ಲಕ್ನೋ: ಮಕ್ಕಳ ಮೇಲಿನ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ 218 ಫಾಸ್ಟ್ ಟ್ರ್ಯಾಕ್ ಕೋರ್ಟುಗಳನ್ನು ಸ್ಥಾಪಿಸಲು ಉತ್ತರ ಪ್ರದೇಶ ಸರ್ಕಾರ ಮುಂದಾಗಿದೆ.
ಉತ್ತರ ಪ್ರದೇಶದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಮಕ್ಕಳ ಹಾಗೂ ಮಹಿಳೆಯರ ಮೇಲೆ ನಡೆಯುತ್ತಿರುವ ಲೈಂಗಿಕ ದೌರ್ಜನ್ಯಗಳನ್ನು ತಡೆಯುವ ನಿಟ್ಟಿನಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಈ ನಿರ್ಧಾರ ಕೈಗೊಂಡಿದ್ದಾರೆ.
Advertisement
Advertisement
ರಾಜ್ಯ ಕಾನೂನು ಸಚಿವ ಬ್ರಿಜೇಶ್ ಪಠಾಕ್ ಅವರು ಮಾಹಿತಿ ನೀಡಿ, ಮಕ್ಕಳು ಹಾಗೂ ಮಹಿಳೆಯರ ಮೇಲೆ ನಡೆಯುತ್ತಿರುವ ಲೈಂಗಿಕ ದೌರ್ಜನ್ಯಗಳನ್ನು ತಡೆಯುವ ನಿಟ್ಟಿನಲ್ಲಿ ಸಿಎಂ ಯೋಗಿ ಆದಿತ್ಯನಾಥ್ ಅವರು ಈ ನಿರ್ಧಾರ ಕೈಗೊಂಡಿದ್ದಾರೆ. ಅತ್ಯಾಚಾರ ಪ್ರಕರಣಗಳನ್ನು ಹತ್ತಿಕ್ಕುವ ನಿಟ್ಟಿನಲ್ಲಿ 218 ಫಾಸ್ಟ್ ಟ್ರ್ಯಾಕ್ ಕೋರ್ಟುಗಳನ್ನು ಸ್ಥಾಪಿಸಲು ಉತ್ತರ ಪ್ರದೇಶದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಇದರಲ್ಲಿ 144 ಕೋರ್ಟುಗಳು ಅತ್ಯಾಚಾರ ಪ್ರಕರಣಗಳನ್ನು ತ್ವರಿತಗತಿಯಲ್ಲಿ ವಿಚಾರಣೆ ನಡೆಸಲಿವೆ. ಉಳಿದ 74 ಕೋರ್ಟುಗಳು ಪೊಕ್ಸೊ ಕಾಯ್ದೆಯಡಿ ದಾಖಲಿಸಲಾಗುವ ಪ್ರಕರಣಗಳ ವಿಚಾರಣೆ ನಡೆಸಲಿವೆ ಎಂದು ತಿಳಿಸಿದ್ದಾರೆ.
Advertisement
Advertisement
ಈ 218 ಕೋರ್ಟುಗಳಿಗೆ 218 ಹೆಚ್ಚುವರಿ ಸೆಷನ್ ಜಡ್ಜ್‍ಗಳನ್ನು ನೇಮಿಸಲಾಗುವುದು. ಅಲ್ಲದೆ ಅಗತ್ಯವಿರುವ ಎಲ್ಲ ಸಿಬ್ಬಂದಿಯನ್ನು ಸರ್ಕಾರ ನೇಮಿಸಲಿದೆ ಎಂದು ಅವರು ತಿಳಿಸಿದ್ದಾರೆ. ಈ ಕೋರ್ಟುಗಳನ್ನು ನಡೆಸಲು ತಗಲುವ ವೆಚ್ಚವನ್ನು ಶೇ.60ರಷ್ಟು ಕೇಂದ್ರ ಸರ್ಕಾರ ಭರಿಸಲಿದೆ. ಉಳಿದ ಶೇ.40ರಷ್ಟು ವೆಚ್ಚವನ್ನು ಯುಪಿ ಸರ್ಕಾರ ಭರಿಸಲಿದೆ. ಒಂದು ಫಾಸ್ಟ್ ಟ್ರ್ಯಾಕ್ ಕೋರ್ಟ್ ಸ್ಥಾಪಿಸಲು ಸುಮಾರು 63 ಲಕ್ಷ ರೂ. ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ ಎಂದು ಪಠಾಕ್ ತಿಳಿಸಿದರು.