ರಾಯಚೂರು: ತಾಲೂಕಿನಲ್ಲಿ ಕೂಲಿ ಕೆಲಸಕ್ಕೆ ಹೋಗುತ್ತಿದ್ದ 22 ಬಾಲಕಾರ್ಮಿಕರನ್ನು ಮಕ್ಕಳ ರಕ್ಷಣಾ ಘಟಕ, ಆರ್‌ಟಿಓ ಸೇರಿ ಅಧಿಕಾರಿಗಳ ತಂಡ ರಕ್ಷಿಸಿದ್ದಾರೆ.
ಇಂದು ಅಧಿಕಾರಿಗಳು ರಾಯಚೂರು ತಾಲೂಕಿನ ವಿವಿಧೆಡೆ ದಾಳಿ ನಡೆಸಿದ್ದರು. ಆ ಸಂದರ್ಭದಲ್ಲಿ ಬಾಲಕಾರ್ಮಿಕರಾಗಿ ದುಡಿಯುತ್ತಿದ್ದ 22 ಮಕ್ಕಳನ್ನು ರಕ್ಷಿಸಿದ್ದಾರೆ. ಪ್ರಕರಣ ಸಂಬಂಧಿಸಿ ಕೂಲಿ ಕೆಲಸಕ್ಕೆ ಮಕ್ಕಳನ್ನು ಗೂಡ್ಸ್ ವಾಹನಗಳಲ್ಲಿ ಕರೆದೊಯ್ಯುತ್ತಿದ್ದ ಚಾಲಕರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.
ಹತ್ತಿ ಬಿಡಿಸುವುದು ಸೇರಿದಂತೆ ವಿವಿಧ ಕೃಷಿ ಚಟುವಟಿಕೆಗಳಿಗೆ ಮಕ್ಕಳನ್ನು ಜಮೀನುಗಳಿಗೆ ಕರೆದೊಯ್ಯಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದಾರೆ. ಈ ವೇಳೆ ನಾಲ್ಕು ಗೂಡ್ಸ್ ವಾಹನಗಳನ್ನು ಜಪ್ತಿ ಮಾಡಲಾಗಿದೆ. ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಮಂಜುನಾಥ ರೆಡ್ಡಿ, ಆರ್ ಟಿ ಓ ಕೃಷ್ಣ ಮೂರ್ತಿ, ಮಕ್ಕಳ ಸಹಾಯವಾಣಿ ಅಧಿಕಾರಿ ತಾಯಿ ರಾಜ್, ರವಿಕುಮಾರ್ ಸೇರಿ 5 ಅಧಿಕಾರಿಗಳು ದಾಳಿ ನಡೆಸಿದ ತಂಡದಲ್ಲಿದ್ದರು. ನಂತರ ರಕ್ಷಿಸಿದ ಬಾಲ ಕಾರ್ಮಿಕರನ್ನು ಶಿಕ್ಷಣ ಇಲಾಖೆಗೆ ಒಪ್ಪಿಸಿದ್ದಾರೆ. ಇದನ್ನೂ ಓದಿ: ಏರ್ ಇಂಡಿಯಾ ಹರಾಜು – ಟಾಟಾ ಡೀಲ್ ಪ್ರಶ್ನಿಸಿ ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿದ್ದ ಅರ್ಜಿ ವಜಾ