ಮಂಡ್ಯ: ಯುವಕನೊಬ್ಬ ತಾನು ಪ್ರೀತಿಸುತ್ತಿದ್ದ ಅಪ್ರಾಪ್ತೆಯ ಮನೆ ಮುಂದೆ ಜಿಲೆಟಿನ್ ಸ್ಫೋಟಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಾಗಮಂಗಲದ (Nagamangala) ಗ್ರಾಮವೊಂದರಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ಯುವಕನನ್ನು ರಾಮಚಂದ್ರ (21) ಎಂದು ಗುರುತಿಸಲಾಗಿದೆ. ಯುವಕ ಕಲ್ಲು ಗಣಿಗಾರಿಕೆಗೆ ಬಳಸುವ ಜಿಲೆಟಿನ್ ಸ್ಫೋಟಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪರಿಣಾಮ ಯುವಕನ ಹೊಟ್ಟೆ ಭಾಗ ಛಿದ್ರವಾಗಿದೆ.
Advertisement
ರಾಮಚಂದ್ರ ಒಂದು ವರ್ಷದ ಹಿಂದೆ ತಾನು ಪ್ರೀತಿಸುತ್ತಿದ್ದ ಅಪ್ರಾಪ್ತೆಯನ್ನು ಕರೆದುಕೊಂಡು ಹೋಗಿದ್ದ. ಈ ಹಿನ್ನೆಲೆ ಆತನ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿತ್ತು. ಬಳಿಕ 6 ತಿಂಗಳು ಜೈಲುವಾಸ ಅನುಭವಿಸಿದ್ದ. ಬಳಿಕ 2 ಕುಟುಂಬಗಳ ರಾಜಿ ಸಂಧಾನದ ಬಳಿಕ ಕೇಸ್ ವಾಪಾಸ್ ಪಡೆಯಲಾಗಿತ್ತು. ನಂತರ ರಾಮಚಂದ್ರನ ಸಂಪರ್ಕಕ್ಕೆ ಬಾಲಕಿ ಸಿಕ್ಕಿರಲಿಲ್ಲ. ಇದರಿಂದ ಮನನೊಂದು ಆಕೆಯ ಮುನೆಯ ಮುಂದೆ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
Advertisement
Advertisement
ಪ್ರಕರಣ ಸಂಬಂಧ ಪ್ರತಿಕ್ರಿಯಿಸಿರುವ ಮಂಡ್ಯ (Mandya) ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಯುವಕ ಲಾರಿ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಆತ ಪೋಕ್ಸೋ ಕೇಸಲ್ಲಿ ಜೈಲಿಗೆ ಹೋಗಿ ಬಂದಿದ್ದ. ಶನಿವಾರ ರಾತ್ರಿ ಸ್ನೇಹಿತರ ಜೊತೆ ಮದ್ಯ ಸೇವನೆ ಕೂಡ ಮಾಡಿದ್ದ. ಆತನಿಗೆ ಸ್ಫೋಟಕ ಎಲ್ಲಿ ಸಿಕ್ಕಿದೆ ಎಂಬ ಬಗ್ಗೆ ತನಿಖೆ ಮಾಡಲಾಗುತ್ತಿದೆ. ಸ್ಫೋಟಕ ನೀಡಿದವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
Advertisement
ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.