ಚೆನ್ನೈ: ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಣೆ ಮಾಡಲು ಅನುಮತಿ ಕೊಡಲಿಲ್ಲವೆಂದು 21 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನ ವಿರುದುನಗರದಲ್ಲಿ ನಡೆದಿದೆ.
Advertisement
ಕಿರ್ಗಿಸ್ತಾನ್‌ನಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿರುವ ಲೋಕೇಶ್ (21) ರಜೆಯನ್ನು ಕಳೆಯಲು ತಮಿಳುನಾಡಿಗೆ ಬಂದಿದ್ದಾನೆ. ಈ ವೇಳೆ ಪೋಷಕರು ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಣೆ ಮಾಡಲು ಅವಕಾಶ ಕೊಡಲಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದನ್ನೂ ಓದಿ: ಬಾಯಿ ಮುಚ್ಚಿಕೊಂಡಿದ್ರೆ ಸರಿ, ನಿನ್ನ ಕಥೆ ಎಲ್ಲ ಹೇಳಬೇಕಾಗುತ್ತೆ: ಸುಧಾಕರ್‌ಗೆ ಸಿದ್ದರಾಮಯ್ಯ ವಾರ್ನಿಂಗ್
Advertisement
Advertisement
ಕಿರ್ಗಿಸ್ತಾನ್‌ನಲ್ಲಿ 3ನೇ ವರ್ಷದ ವೈದ್ಯಕೀಯ ವ್ಯಾಸಂಗ ಮಾಡುತ್ತಿರುವ ಲೋಕೇಶ್ ರಜೆಯ ಮೇಲೆ ತಮಿಳುನಾಡಿಗೆ ಬಂದಿದ್ದನು. ಈ ವೇಳೆ ಅಪ್ಪ-ಅಮ್ಮನೊಂದಿಗೆ ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಲು ಕೇಳಿದ್ದಾನೆ. ಅವರು ಅನುಮತಿ ನಿರಾಕರಿಸಿದ್ದರಿಂದ ನಿದ್ರೆ ಮಾತ್ರೆ ಸೇವಿಸಿದ್ದಾನೆ. ನಂತರ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ. ಕೆಲ ಸಮಯದ ಬಳಿಕ ಮಗನನ್ನು ನೋಡಿ ಬಳಿಕ ಅವನನ್ನು ವಿರುದುನಗರದ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಳಿಸಿದ್ದಾರೆ. ಹೆಚ್ಚುವರಿ ಚಿಕಿತ್ಸೆಗಾಗಿ ಮಧುರೈನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿನ್ನೆ ರಾತ್ರಿ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾನೆ ಎಂದು ಮಧುರೈ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಲಿಪ್‍ಸ್ಟಿಕ್‍ನಿಂದ ವಾಲ್ ಮೇಲೆ ಡೆತ್ ನೋಟ್ – ಗೃಹಿಣಿ ಆತ್ಮಹತ್ಯೆಗೆ ಕಿರುಕುಳವೇ ಕಾರಣವಾಯ್ತಾ?
Advertisement
ಲೋಕೇಶ್ ತಂದೆ ವಿರುದುನಗರದಲ್ಲಿ ಆಸ್ಪತ್ರೆ ಹಾಗೂ ಔಷಧಾಲಯ ಹೊಂದಿದ್ದಾರೆ ಎಂದು ವರದಿಯಾಗಿದೆ.