ಬೆಂಗಳೂರು: ಭಾನುವಾರ ರಾತ್ರಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಇರುವ ಬ್ಯಾಗನ್ನು ಬೀಟ್‌ನಲ್ಲಿದ್ದ ಹೊಯ್ಸಳ(Hoysala) ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ.
ನಗರದ ಎಸ್‌ಪಿ ರಸ್ತೆಯಲ್ಲಿ ಹೊಯ್ಸಳ ಸಿಬ್ಬಂದಿ ಬೀಟ್‌ನಲ್ಲಿದ್ದ ವೇಳೆ ವ್ಯಕ್ತಿಯೊಬ್ಬ ಬ್ಯಾಗ್ ಹಿಡಿದು ಅನುಮಾನಾಸ್ಪದವಾಗಿ ಓಡಾಡುತ್ತಿದ್ದ. ಆತನ ನಡುವಳಿಕೆಯನ್ನು ಗಮನಿಸಿದ ಹೊಯ್ಸಳ ಪೊಲೀಸರು ಹಿಂಬಾಲಿಸಿ ಆತನನ್ನು ತಡೆದಿದ್ದಾರೆ.
Advertisement
Advertisement
ಈ ವೇಳೆ ಆತ ವಿನೋದ್ ಎಂದು ಹೇಳಿದ್ದಾನೆ. ಬ್ಯಾಗ್ ಪರಿಶೀಲನೆ ನಡೆಸಿದ ವೇಳೆ 22 ಲಕ್ಷ ರೂ. ನಗದು, 1 ಕೆಜಿ ಚಿನ್ನಾಭರಣ ಪತ್ತೆಯಾಗಿದೆ. ವಿಚಾರಣೆ ವೇಳೆ ಚೆನ್ನೈನಿಂದ ಚಿನ್ನ ಮತ್ತು ನಗದು ತಂದಿರುವ ಬಗ್ಗೆ ಮಾಹಿತಿ ನೀಡಿದ ವಿನೋದ್, ಇದನ್ನು ಕೊಟ್ಟವರು ಯಾರು ಎಂಬ ಪ್ರಶ್ನೆಗೆ ಉತ್ತರ ನೀಡಲಿಲ್ಲ. ಇದನ್ನೂ ಓದಿ: ಕರ್ನಾಟಕದಲ್ಲೀಗ ಲವ್ ಜಿಹಾದ್ ಹೋರಾಟದ ಕಾವು
Advertisement
Advertisement
ಮತ್ತಷ್ಟು ವಿಚಾರಣೆಗೆ ಒಳಪಡಿಸಿದಾಗ ಆತ ಬ್ಯಾಗ್ ಬಿಟ್ಟು ಪರಾರಿಯಾಗಿದ್ದಾನೆ. ಹವಾಲಾ(Hawala) ಮೂಲಕ ವ್ಯವಹಾರ ನಡೆಸುತ್ತಿರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು ತನಿಖೆ ಆರಂಭವಾಗಿದೆ
ಹೊಯ್ಸಳ ಸಿಬ್ಬಂದಿಯ ಕಾರ್ಯಕ್ಷಮತೆ ಬಗ್ಗೆ ಹಿರಿಯ ಅಧಿಕಾರಿಗಳ ಮೆಚ್ಚುಗೆ ವ್ಯಕ್ತವಾಗಿದ್ದು, ಎಸ್ ಜೆ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.