– 6 ವಿಕೆಟ್‍ಗಳಿಂದ ಎರಡನೇ ಪಂದ್ಯ ಗೆದ್ದು ಬೀಗಿದ ಇಂಡಿಯಾ
ಸಿಡ್ನಿ: ಇಂದು ನಡೆದ ಭಾರತ ವರ್ಸಸ್ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟಿ-20 ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ತೋರಿದ ಭಾರತ ತಂಡ 6 ವಿಕೆಟ್‍ಗಳಿಂದ ಗೆದ್ದು ಬೀಗಿದೆ. ಈ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ ಮೊದಲ ಎರಡು ಪಂದ್ಯ ಗೆಲ್ಲುವ ಮೂಲಕ ಸರಣಿಯನ್ನು ವಶಪಡಿಸಿಕೊಂಡಿದೆ.
ಇಂದು ಸಿಡ್ನಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡ ನಾಯಕ ಮ್ಯಾಥ್ಯೂ ವೇಡ್ ಮತ್ತು ಸ್ಟೀವ್ ಸ್ಮಿತ್ ಅವರು ಭರ್ಜರಿ ಬ್ಯಾಟಿಂಗ್‍ನಿಂದ ನಿಗಧಿತ 20 ಓವರಿನಲ್ಲಿ ಭರ್ಜರಿ 194 ರನ್ ಸಿಡಿಸಿತ್ತು. ಈ ಗುರಿಯನ್ನು ಬೆನ್ನಟ್ಟಿದ ಇಂಡಿಯಾ ತಂಡ ಹಾರ್ದಿಕ್ ಪಾಂಡ್ಯ ಮತ್ತು ಶಿಖರ್ ಧವನ್ ಭರ್ಜರಿ ಬ್ಯಾಟಿಂಗ್‍ನಿಂದ ಇನ್ನೂ ಎರಡು ಬಾಲ್ ಉಳಿದಂತೆ 195 ರನ್ ಹೊಡೆದು ಜಯ ಸಾಧಿಸಿತು.
ಪಾಂಡ್ಯ ಸ್ಫೋಟಕ
ಇಂದಿನ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಸೂಪರ್ ಆಗಿ ಬ್ಯಾಟ್ ಬೀಸಿದರು. ಕೊಹ್ಲಿ ಔಟ್ ಆದ ಬಳಿಕ ಬ್ಯಾಟಿಂಗ್ ಬಂದ ಪಾಂಡ್ಯ, 22 ಬಾಲಿನಲ್ಲಿ 3 ಬೌಂಡರಿ ಮತ್ತು ಎರಡು ಸಿಕ್ಸರ್ ಸಮೇತ 42 ರನ್ ಸಿಡಿಸಿದರು. ಕೊನೆಯ ಓವರಿನಲ್ಲಿ 14 ರನ್ ಬೇಕಿದ್ದಾಗ ಸಿಕ್ಸರ್ ಸಿಡಿಸಿ ಭಾರತಕ್ಕೆ ಗೆಲುವನ್ನು ತಂದಿಟ್ಟರು. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮತ್ತು ಶಿಖರ್ ಧವನ್ ಕೂಡ ಉತ್ತಮವಾಗಿ ಬ್ಯಾಟ್ ಬೀಸಿದರು.
ಆಸ್ಟ್ರೇಲಿಯಾ ನೀಡಿದ ಗುರಿಯನ್ನು ಬೆನ್ನಟ್ಟಿದ ಟೀಂ ಇಂಡಿಯಾಗೆ ಆರಂಭಿಕರಾದ ಕೆ.ಎಲ್. ರಾಹುಲ್ ಮತ್ತು ಶಿಖರ್ ಧವನ್ ಉತ್ತಮ ಅಡಿಪಾಯ ಹಾಕಿಕೊಟ್ಟರು. ಮೊದಲ ವಿಕೆಟ್‍ಗೆ ಈ ಜೋಡಿ ಅರ್ಧಶತಕದ ಜೊತೆಯಾಟವಾಡಿತು. ಈ ವೇಳೆ ಐದನೇ ಓವರ್ ಎರಡನೇ ಬಾಲಿಗೆ 22 ಬಾಲಿಗೆ 30 ರನ್ ಸಿಡಿಸಿದ್ದ ಕೆಎಲ್ ರಾಹುಲ್ ಅವರು ಆಂಡ್ರ್ಯೂ ಟೈ ಅವರಿಗೆ ಔಟ್ ಅದರು. ಈ ವೇಳೆ 9 ಓವರಿಗೆ ಇಂಡಿಯಾ ಒಂದು ವಿಕೆಟ್ ಕಳೆದುಕೊಂಡು 81 ರನ್ ಗಳಸಿತ್ತು.
ನಂತರ ನಾಯಕ ವಿರಾಟ್ ಕೊಹ್ಲಿ ಮತ್ತು ಶಿಖರ್ ಧವನ್ ಸ್ಫೋಟಕ ಆಟಕ್ಕೆ ಮುಂದಾದರು. ಆದರೆ ಅರ್ಧಶತಕ ಸಿಡಿಸಿ ಮುನ್ನುಗುತ್ತಿದ್ದ ಶಿಖರ್ ಧವನ್ ಅವರು 36 ಬಾಲಿಗೆ 52 ರನ್ ಸಿಡಿಸಿ ಔಟ್ ಅದರು. ಶಿಖರ್ ಧವನ್ ನಂತರ ಬಂದು ಭರ್ಜರಿಯಾಗಿ ಬ್ಯಾಟ್ ಬೀಸಿದ ಸಂಜು ಸ್ಯಾಮ್ಸನ್ 10 ಬಾಲಿಗೆ 15 ರನ್ ಹೊಡೆದು ಔಟ್ ಅದರು. ನಂತರ ವಿರಾಟ್ ಕೊಹ್ಲಿಯವರು ಕೂಡ 24 ಬಾಲಿಗೆ 40 ರನ್ ಸಿಡಿಸಿ ಪೆವಿಲಿಯನ್ ಸೇರಿದರು.
ಆ ನಂತರ ಜೊತೆಯಾದ ಶ್ರೇಯಸ್ ಅಯ್ಯರ್ ಮತ್ತು ಹಾರ್ದಿಕ್ ಪಾಂಡ್ಯ ತಾಳ್ಮೆಯ ಆಟಕ್ಕೆ ಮುಂದಾಗಿ ಭಾರತವನ್ನು ಗೆಲುವಿನ ಹಂತಕ್ಕೆ ತಂದರು. ಕೊನೆಯ ಎರಡು ಓವರಿನಲ್ಲಿ 26 ರನ್‍ಗಳ ಅವಶ್ಯಕತೆ ಇತ್ತು. ಆಗ ಹಾರ್ದಿಕ್ ಪಾಂಡ್ಯ ಎರಡು ಬೌಂಡರಿ ಸಿಡಿಸಿ 19ನೇ ಓವರಿನಲ್ಲಿ 12 ರನ್ ಬಂದಿತ್ತು. ಕೊನೆಯ ಓವರಿನಲ್ಲಿ 14 ರನ್ ಬೇಕಿತ್ತು. ಆ ಓವರಿನಲ್ಲಿ ಎರಡು ಸಿಕ್ಸರ್ ಸಿಡಿಸಿದ ಪಾಂಡ್ಯ ಇನ್ನೂ ಎರಡು ಬಾಲ್ ಉಳಿದಂತೆ ಭಾರತಕ್ಕೆ ಗೆಲುವು ತಂದಿತ್ತರು.