ಕೋಲ್ಕತ್ತಾ: ಆಡಳಿತಾರೂಢ ತೃಣಮೂಲ ಕಾಂಗ್ರೆಸ್ನ (TMC) 21 ಶಾಸಕರು (MLA) ತಮ್ಮೊಂದಿಗೆ ನೇರ ಸಂಪರ್ಕದಲ್ಲಿದ್ದಾರೆ ಎಂದು ಬಿಜೆಪಿ (BJP) ನಾಯಕ ಮತ್ತು ನಟ ಮಿಥುನ್ ಚಕ್ರವರ್ತಿ (Mithun Chakraborty) ಮತ್ತೊಮ್ಮೆ ಹೇಳಿಕೆ ನೀಡಿ ಸಂಚಲನ ಮೂಡಿಸಿದ್ದಾರೆ.
ಕೋಲ್ಕತ್ತಾದ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮಿಥುನ್ ಚಕ್ರವರ್ತಿ, 21 ಟಿಎಂಸಿ ಶಾಸಕರು ಇನ್ನೂ ನನ್ನೊಂದಿಗೆ ಸಂಪರ್ಕದಲ್ಲಿದ್ದಾರೆ. ನಾನು ಇದನ್ನು ಮೊದಲೇ ಹೇಳಿದ್ದೇನೆ. ಮತ್ತೆ ಮತ್ತೆ ಹೇಳುತ್ತಿದ್ದೇನೆ ಎಂದು ಹೇಳಿದರು.
ಟಿಎಂಸಿ ಶಾಸಕರು ನಮ್ಮ ಸಂಪರ್ಕದಲ್ಲಿದ್ದರೂ ಅವರನ್ನು ತೆಗೆದುಕೊಳ್ಳುವ ಬಗ್ಗೆ ನಮ್ಮ ಪಕ್ಷದೊಳಗೆ ಆಕ್ಷೇಪಗಳಿವೆ ಎಂದು ನನಗೆ ತಿಳಿದಿದೆ. ಕೊಳೆತ ಆಲೂಗಡ್ಡೆಯನ್ನು ತೆಗೆದುಕೊಳ್ಳಲು ಆಗುವುದಿಲ್ಲ ಎಂದು ಹಲವರು ಹೇಳಿದ್ದಾರೆ. ಆದರೆ ನಾನು ಇದನ್ನು ಹೇಳುವುದಿಲ್ಲ. ಹಾಗೂ ಅದೇ ತಪ್ಪನ್ನು ಮತ್ತೆ ಪುನರಾವರ್ತಿಸುವುದಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: 30 ಕೇಸ್ ಎದುರಿಸಿದ್ದೇವೆ, ಯಾವನಿಗೂ ಹೆದರಿ ಓಡಿ ಹೋಗುವ ಪ್ರಶ್ನೆಯೇ ಇಲ್ಲ: ವಿಜಯೇಂದ್ರ
ಇತ್ತೀಚೆಗೆ ಮಿಥುನ್ ಚಕ್ರವರ್ತಿ ಬಿಜೆಪಿ ಮುಖಂಡರ ಜೊತೆ ಸಭೆ ನಡೆಸಿ, ಟಿಎಂಸಿ ಶಾಸಕರು ತಮ್ಮ ಸಂಪರ್ಕದಲ್ಲಿರುವ ಬಗ್ಗೆ ತಿಳಿಸಿದ್ದರು. ಅವರು 21ಕ್ಕೂ ಹೆಚ್ಚು ಶಾಸಕರು ಸಂಪರ್ಕದಲ್ಲಿದ್ದಾರೆ ಆದರೆ ನಿಖರವಾದ ಸಂಖ್ಯೆ ತಿಳಿಸಲು ಸಾಧ್ಯವಿಲ್ಲ ಎಂದಿದ್ದರು. ಇದನ್ನೂ ಓದಿ: ರಮೇಶ್ ಜಾರಕಿಹೊಳಿಗೆ ಸರ್ಕಾರ ಉರುಳಿಸುವ ಶಕ್ತಿ ಇದೆ – ಸತೀಶ್ ಜಾರಕಿಹೊಳಿ