-ಆ.7ರಿಂದ 18ರವರೆಗೆ ನಡೆಯಲಿರುವ ಪ್ರದರ್ಶನ
ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಗುರುವಾರದಿಂದ (ಆ.7) ನಗರದ ಲಾಲ್‌ಬಾಗ್‌ನಲ್ಲಿ (Lalbhag) 218ನೇ ಫಲಪುಷ್ಪ ಪ್ರದರ್ಶನ ನಡೆಯಲಿದೆ.
ನಾಳೆ (ಗುರುವಾರ) ಬೆಳಿಗ್ಗೆ 10 ಗಂಟೆಗೆ ಸಿಎಂ ಸಿದ್ದರಾಮಯ್ಯ (CM Siddaramaiah) 218ನೇ ಫಲಪುಷ್ಪ ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ. ಪ್ರದರ್ಶನ ಸಂಪೂರ್ಣವಾಗಿ ಕಿತ್ತೂರು ರಾಣಿ ಚೆನ್ನಮ್ಮನ (Kitturu Chennamma) ಆಸ್ಥಾನದ ಪರಿಕಲ್ಪನೆಯಲ್ಲಿ ಆಯೋಜನೆಯಾಗಲಿದೆ.ಇದನ್ನೂ ಓದಿ: ಗಂಗೆ ನಿಮ್ಮ ಪಾದವನ್ನು ಸ್ಪರ್ಶಿಸುತ್ತಿದ್ದಾಳೆ, ಇದು ನಿಮ್ಮನ್ನು ನೇರವಾಗಿ ಸ್ವರ್ಗಕ್ಕೆ ಕರೆದೊಯ್ಯುತ್ತೆ – ಯುಪಿ ಸಚಿವ ವಿವಾದಾತ್ಮಕ ಹೇಳಿಕೆ
ಆಂಧ್ರಪ್ರದೇಶ, ತಮಿಳುನಾಡು, ಪುಣೆ, ಕೇರಳದಿಂದ ಹೂವುಗಳಿಂದ ತರಿಸಲಾಗಿದ್ದು, 18 ಅಡಿ ಎತ್ತರ ಮತ್ತು 32 ಅಡಿ ಅಗಲದ ಕಿತ್ತೂರು ಕೋಟೆ, ಕಿತ್ತೂರು ರಾಣಿ ಚೆನ್ನಮ್ಮನವರ ಐಕ್ಯ ಮಂಟಪಗಳು ಸಿದ್ಧಗೊಳ್ಳುತ್ತಿವೆ. 600ಕ್ಕೂ ಹೆಚ್ಚು ಕಾರ್ಮಿಕರು, ಸಿಬ್ಬಂದಿ ಕೆಲಸ ಮಾಡುತ್ತಿದ್ದು, ಭರ್ಜರಿಯಿಂದ ತಯಾರಿ ನಡೆಯುತ್ತಿದೆ.
ಇನ್ನೂ ಪ್ರದರ್ಶನದಲ್ಲಿ ಹೈಡ್ರಾಂಜಿ, ಕ್ಯಾಲಲಿಲಿ, ಆರ್ಕಿಟ್ಸ್, ಟ್ಯೂಬ್ರೆಟ್ಸ್ ಬೆಗೆನಿಯಾ ಸೇರಿದಂತೆ 105ಕ್ಕೂ ವಿಶೇಷವಾದ ವಾರ್ಷಿಕ ಹೂವುಗಳ ಬಳಕೆ ಮಾಡಲಾಗಿದೆ. ಆ.7ರಿಂದ 18ರವರೆಗೆ ಫಲಪುಷ್ಪ ಪ್ರದರ್ಶನ ನಡೆಯಲಿದ್ದು, ಸಾಮಾನ್ಯ ದಿನಗಳಲ್ಲಿ ವಯಸ್ಕರಿಗೆ 80 ರೂ. ಹಾಗೂ ರಜಾ ದಿನಗಳಲ್ಲಿ ವಯಸ್ಕರಿಗೆ 100 ರೂ., ಮಕ್ಕಳಿಗೆ 30 ರೂ. ದರ ನಿಗದಿ ಮಾಡಲಾಗಿದೆ. ಶಾಲಾ ಮಕ್ಕಳಿಗೆ ಉಚಿತ ಪ್ರವೇಶವಿರುತ್ತದೆ.ಇದನ್ನೂ ಓದಿ: ಕಾಂಗ್ರೆಸ್ ಸಂಸದೆ ಸರ ಕಳವು ಪ್ರಕರಣ – ಆರೋಪಿಯನ್ನು ಬಂಧಿಸಿದ ದೆಹಲಿ ಪೊಲೀಸ್