ಕಾಬೂಲ್: ಪಾಕಿಸ್ತಾನದಿಂದ (Pakistan) ಅಫ್ಘಾನಿಸ್ತಾನ ನಿರಾಶ್ರಿತರನ್ನು (Afghan Refugees) ಹೊತ್ತೊಯ್ಯುತ್ತಿದ್ದ ಟ್ರಕ್‌ವೊಂದು (Truck) ಪೂರ್ವ ಅಫ್ಘಾನಿಸ್ತಾನದ ಹೆದ್ದಾರಿಯಲ್ಲಿ ಪಲ್ಟಿಯಾದ ಪರಿಣಾಮ ಟ್ರಕ್‌ನಲ್ಲಿದ್ದ ಕನಿಷ್ಠ 22 ಮಂದಿ ಸಾವನ್ನಪ್ಪಿದ್ದು, 36 ಮಂದಿ ಗಾಯಗೊಂಡಿದ್ದಾರೆ.
ಪಾಕಿಸ್ತಾನದಲ್ಲಿ ನೆಲೆಸಿದ್ದ ಅಫ್ಘಾನ್ ನಿರಾಶ್ರಿತರನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ಜಲಾಲಾಬಾದ್ ಮತ್ತು ಕಾಬೂಲ್ ನಡುವಿನ ಹೆದ್ದಾರಿ ರಸ್ತೆಯಲ್ಲಿ ಪಲ್ಟಿಯಾಗಿದೆ. ಚಾಲಕ ನಿದ್ರೆಗೆ ಜಾರಿದ ಪರಿಣಾಮ ಟ್ರಕ್ ಹೆದ್ದಾರಿಯಲ್ಲಿ ಉರುಳಿ ಬಿದ್ದಿದೆ. ಈ ಭೀಕರ ಘಟನೆಯಲ್ಲಿ 10 ಮಂದಿ ಮಕ್ಕಳು, 36 ಮಂದಿ ಪುರುಷರು ಹಾಗೂ 5 ಮಂದಿ ಮಹಿಳೆಯರು ಸೇರಿ 22 ಮಂದಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ 36ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಲಗ್ಮನ್ ಪ್ರಾಂತ್ಯದ ರಾಜ್ಯಪಾಲರ ವಕ್ತಾರ ಅಬ್ದುಲ್ ಮಲಿಕ್ ನಿಯಾಜಯ್ ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಿಂದ ನಾಗ್ಪುರಕ್ಕೆ ತೆರಳುತ್ತಿದ್ದ ಇಂಡಿಗೋ ವಿಮಾನ ಹೈದರಾಬಾದ್‌ನಲ್ಲಿ ತುರ್ತು ಭೂಸ್ಪರ್ಶ
ಇತ್ತೀಚೆಗೆ ಪಾಕಿಸ್ತಾನ ಹಾಗೂ ಅಫ್ಘಾನಿಸ್ತಾನ ನಡುವಿನ ಸಂಬಂಧಗಳು ಹದಗೆಡುತ್ತಿದ್ದು, ಈ ಬೆನ್ನಲ್ಲೇ ಪಾಕಿಸ್ತಾನ ತನ್ನ ದೇಶದಲ್ಲಿನ ಅಫ್ಘಾನ್ ವಲಸಿಗರು ಮತ್ತು ನಿರಾಶ್ರಿತರ ಬಗ್ಗೆ ತಮ್ಮ ನಿಲುವನ್ನು ಕಠಿಣಗೊಳಿಸಿದ್ದಾರೆ. ಈ ಹಿನ್ನೆಲೆ ನಿರಾಶ್ರಿತ ಜನರು ಅಫ್ಘಾನಿಸ್ತಾನಕ್ಕೆ ಮರಳುತ್ತಿದ್ದಾರೆ. ಇದನ್ನೂ ಓದಿ: ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ
