ಟೆಲ್ ಅವಿವ್: ಗಾಜಾ (Gaza) ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ (Israel) ನಡೆಸಿದ ದಾಳಿಯಲ್ಲಿ ಕನಿಷ್ಠ 210 ಜನ ಸಾವನ್ನಪ್ಪಿದ್ದು, 400ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂದು ಹಮಾಸ್‍ನ (Hamas) ಸರ್ಕಾರಿ ಮಾಧ್ಯಮ ಕಚೇರಿ ತಿಳಿಸಿದೆ.
ನುಸಿರಾತ್‍ನಲ್ಲಿ ನಾಲ್ವರು ಇಸ್ರೇಲಿ ಒತ್ತೆಯಾಳುಗಳನ್ನು ರಕ್ಷಿಸಿರುವುದಾಗಿ ಇಸ್ರೇಲ್‍ನ ಸೇನೆ ಘೋಷಿಸಿದ ನಂತರ ದೊಡ್ಡ ಪ್ರಮಾಣದ ದಾಳಿ ನಡೆದಿದೆ. ರಕ್ಷಿಸಲ್ಪಟ್ಟ ಒತ್ತೆಯಾಳುಗಳನ್ನು ನೋವಾ ಅರ್ಗಾಮಣಿ (26) ಅಲ್ಮೊಗ್ ಮೀರ್ ಜಾನ್ (22) ಆಂಡ್ರೆ ಕೊಜ್ಲೋವ್ (27) ಮತ್ತು ಶ್ಲೋಮಿ ಝಿವ್ (41) ಇಸ್ರೇಲ್ ಸೇನೆ ಹೇಳಿಕೊಂಡಿದೆ.
Advertisement
Advertisement
ಇಸ್ರೇಲ್ ದಾಳಿಗೆ ಪ್ರತಿಕ್ರಿಯಿಸಿರುವ ಹಮಾಸ್ ನಾಯಕ ಇಸ್ಮಾಯಿಲ್ ಹನಿಯೆಹ್, ನಾವು ಹೋರಾಟವನ್ನು ಮುಂದುವರೆಸುತ್ತೇವೆ. ನಮ್ಮ ಜನ ಶರಣಾಗುವುದಿಲ್ಲ ಮತ್ತು ಶತ್ರುಗಳಿಂದ ನಮ್ಮ ಹಕ್ಕುಗಳನ್ನು ರಕ್ಷಿಸಲು ಪ್ರತಿರೋಧ ಮುಂದುವರಿಯುತ್ತದೆ ಎಂದು ಅವರು ಹೇಳಿಕೊಂಡಿದ್ದಾರೆ.
Advertisement
Advertisement
ನಿರಂತರ ಯುದ್ಧದಿಂದಾಗಿ ಸಾವು ನೋವಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸಹಾಯಕ್ಕಾಗಿ ಅಂತರರಾಷ್ಟ್ರೀಯ ಸಹಾಯ ಸಂಸ್ಥೆಗಳಿಗೆ ಹಮಾಸ್ ಮನವಿ ಮಾಡಿದೆ.