ನವದೆಹಲಿ: ಕಳೆದ ಐದು ವರ್ಷಗಳಲ್ಲಿ ಕ್ರಿಮಿನಲ್ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಕ್ಕಾಗಿ ಒಟ್ಟು 22 ಭಾರತೀಯ ಪೊಲೀಸ್ ಸೇವೆ (IPS) ಅಧಿಕಾರಿಗಳ ಮೇಲೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಆರೋಪ ಹೊರಿಸಲಾಗಿದೆ ಎಂದು ಗೃಹ ಸಚಿವಾಲಯ ಬುಧವಾರ ತಿಳಿಸಿದೆ.
ಕಳೆದ ಐದು ವರ್ಷಗಳಲ್ಲಿ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣಗಳು ದಾಖಲಾಗಿರುವ ಐಪಿಎಸ್ ಅಧಿಕಾರಿಗಳ ಸಂಖ್ಯೆ ಕುರಿತು ರಾಜ್ಯಸಭೆಯಲ್ಲಿ ಸಂಸದರೊಬ್ಬರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕೇಂದ್ರ ಗೃಹ ಸಚಿವಾಲಯದ ರಾಜ್ಯ ಸಚಿವ ನಿತ್ಯಾನಂದ ರೈ ಅವರು, 2017 ರಿಂದ 2022 ಮಾರ್ಚ್ 30 ರವರೆಗೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ 22 ಐಪಿಎಸ್ ಅಧಿಕಾರಿಗಳ ವಿರುದ್ಧ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರದ ಮಾಜಿ ಸಚಿವ ಅನಿಲ್ ದೇಶಮುಖ್‍ರನ್ನು ವಶಕ್ಕೆ ಪಡೆದ ಸಿಬಿಐ
ಉತ್ತರ ಪ್ರದೇಶದಲ್ಲಿ ಪರಾರಿಯಾಗಿರುವ ಐಪಿಎಸ್ ಅಧಿಕಾರಿಗಳ ಸಂಖ್ಯೆ ಕುರಿತು ಕೇಳಿದಾಗ, ರಾಜ್ಯ ಸರ್ಕಾರ ನೀಡಿದ ಮಾಹಿತಿಯ ಪ್ರಕಾರ ಒಬ್ಬ ಐಪಿಎಸ್ ಅಧಿಕಾರಿಯನ್ನು ಪರಾರಿ ಎಂದು ಘೋಷಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ದೇಶದಲ್ಲಿ ಪೊಲೀಸ್ ಪಡೆಗಳ ನಡುವೆ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿರುವುದು ಸತ್ಯವೇ? ಅಂತಹ ಪ್ರವೃತ್ತಿಗೆ ಕಾರಣಗಳನ್ನು ಕಂಡುಹಿಡಿಯಲು ಅಧ್ಯಯನ ಕೈಗೊಳ್ಳಲಾಗಿದೆ ಎಂಬ ಪ್ರಶ್ನೆಯನ್ನು ಸಹ ಕೇಳಲಾಯಿತು. ಇದನ್ನೂ ಓದಿ: ಮೋದಿಯನ್ನು ಭೇಟಿಯಾದ ತೆಲಂಗಾಣ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್
ಪೊಲೀಸ್ ಪಡೆಗಳಲ್ಲಿನ ಅಪರಾಧ ಪ್ರಕರಣಗಳನ್ನು ದಾಖಲಿಸುವುದು ಪ್ರಾಥಮಿಕವಾಗಿ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಜವಾಬ್ದಾರಿಯಾಗಿದೆ ಎಂದು ರೈ ಸ್ಪಷ್ಟಪಡಿಸಿದ್ದಾರೆ.