ಬೆಂಗಳೂರು: ಈ ಚುನಾವಣೆ ನನ್ನ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ನಡುವಿನ ಚುನಾವಣೆಯಲ್ಲ. ರಾಜ್ಯದ ಜನರ ಸ್ಫೂರ್ತಿಯ ಚುನಾವಣೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಕಡೆಯ ದಿನವಾದ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಮ್ಮ ನಂಬಿಕೆಗಳ ಮೇಲೆ ನಾವು ಜೀವನ ಮಾಡುತ್ತಿದ್ದೇವೆ. ಕಳೆದ 15 ವರ್ಷದಿಂದ ನಾನು ಹಲವು ದೇವಸ್ಥಾನಗಳಿಗೆ ಭೇಟಿ ಕೊಟ್ಟಿದ್ದೇನೆ. ಮಂದಿರ, ಮಸೀದಿ, ಚರ್ಚ್ ಗಳಿಗೆ ಭೇಟಿ ನೀಡಿದ್ದೇನೆ. ನಮಗೆ ಎಲ್ಲ ಸಮುದಾಯಗಳೂ ಮುಖ್ಯ. ಅವರು ಬೇಡ, ಇವರು ಬೇಡ ಅನ್ನುವ ಪಕ್ಷ ನಮ್ಮದಲ್ಲ. ಆದರೆ ಹೀಗೆ ಭೇಟಿ ಕೊಟ್ಟಾಗ ಬಿಜೆಪಿಯವರಿಗೆ ಅದನ್ನ ಸಹಿಸಿಕೊಳ್ಳಲು ಆಗುವುದಿಲ್ಲ. ಚುನಾವಣೆ ಸಂದರ್ಭದಲ್ಲಿ ಮಠ ಮಾನ್ಯಗಳು ನೆನಪಾಗುತ್ತದೆ ಎಂದು ಟೀಕಿಸುತ್ತಾರೆ. ಹಿಂದಿನ ಅನೇಕ ಚುನಾವಣೆಗಳಲ್ಲಿ ಇದೇ ರೀತಿಯ ಟೀಕೆ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
Advertisement
ರಾಜ್ಯದ ಜನರ ಮೇಲೆ ನಂಬಿಕೆಯಿಟ್ಟಿದ್ದೇವೆ. ಯುವಜನತೆಗೆ ಉದ್ಯೋಗ ಸೃಷ್ಠಿ ನಮ್ಮ ಗುರಿ. ಐಟಿ ಸಿಟಿ, ಗಾರ್ಡನ್ ಸಿಟಿ ಹೆಸರು ನಾವು ಉಳಿಸುತ್ತೇವೆ. ಮಹದಾಯಿ ನದಿ ನೀರು ಹಂಚಿಕೆ ಕುರಿತು ಕಾಂಗ್ರೆಸ್ ನಿಲುವೇನು ಎಂಬುದನ್ನು ಶೀಘ್ರದಲ್ಲಿಯೇ ಸ್ಪಷ್ಟಪಡಿಸುತ್ತೇವೆ ಎಂದು ಹೇಳಿದರು.
Advertisement
Advertisement
ಮಾತನಾಡಿದ ಅವರು ಈ ಚುನಾವಣೆ ನನ್ನ ಭವಿಷ್ಯಕ್ಕಾಗಿ ಅಲ್ಲ. ಮುಂದೆ ಪ್ರಧಾನಿ ಆಗಲು ಸಹಕಾರಿಯೂ ಅಲ್ಲ. ಬೆಂಗಳೂರು ರಾಷ್ಟ್ರದ ಹೆಮ್ಮೆ. ದೇಶಕ್ಕೆ ಕರ್ನಾಟಕದ ಕೊಡುಗೆ ಅಪಾರ. ಈ ಚುನಾವಣೆಯಿಂದ ಕರ್ನಾಟಕ ಇನ್ನೂ ಹೆಚ್ಚಿನ ಅಭಿವೃದ್ಧಿಯ ಕಡೆಗೆ ನಡೆಯಬೇಕಿದೆ ಎಂದು ಹೇಳಿದರು.
Advertisement
ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ಓಡಾಡಿದ್ದೇನೆ. ನಾವು ಯಾರ ವಿರುದ್ಧವೂ ಟೀಕೆ ಮಾಡಿಲ್ಲ. ಸಂವಿಧಾನದ ಆಶಯಗಳನ್ನಿಟ್ಟುಕೊಂಡು ಚುನಾವಣೆಗೆ ಹೊರಟಿದ್ದೇವೆ. ರಾಜ್ಯದ ಜನರನ್ನ ಗಮನದಲ್ಲಿಟ್ಟುಕೊಂಡು ಪ್ರಣಾಳಿಕೆ ರಚಿಸಿದ್ದೇವೆ. ಜನರ ಆಶಯಗಳಿಗೆ ಅನುಗುಣವಾಗಿ ಪ್ರಣಾಳಿಕೆ ತಯಾರಾಗಿದೆ. ವೀರಪ್ಪ ಮೊಯ್ಲಿ ಉತ್ತಮ ಪ್ರಣಾಳಿಕೆ ರಚಿಸಿದ್ದಾರೆ. ಕರ್ನಾಟಕದ ಜನರ ಧ್ವನಿಯಾಗಿ ಪ್ರಣಾಳಿಕೆ ಬಿಡುಗಡೆ ಮಾಡಿದ್ದೇವೆ. ಕೊಟ್ಟ ಭರವಸೆ ಈಡೇರಿಸುವ ಗುರಿ ನಮ್ಮದು. ರಾಜ್ಯದ ಜನ ಚುನಾವಣೆಯಲ್ಲಿ ನಮ್ಮ ಪರ ನಿಲ್ಲಲಿದ್ದಾರೆ, ಆ ಭರವಸೆ ನಮಗಿದೆ ಎಂದು ಆತ್ಮ ವಿಶ್ವಾಸ ವ್ಯಕ್ತಪಡಿಸಿದರು.
ಕಾಂಗ್ರೆಸ್ ಗೆ ಬಹುಮತ ಬರುತ್ತದೆ. ಅತಂತ್ರ ವಿಧಾನಸಭೆಗೆ ಆಸ್ಪದವೇ ಇಲ್ಲ. ಈ ಚುನಾವಣೆ ಕನ್ನಡದ ಅಸ್ಮಿತೆ ಮೇಲೆ ನಡೆಯುತ್ತಿದೆ. ಕರ್ನಾಟಕದ ಜನ ಕಾಂಗ್ರೆಸ್ಸನ್ನು ಆರಿಸುತ್ತಾರೆ. ಬಸವ ತತ್ವವೇ ನಮ್ಮ ತತ್ವ. ಅದೇ ನಮಗೆ ಸ್ಪೂರ್ತಿ. ಆರ್‍ಎಸ್‍ಎಸ್ ಕರ್ನಾಟಕವನ್ನು ತನ್ನ ಹಿಡಿತಕ್ಕೆ ತೆಗೆದುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಯಾವುದೇ ಕಾರಣಕ್ಕೂ ಅವಕಾಶ ಕೊಡಬಾರದು. ಜಾಗ್ರತೆಯಿಂದ ಇರಿ ಎಂದು ಎಚ್ಚರಿಕೆ ನೀಡಿದರು.
ಭಾಷೆ, ಸಂಸ್ಕ್ರತಿ ಮತ್ತು ಬಸವ ತತ್ವದ ಮೇಲೆ ಸವಾರಿ ಮಾಡಲು ಆರ್‍ಎಸ್‍ಎಸ್ ಹೊರಟಿದೆ. ಆರ್‍ಎಸ್‍ಎಸ್ ಸಿದ್ಧಾಂತ ಮತ್ತು ಕರ್ನಾಟಕದ ಅಸ್ಮಿತೆಯ ಮಧ್ಯೆ ನಡೆಯುವ ಹೋರಾಟ ಈ ಚುನಾವಣೆ. ಕರ್ನಾಟಕದ ಅಸ್ಮಿತೆಯನ್ನ ಉಳಿಸಲು ನಾವು ಬದ್ಧರಾಗಿದ್ದೇವೆ ಎಂದು ತಿಳಿಸಿದರು.
ಈ ಬಾರಿ ಬಿಜೆಪಿಯವರು ನನ್ನ ಹಾಗೂ ನಮ್ಮ ನಾಯಕರುಗಳ ಮೇಲೆ ವೈಯುಕ್ತಿಕವಾಗಿ ವಾಗ್ದಾಳಿ ಮಾಡುವ ಮಟ್ಟಕ್ಕೆ ಇಳಿದಿದ್ದಾರೆ. ಆದರೆ ಮಹಿಳೆ, ಯುವತಿಯರ ಮೇಲಿನ ಅತ್ಯಾಚಾರ ವಿಚಾರವನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿಲ್ಲ. ಇದು ದೇಶದಲ್ಲೇ ಚರ್ಚೆಯಾಗಬೇಕಾದ ವಿಚಾರ. ದೇಶದ ಜನರ ಹಕ್ಕು, ರಕ್ಷಣೆಯ ವಿಚಾರ. ಕಚ್ಛಾ ತೈಲ ಬ್ಯಾರಲ್ ಬೆಲೆ 140 ಡಾಲರ್ ನಿಂದ 70 ಡಾಲರ್ ಗೆ ಇಳಿದಿದೆ. ಆದರೂ ಪೆಟ್ರೋಲ್ ಬೆಲೆ ಕಡಿಮೆ ಮಾಡಿಲ್ಲ ಇದರಿಂದ ದೇಶದ ಜನರಿಗೆ ಮತ್ತಷ್ಟು ಹೊರೆಯಾಗಿದೆ ಎಂದು ಕಿಡಿಕಾರಿದರು.
ರೆಡ್ಡಿ ಬ್ರದರ್ಸ್ ರಾಜ್ಯವನ್ನೇ ಲೂಟಿ ಹೊಡೆದಿದ್ದಾರೆ. 35 ಸಾವಿರ ಕೋಟಿ ರಾಜ್ಯದ ಬೊಕ್ಕಸಕ್ಕೆ ನಷ್ಟ ಮಾಡಿದ್ದಾರೆ. ಇದರ ಬಗ್ಗೆ ಯಾಕೆ ಯಾರು ಮಾತನಾಡುವುದಿಲ್ಲ ಎಂದು ಪ್ರಶ್ನೆ ಮಾಡಿದರು.
ದಲಿತರಿಗೆ ದೇಶದಲ್ಲಿ ರಕ್ಷಣೆಯಿಲ್ಲದಂತಾಗಿದೆ. ಉತ್ತರ ಪ್ರದೇಶದಲ್ಲಿ ದಲಿತರ ಮೇಲಿನ ಹಲ್ಲೆ ನಿಂತಿಲ್ಲ. ತಡೆಯುವಲ್ಲಿ ಪ್ರಧಾನಿ ವಿಫಲರಾಗಿದ್ದಾರೆ. ರೋಹಿತ್ ವೇಮುಲ ಸಾವು ಏನಾಯ್ತು?. ಉನ್ನಾವ್, ಕತುವಾ ಅತ್ಯಾಚಾರದಲ್ಲಿ ಹೇಗೆ ನಡೆದುಕೊಂಡರು ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ನಮ್ಮ ನಂಬಿಕೆಗಳ ಮೇಲೆ ನಾವು ಜೀವನ ಮಾಡುತ್ತಿದ್ದೇವೆ. ಕಳೆದ 15 ವರ್ಷದಿಂದ ನಾನು ಹಲವು ದೇವಸ್ಥಾನಗಳಿಗೆ ಭೇಟಿ ಕೊಟ್ಟಿದ್ದೇನೆ. ಮಂದಿರ, ಮಸೀದಿ, ಚರ್ಚ್ ಗಳಿಗೆ ಭೇಟಿ ನೀಡಿದ್ದೇನೆ. ನಮಗೆ ಎಲ್ಲ ಸಮುದಾಯಗಳೂ ಮುಖ್ಯ. ಅವರು ಬೇಡ, ಇವರು ಬೇಡ ಅನ್ನುವ ಪಕ್ಷ ನಮ್ಮದಲ್ಲ. ಆದರೆ ಹೀಗೆ ಭೇಟಿ ಕೊಟ್ಟಾಗ ಬಿಜೆಪಿಯವರಿಗೆ ಅದನ್ನ ಸಹಿಸಿಕೊಳ್ಳಲು ಆಗುವುದಿಲ್ಲ. ಚುನಾವಣೆ ಸಂದರ್ಭದಲ್ಲಿ ಮಠ ಮಾನ್ಯಗಳು ನೆನಪಾಗುತ್ತದೆ ಎಂದು ಟೀಕಿಸುತ್ತಾರೆ. ಹಿಂದಿನ ಅನೇಕ ಚುನಾವಣೆಗಳಲ್ಲಿ ಇದೇ ರೀತಿಯ ಟೀಕೆ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
"We have placed our development track record in front of people. We have also made new promises in the manifesto.
There is no anti-incumbency as the benefits of our schemes have reached people.
People will surely bless us again": CM @siddaramaiah #CongressForNavaKarnataka pic.twitter.com/ABVWXdcxo1
— Karnataka Congress (@INCKarnataka) May 10, 2018