಮ್ಮ ಮೊಬೈಲ್ ನೆಟ್‌ವರ್ಕ್ ಕಾರ್ಯನಿರ್ವಹಿಸದಿದ್ದರೂ, ಬೇರೆ ಟೆಲಿಕಾಂ ಕಂಪನಿಗಳ ಜಾಲದ ಮೂಲಕ ಜನರು ಕರೆ ಮತ್ತು ಸಂಪರ್ಕ ಸೇವೆಗಳನ್ನು ಪಡೆಯಲು ಸಾಧ್ಯವಾಗಲಿದೆ. ಇದನ್ನೂ ಓದಿ: GBA ಅಧಿಕಾರಿಗಳ ಮೇಲೆ ಹಲ್ಲೆ; ನಾವು ಮಾಡಿದ್ದು ತಪ್ಪೆಂದು ಕೈಮುಗಿದು ಬೇಡಿಕೊಂಡ ಆರೋಪಿಗಳು
